1. {#1ಯೆಹೋವನಿಗೂ ಆತನ ಜನರಿಗೂ ಇರುವ ವ್ಯಾಜ್ಯ } [QS]ಪ್ರವಾದಿಯಾದ ಮೀಕನು ಯೆಹೋವನಿಗೆ ಹೇಳುವುದನ್ನು ಕೇಳಿರಿ “ನೀನೆದ್ದು ಬೆಟ್ಟಗಳ ಮುಂದೆ ವ್ಯಾಜ್ಯ ಮಾಡು. [QE][QS]ನಿನ್ನ ಧ್ವನಿಯು ಗುಡ್ಡಗಳಿಗೆ ಕೇಳಿಸಲಿ [QE]
2. [QS]ಬೆಟ್ಟಗಳೇ ಯೆಹೋವನ ವ್ಯಾಜ್ಯವನ್ನು ಕೇಳಿರಿ. [QE][QS]ಭೂಮಿಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ. [QE][QS]ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ. [QE][QS]ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.” [QE]
3. [QS]“ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು? [QE][QS]ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? [QE][QS]ನನ್ನ ಮೇಲೆ ಸಾಕ್ಷಿಹೇಳು. [QE]
4. [QS]ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು. [QE][QS]ಮೋಶೆಯನ್ನೂ, ಆರೋನನನ್ನೂ ಮತ್ತು ಮಿರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು. [QE]
5. [QS]ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ [QE][QS]ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. [QE][QS]ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ [QE][QS][* ಶಿಟ್ಟೀಮ್ ಯೊರ್ದನಿನ ಪೂರ್ವ ದಂಡೆಯಲ್ಲಿ ಹಾಕಲ್ಪಟ್ಟಂಥ ಇಸ್ರಾಯೇಲರ ಕೊನೆಯ ಪಾಳೆಯವಾಗಿತ್ತು (ಯೆಹೋ. 3:1), ಮತ್ತು ಗಿಲ್ಗಾಲ್ ಪಶ್ಚಿಮ ದಂಡೆಯಲ್ಲಿ ವಾಗ್ದತ್ತ ದೇಶದಲ್ಲಿ ಹಾಕಲ್ಪಟ್ಟಂಥ ಅವರ ಮೊದಲ ಪಾಳೆಯವಾಗಿತ್ತು (ಯೆಹೋ. 4:19). ]ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ. [QE]
6. [QS]ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ? [QE][QS]ಯಾವುದನ್ನರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? [QE][QS]ಹೋಮದ ಪಶುಗಳನ್ನು ಅಥವಾ ಒಂದು ವರ್ಷದ ಕರುಗಳನ್ನು [QE][QS]ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ? [QE]
7. [QS]ಸಾವಿರಾರು ಟಗರುಗಳನ್ನೂ, [QE][QS]ಲಕ್ಷೋಪಲಕ್ಷ ತೈಲ ಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚುತ್ತಾನೆಯೇ? [QE][QS]ನನ್ನ ದ್ರೋಹದ ನಿಮಿತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ? [QE][QS]ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ? [QE]
8. [QS]ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. [QE][QS]ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, [QE][QS]ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು [QE][QS]ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು? [QE]
9. {#1ಯೆರೂಸಲೇಮಿನ ಭ್ರಷ್ಟಾಚಾರ } [QS]ಯೆಹೋವನ ನಾಮದಲ್ಲಿ ಭಯಭಕ್ತಿಯಿಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ [QE][QS]ಪಟ್ಟಣಕ್ಕೆ ಎಚ್ಚರಿಕೆ ನೀಡುವ ಯೆಹೋವನ ನುಡಿ. [QE][QS]ಬೀಸಿ ಬರುವ ಶಿಕ್ಷೆಯ ದಂಡಕ್ಕೆ ಎಚ್ಚರವಾಗಿರಿ. [QE][QS]ಅದನ್ನು ನೇಮಿಸಿದವನು ಯಾರೆಂದು ತಿಳಿದುಕೊಳ್ಳಿರಿ. [QE]
10. [QS]ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ ಮತ್ತು [QE][QS]ಅಸಹ್ಯಕರವಾದ ಕಿರಿಯಳತೆ ಇವು ಇನ್ನೂ ಸಿಕ್ಕುತ್ತವೆಯೋ? [QE]
11. [QS]ಕಳ್ಳ ತಕ್ಕಡಿಯೂ ಹಾಗು ಮೋಸದ ಕಲ್ಲಿನ ಚೀಲವೂ ಒಬ್ಬನಲ್ಲಿದ್ದರೆ ಅವನು ನಿರ್ದೋಷಿಯಲ್ಲವೆಂದು ತಿಳಿಯಲೋ? [QE]
12. [QS]ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು. [QE][QS]ಅದರ ನಿವಾಸಿಗಳು ಸುಳ್ಳುಗಾರರು. [QE][QS]ಅವರ ಬಾಯನಾಲಿಗೆಯು ಮೋಸಕರ. [QE]
13. [QS]ಆದಕಾರಣ ಯೆರೂಸಲೇಮೇ, ನಿನಗೆ ಕ್ರೂರವಾದ ಪೆಟ್ಟು ಹಾಕುವೆನು. [QE][QS]ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.[† ಹಾಳುಮಾಡುವೆನು. ಅಥವಾ ಹಾಳಾಗುವಂತೆ ಗಾಯಪಡಿಸುವೆನು. ] [QE]
14. [QS]ನೀನು ತಿಂದರೂ ನಿನಗೆ ತೃಪ್ತಿಯಾಗದು. [QE][QS]ಹಸಿವೆಯು ನಿನ್ನೊಳಗೆ ಇದ್ದೇ ಇರುವುದು. [QE][QS]ನೀನು ನಿನ್ನವರನ್ನು ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ. [QE][QS]ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು. [QE]
15. [QS]ನೀನು ಬಿತ್ತಿದರೂ ಕೊಯ್ಯುವುದಿಲ್ಲ. [QE][QS]ಎಣ್ಣೆಯ ಕಾಯಿಯನ್ನು ಜಜ್ಜಿದರೂ ಮೈಗೆ ಎಣ್ಣೆ ಹತ್ತಿಕೊಳ್ಳುವುದಿಲ್ಲ. [QE][QS]ದ್ರಾಕ್ಷಿಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. [QE]
16. [QS]ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. [QE][QS]ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. [QE][QS]ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. [QE][QS]ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.” [QE]