ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಮಿಕ
1. {#1ಇಸ್ರಾಯೇಲಿನ ಕೊರಗು } [QS]ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ. [QE][QS]ಮಾಗಿದ ಹಣ್ಣನ್ನು ಕೊಯ್ದು, ದ್ರಾಕ್ಷಿಯ ಹಕ್ಕಲನ್ನು ಆಯ್ದ ತೋಟದ ಸ್ಥಿತಿಗೆ ಬಂದಿದ್ದೇನೆ. [QE][QS]ತಿನ್ನುವುದಕ್ಕೆ ಗೊಂಚಲೇ ಇಲ್ಲ. [QE][QS]ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು. [QE]
2. [QS]ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. [QE][QS]ಜನರಲ್ಲಿ ಸತ್ಯವಂತರೇ ಇಲ್ಲ. [QE][QS]ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. [QE][QS]ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ. [QE]
3. [QS]ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. [QE][QS]ಪ್ರಭುವು ಧನವನ್ನು ಕೇಳುತ್ತಾನೆ. [QE][QS]ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. [QE][QS]ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. [QE][QS]ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ. [QE]
4. [QS]ಅವರಲ್ಲಿ ಉತ್ತಮನೂ ಮುಳ್ಳಿನ ಪೊದೆಗೆ ಸಮಾನ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ. [QE][QS]ನಿನ್ನ ಕಾವಲುಗಾರರು ಮುಂತಿಳಿಸಿದ ದಿನ ನಿನ್ನ ದಂಡನೆಯ ದಿನ ಬಂದಿದೆ. [QE][QS]ಈಗ ನಿನ್ನ ಜನರಿಗೆ ಭ್ರಾಂತಿ ಹಿಡಿಯುವುದು. [QE]
5. [QS]ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. [QE][QS]ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ. [QE]
6. [QS]ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ. [QE][QS]ಮಗಳು ತಾಯಿಗೆ ಎದುರೇಳುತ್ತಾಳೆ. [QE][QS]ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ. [QE][QS]ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು. [QE]
7. {#1ಇಸ್ರಾಯೇಲರ ಉದ್ಧಾರ } [QS]ನಾನಂತು ಯೆಹೋವನನ್ನು ಎದುರುನೋಡುವೆನು. [QE][QS]ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ. [QE][QS]ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು. [QE]
8. [QS]ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ. [QE][QS]ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕುಳಿತ್ತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು. [QE]
9. [QS]ನಾನು ಯೆಹೋವನಿಗೆ ಪಾಪ ಮಾಡಿದ್ದರಿಂದ ಆತನ ಕೋಪವನ್ನು ತಾಳಿಕೊಂಡಿರುವೆನು.[* ತಾಳಿಕೊಂಡಿರುವೆನು. ಅಥವಾ ತಲೆಯಲ್ಲಿ ಹೊತ್ತುಕೊಳ್ಳುವೆನು. ] [QE][QS]ಕಾಲಾನುಕಾಲಕ್ಕೆ ಆತನು ತನ್ನ ವ್ಯಾಜ್ಯವನ್ನು ನಿರ್ವಹಿಸಿ, ನನಗೆ ನ್ಯಾಯವನ್ನು ತೀರಿಸುವನು. [QE][QS]ನನ್ನನ್ನು ಬೆಳಕಿಗೆ ತರುವನು. ಆತನ ರಕ್ಷಣಾಧರ್ಮವನ್ನು ನೋಡುವೆನು. [QE]
10. [QS]“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು [QE][QS]ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. [QE][QS]ನಾನು ಅವರನ್ನು ಕಣ್ಣಾರೆ ನೋಡುವೆನು. [QE][QS]ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು. [QE]
11. [QS]ಆಹಾ, ನಿನ್ನ ಪೌಳಿಗೋಡೆಗಳನ್ನು ಕಟ್ಟುವ ದಿನವು ಬರುವುದು. [QE][QS]ಆ ದಿನದಲ್ಲಿ ನಿನ್ನ ಮೇರೆಯು ದೂರದ ತನಕ ವಿಸ್ತರಿಸಿಕೊಂಡಿರುವುದು. [QE]
12. [QS]ಅದೇ ದಿನದಲ್ಲಿ ನಿನ್ನ ಜನರು ಅಶ್ಶೂರದಿಂದಲೂ, [QE][QS]ಐಗುಪ್ತದ ಪಟ್ಟಣಗಳಿಂದಲೂ ನಿನ್ನ ಬಳಿಗೆ ಕೂಡಿ ಬರುವರು. [QE][QS]ಸಮುದ್ರದಿಂದ ಸಮುದ್ರದವರೆಗೆ, ಪರ್ವತದಿಂದ ಪರ್ವತದವರೆಗೆ ಅಂತು [QE][QS]ಐಗುಪ್ತದಿಂದ ಯೂಫ್ರೆಟಿಸ್ ನದಿಯವರೆಗೂ ಚದುರಿರುವ ನಿನ್ನ ಸಕಲ ಜನರು ನಿನ್ನನ್ನು ಸೇರುವರು. [QE]
13. [QS]ಆದರೆ ಅಷ್ಟರೊಳಗೆ ಈ ದೇಶವು [QE][QS]ತನ್ನ ನಿವಾಸಿಗಳ ನಿಮಿತ್ತ ಅವರ ದುಷ್ಕೃತ್ಯಗಳ ಫಲವಾಗಿ ಹಾಳುಬಿದ್ದಿರುವುದು. [QE]
14. {#1ದೇವರ ಕರುಣೆ } [QS]ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ [QE][QS]ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, [QE][QS]ನಿನ್ನ ಸ್ವತ್ತಾದ ಹಿಂಡನ್ನು ನಿನ್ನ ದಿವ್ಯಹಸ್ತದಿಂದ ಮೇಯಿಸು. [QE][QS]ಪೂರ್ವಕಾಲದಂತೆ ಬಾಷಾನಿನಲ್ಲಿಯೂ, ಗಿಲ್ಯಾದಿನಲ್ಲಿಯೂ ಮೇಯಲಿ. [QE]
15. [QS]ನೀನು ಐಗುಪ್ತದೇಶದೊಳಗಿಂದ ಪಾರಾಗಿ ಬಂದ ಕಾಲದಲ್ಲಿ [QE][QS]ನಾನು ತೋರಿಸಿದಂತೆ ಅದ್ಭುತಗಳನ್ನು ತೋರಿಸುವೆನು. [QE]
16. [QS]ಜನಾಂಗಗಳವರು ನೋಡಿ ತಮ್ಮ ಮಹಾ ಶಕ್ತಿಗೂ ನಾಚಿಕೆಪಡುವರು. [QE][QS]ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವರು. [QE][QS]ಅವರ ಕಿವಿ ಕೇಳದಿರುವುದು. [QE]
17. [QS]ಹಾವಿನಂತೆ ಧೂಳನ್ನು ನೆಕ್ಕುವರು. [QE][QS]ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು. [QE][QS]ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ, ಸೇವಿಸಿ ನಿನಗೆ ಭಯಪಡುವರು. [QE]
18. [QS]ನಿನಗೆ ಯಾವ ದೇವರು ಸಮಾನ? [QE][QS]ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, [QE][QS]ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. [QE][QS]ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. [QE][QS]ಕರುಣೆಯೇ ಆತನಿಗೆ ಇಷ್ಟ. [QE]
19. [QS]ಆತನು ಮತ್ತೊಮ್ಮೆ ನಮ್ಮನ್ನು ಕನಿಕರಿಸುವನು. [QE][QS]ನಮ್ಮ ಅಪರಾಧಗಳನ್ನು ಅಣಗಿಸುವವನು. [QE][QS]ದೇವರೇ, ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬೀಸಾಡಿಬಿಡುವಿ. [QE]
20. [QS]ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ [QE][QS]ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, [QE][QS]ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.[QE]
ಒಟ್ಟು 7 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 7 / 7
1 2 3 4 5 6 7
ಇಸ್ರಾಯೇಲಿನ ಕೊರಗು 1 ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ. ಮಾಗಿದ ಹಣ್ಣನ್ನು ಕೊಯ್ದು, ದ್ರಾಕ್ಷಿಯ ಹಕ್ಕಲನ್ನು ಆಯ್ದ ತೋಟದ ಸ್ಥಿತಿಗೆ ಬಂದಿದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು. 2 ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ. 3 ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ. 4 ಅವರಲ್ಲಿ ಉತ್ತಮನೂ ಮುಳ್ಳಿನ ಪೊದೆಗೆ ಸಮಾನ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ. ನಿನ್ನ ಕಾವಲುಗಾರರು ಮುಂತಿಳಿಸಿದ ದಿನ ನಿನ್ನ ದಂಡನೆಯ ದಿನ ಬಂದಿದೆ. ಈಗ ನಿನ್ನ ಜನರಿಗೆ ಭ್ರಾಂತಿ ಹಿಡಿಯುವುದು. 5 ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ. 6 ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ. ಮಗಳು ತಾಯಿಗೆ ಎದುರೇಳುತ್ತಾಳೆ. ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ. ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು. ಇಸ್ರಾಯೇಲರ ಉದ್ಧಾರ 7 ನಾನಂತು ಯೆಹೋವನನ್ನು ಎದುರುನೋಡುವೆನು. ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು. 8 ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ. ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕುಳಿತ್ತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು. 9 ನಾನು ಯೆಹೋವನಿಗೆ ಪಾಪ ಮಾಡಿದ್ದರಿಂದ ಆತನ ಕೋಪವನ್ನು ತಾಳಿಕೊಂಡಿರುವೆನು.* ತಾಳಿಕೊಂಡಿರುವೆನು. ಅಥವಾ ತಲೆಯಲ್ಲಿ ಹೊತ್ತುಕೊಳ್ಳುವೆನು. ಕಾಲಾನುಕಾಲಕ್ಕೆ ಆತನು ತನ್ನ ವ್ಯಾಜ್ಯವನ್ನು ನಿರ್ವಹಿಸಿ, ನನಗೆ ನ್ಯಾಯವನ್ನು ತೀರಿಸುವನು. ನನ್ನನ್ನು ಬೆಳಕಿಗೆ ತರುವನು. ಆತನ ರಕ್ಷಣಾಧರ್ಮವನ್ನು ನೋಡುವೆನು. 10 “ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು. 11 ಆಹಾ, ನಿನ್ನ ಪೌಳಿಗೋಡೆಗಳನ್ನು ಕಟ್ಟುವ ದಿನವು ಬರುವುದು. ಆ ದಿನದಲ್ಲಿ ನಿನ್ನ ಮೇರೆಯು ದೂರದ ತನಕ ವಿಸ್ತರಿಸಿಕೊಂಡಿರುವುದು. 12 ಅದೇ ದಿನದಲ್ಲಿ ನಿನ್ನ ಜನರು ಅಶ್ಶೂರದಿಂದಲೂ, ಐಗುಪ್ತದ ಪಟ್ಟಣಗಳಿಂದಲೂ ನಿನ್ನ ಬಳಿಗೆ ಕೂಡಿ ಬರುವರು. ಸಮುದ್ರದಿಂದ ಸಮುದ್ರದವರೆಗೆ, ಪರ್ವತದಿಂದ ಪರ್ವತದವರೆಗೆ ಅಂತು ಐಗುಪ್ತದಿಂದ ಯೂಫ್ರೆಟಿಸ್ ನದಿಯವರೆಗೂ ಚದುರಿರುವ ನಿನ್ನ ಸಕಲ ಜನರು ನಿನ್ನನ್ನು ಸೇರುವರು. 13 ಆದರೆ ಅಷ್ಟರೊಳಗೆ ಈ ದೇಶವು ತನ್ನ ನಿವಾಸಿಗಳ ನಿಮಿತ್ತ ಅವರ ದುಷ್ಕೃತ್ಯಗಳ ಫಲವಾಗಿ ಹಾಳುಬಿದ್ದಿರುವುದು. ದೇವರ ಕರುಣೆ 14 ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವತ್ತಾದ ಹಿಂಡನ್ನು ನಿನ್ನ ದಿವ್ಯಹಸ್ತದಿಂದ ಮೇಯಿಸು. ಪೂರ್ವಕಾಲದಂತೆ ಬಾಷಾನಿನಲ್ಲಿಯೂ, ಗಿಲ್ಯಾದಿನಲ್ಲಿಯೂ ಮೇಯಲಿ. 15 ನೀನು ಐಗುಪ್ತದೇಶದೊಳಗಿಂದ ಪಾರಾಗಿ ಬಂದ ಕಾಲದಲ್ಲಿ ನಾನು ತೋರಿಸಿದಂತೆ ಅದ್ಭುತಗಳನ್ನು ತೋರಿಸುವೆನು. 16 ಜನಾಂಗಗಳವರು ನೋಡಿ ತಮ್ಮ ಮಹಾ ಶಕ್ತಿಗೂ ನಾಚಿಕೆಪಡುವರು. ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವರು. ಅವರ ಕಿವಿ ಕೇಳದಿರುವುದು. 17 ಹಾವಿನಂತೆ ಧೂಳನ್ನು ನೆಕ್ಕುವರು. ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು. ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ, ಸೇವಿಸಿ ನಿನಗೆ ಭಯಪಡುವರು. 18 ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ. 19 ಆತನು ಮತ್ತೊಮ್ಮೆ ನಮ್ಮನ್ನು ಕನಿಕರಿಸುವನು. ನಮ್ಮ ಅಪರಾಧಗಳನ್ನು ಅಣಗಿಸುವವನು. ದೇವರೇ, ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬೀಸಾಡಿಬಿಡುವಿ. 20 ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.
ಒಟ್ಟು 7 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 7 / 7
1 2 3 4 5 6 7
×

Alert

×

Kannada Letters Keypad References