1. {ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದವರ ಪಟ್ಟಿ} PS ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.
|
3. ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ ಸಂಸ್ಥಾನ ಪ್ರಧಾನರು ಯಾರಾರೆಂದರೆ: ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರು, ಸೊಲೊಮೋನನ ಸೇವಕರ ವಂಶದವರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. PEPS
|
4. ಯೆರೂಸಲೇಮಿನಲ್ಲಿ, ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಲ್ಲಿ ಕೆಲವರು ವಾಸವಾಗಿದ್ದರು. ಯೆಹೂದ ಕುಲದವರಲ್ಲಿ: ಅತಾಯನು, ಇವನು ಉಜ್ಜೀಯನ ಮಗ; ಇವನು ಜೆಕರ್ಯನ ಮಗ; ಇವನು ಅಮರ್ಯನ ಮಗ; ಇವನು ಶೆಫಟ್ಯನ ಮಗ; ಇವನು ಮಹಲಲೇಲನ ಮಗ, ಇವನು ಪೆರೆಚ್ ಸಂತಾನದವನು.
|
5. ಇನ್ನೊಬ್ಬನು ಮಾಸೇಯ, ಇವನು ಬಾರೂಕನ ಮಗ; ಇವನು ಕೊಲ್ಹೋಜೆಯ ಮಗ; ಇವನು ಹಜಾಯನ ಮಗ; ಇವನು ಅದಾಯನ ಮಗ; ಇವನು ಯೋಯಾರೀಬನ ಮಗ; ಇವನು ಜೆಕರ್ಯನ ಮಗ, ಇವನು ಶೇಲಹನ ಸಂತಾನದವನು.
|
7. ಬೆನ್ಯಾಮೀನ್ ಕುಲದವರಲ್ಲಿ: ಸಲ್ಲು, ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ.
|
11. ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ, ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ, ದೇವಾಲಯದ ಅಧಿಪತಿಯೂ ಆದ ಸೆರಾಯ ಇವರು.
|
12. ಮತ್ತು ದೇವಾಲಯದ ಸೇವೆ ನಡೆಸುತ್ತಿದ್ದ ಇವರ ಬಂಧುಗಳು ಒಟ್ಟು ಎಂಟುನೂರ ಇಪ್ಪತ್ತೆರಡು ಮಂದಿ. ಇವರಲ್ಲದೆ ಅದಾಯನೆಂಬುವನು ಇನ್ನೊಬ್ಬನು. ಇವನು ಯೆರೋಹಾಮನ ಮಗ; ಇವನು ಪೆಲಲ್ಯನ ಮಗ; ಇವನು ಅಮ್ಚೀಯನ ಮಗ; ಇವನು ಜೆಕರ್ಯನ ಮಗ; ಇವನು ಪಷ್ಹೂರನ ಮಗ; ಇವನು ಮಲ್ಕೀಯನ ಮಗ.
|
13. ಗೋತ್ರಪ್ರಧಾನರಾದ ಈ ಅದಾಯನ ಬಂಧುಗಳು ಇನ್ನೂರ ನಲ್ವತ್ತೆರಡು ಮಂದಿ. ಅಮಷ್ಷೈ ಎಂಬುವನು ಮತ್ತೊಬ್ಬನು. ಇವನು ಅಜರೇಲನ ಮಗ; ಇವನು ಅಹಜೈಯನ ಮಗ; ಇವನು ಮೆಷಿಲ್ಲೇಮೋತನ ಮಗ; ಇವನು ಇಮ್ಮೇರನ ಮಗ.
|
14. ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕನು. PEPS
|
17. ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಆಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ದ ಎಂಬುವವರು,
|
19. ದ್ವಾರಪಾಲಕರಲ್ಲಿ; ಅಕ್ಕೂಬ್, ಟಲ್ಮೋನರೂ ಮತ್ತು ಬಾಗಿಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ ಒಟ್ಟು ನೂರ ಎಪ್ಪತ್ತೆರಡು ಮಂದಿ. PEPS
|
20. ಉಳಿದ ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸಮಾಡುತ್ತಿದ್ದರು.
|
22. ದೇವಾಲಯದ ಕೆಲಸದ ಸಂಬಂಧವಾಗಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯನ ಮಗನೂ, ಹಷಬ್ಯನ ಮೊಮ್ಮಗನೂ, ಮತ್ತನ್ಯನ ಮರಿಮಗನೂ, ಮೀಕನ ವಂಶದವನಾದ ಆದ ಉಜ್ಜೀಯು ಯೆರೂಸಲೇಮಿನಲ್ಲಿದ್ದ ಲೇವಿಯರ ನಾಯಕನಾಗಿದ್ದನು.
|
24. ಮೆಷೇಜಬೇಲನ ಮಗನೂ, ಜೆರಹನ ಸಂತಾನದವನೂ, ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರ್ಯಭಾರಿಯಾಗಿದ್ದನು. PEPS
|
25. ಭೂಸ್ವಾಸ್ಥ್ಯವಿದ್ದವರು ವಾಸಿಸುತ್ತಿದ್ದ ಊರುಗಳು: ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್ ಇವುಗಳೂ ಮತ್ತು ಇವುಗಳ ಗ್ರಾಮಗಳು,
|
30. ಜನೋಹ, ಅದುಲ್ಲಾಮ್ ಇವುಗಳ ಮತ್ತು ಇವುಗಳ ಗ್ರಾಮಗಳು ಮತ್ತು ಲಾಕೀಷ್ ಇದರ ಪ್ರಾಂತ್ಯಗಳು, ಅಜೇಕವೂ ಅದರ ಗ್ರಾಮಗಳು ಯೆಹೂದ ಕುಲದವರ ನಿವಾಸ ಸ್ಥಾನಗಳಾಗಿದ್ದವು. ಅವರು ಬೇರ್ಷೆಬದಿಂದ ಹಿನ್ನೋಮ್ ಕಣಿವೆಯವರೆಗೂ ವಾಸಮಾಡುತ್ತಿದ್ದರು. PEPS
|