1. ಗೋಡೆಯನ್ನು ಕಟ್ಟಿ ಮುಗಿಸಿದ ನಂತರ ನಾನು ಬಾಗಿಲುಗಳನ್ನು ಇರಿಸಿದೆನು; ದ್ವಾರಪಾಲಕರನ್ನೂ, ಗಾಯಕರನ್ನೂ, ಲೇವಿಯರನ್ನೂ ನೇಮಿಸಲಾಯಿತು.
|
2. ಆನಂತರ ನನ್ನ ತಮ್ಮನಾದ ಹನಾನಿಗೂ, ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ, ಕೋಟೆಯ ಅಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆನು.
|
3. ನಾನು ಅವರಿಗೆ, “ಬಿಸಿಲೇರುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಾಗಲೇ ಬಾಗಿಲುಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ ಯೆರೂಸಲೇಮಿನ ನಿವಾಸಿಗಳೊಳಗೆ ಕಾವಲುಗಾರರನ್ನು ಗೊತ್ತುಮಾಡಿರಿ, ಅವರಲ್ಲಿ ಕೆಲವರು ತಮ್ಮ ಕಾವಲಿನ ಸ್ಥಳಗಳಲ್ಲಿಯೂ, ಇನ್ನು ಕೆಲವರನ್ನು ಅವರ ಮನೆಯ ಎದುರಿನಲ್ಲಿಯೂ ಕಾವಲಿರುವಂತೆ ನೇಮಿಸಬೇಕು” ಎಂದು ಆಜ್ಞಾಪಿಸಿದೆನು. PS
|
4. {ಸೆರೆವಾಸದಿಂದ ಹಿಂದಿರುಗಿದವರ ಪಟ್ಟಿ} PS ಪಟ್ಟಣವು ವಿಸ್ತಾರವಾಗಿದ್ದರೂ ಅದರೊಳಗೆ ಬಹಳ ಸ್ವಲ್ಪ ಜನರು ಮಾತ್ರ ಇದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.
|
5. ಹೀಗಿರಲಾಗಿ ನಾನು ನನ್ನ ದೇವರ ಪ್ರೇರಣೆಯಿಂದ ಗಣ್ಯರನ್ನು, ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಸಾಧಾರಣ ಜನರನ್ನೂ ಜನಗಣತಿಗಾಗಿ ಸಭೆಸೇರಿಸಿದನು. ಆಗ ಯೆರೂಸಲೇಮಿಗೆ ಮೊದಲು ಬಂದವರ ಹೆಸರುಗಳ ಪಟ್ಟಿಯು ನನಗೆ ಸಿಕ್ಕಿತು. ಅದರಲ್ಲಿ ಬರೆದಿದ್ದೇನೆಂದರೆ,
|
6. ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಸೆರೆಯಾಗಿ ಒಯ್ಯಲ್ಪಟ್ಟವರು ಹಿಂತಿರುಗಿ ತಮ್ಮ ಸ್ವದೇಶವಾದ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ, ಯೆರೂಸಲೇಮಿಗೂ ಹಿಂತಿರುಗಿದರು.
|
7. ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ. ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ ಎಂಬ ನಾಯಕರೊಡನೆ ತಿರುಗಿ ಬಂದ ಇಸ್ರಾಯೇಲರು ಯಾರೆಂದರೆ:
|
61. ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಆದ್ದೋನ್ ಮತ್ತು ಇಮ್ಮೇರ್, ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರಗಳ ವಂಶಾವಳಿಗಳನ್ನು ತೋರಿಸಿ ತಾವು ಇಸ್ರಾಯೇಲರೆಂಬುದನ್ನು ಸ್ಥಾಪಿಸಲಾರದವರಾದ,
|
63. ಯಾಜಕರಲ್ಲಿ: ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯ ದಾಖಲೆ ತೋರಿಸಲಾರದೆ ಹೋದರು. ಬರ್ಜಿಲ್ಲೈ ಎಂಬುವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನು ಇಟ್ಟುಕೊಂಡಿದ್ದನು.
|
64. ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅವರನ್ನು ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು.
|
65. * ವಿಮೋ 28:30 ನೋಡಿರಿ. ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ಆಜ್ಞಾಪಿಸಿದನು.
|
67. ಈ ಸಂಖ್ಯೆಯಲ್ಲಿ ಲೆಕ್ಕಿಸಲ್ಪಡದ ಅವರ ಸೇವಕ ಸೇವಕಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ. ಅವರ ಗಾಯಕರೂ ಗಾಯಕಿಯರೂ ಇನ್ನೂರ ನಲ್ವತ್ತೈದು ಮಂದಿ.
|
68. ಅವರಿಗೆ ಏಳು ನೂರ ಮೂವತ್ತಾರು ಕುದುರೆಗಳೂ, ಇನ್ನೂರ ನಲ್ವತ್ತೈದು ಹೇಸರಗತ್ತೆಗಳೂ † ಇನ್ನೂರ ನಲ್ವತ್ತೈದು ಹೇಸರಗತ್ತೆಗಳೂ ಈ ವಾಕ್ಯವು ಇಬ್ರಿಯ ಹಸ್ತಪ್ರತಿಗಳಲ್ಲಿ ಅಥವಾ ಸುರುಳಿಗಳಲ್ಲಿ ಇಲ್ಲ. ,
|
70. ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ‡ ಸಾವಿರ ಬಂಗಾರದ ನಾಣ್ಯಗಳು, ಅಂದರೆ 8.5 ಕಿಲೋಗ್ರಾಂ ಬಂಗಾರ. ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.
|
71. ಬೇರೆ ಕೆಲವು ಮಂದಿ ಗೋತ್ರಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, § ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಅಂದರೆ 170 ಕಿಲೋಗ್ರಾಂ ಬಂಗಾರ. ಒಂದು ಲಕ್ಷದ ಹತ್ತು ಸಾವಿರ ತೊಲಾ ಬೆಳ್ಳಿ;
|
72. ಉಳಿದ ಜನರು ಕೊಟ್ಟದ್ದು ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, * ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಅಂದರೆ 170 ಕಿಲೋಗ್ರಾಂ ಬಂಗಾರ. ಒಂದು ಲಕ್ಷ ತೊಲಾ ಬೆಳ್ಳಿ † ಒಂದು ಲಕ್ಷ ತೊಲಾ ಬೆಳ್ಳಿ ಅಂದರೆ 1,100 ಕಿಲೋಗ್ರಾಂ ಬೆಳ್ಳಿ. , ಅರುವತ್ತೇಳು ಯಾಜಕವಸ್ತ್ರಗಳನ್ನು ನೀಡಿದರು. PEPS
|
73. ಹೀಗೆ ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಸಾಧಾರಣ ಜನರು ಸೇರಿದವರು, ದೇವಾಲಯದ ಸೇವಕರು ಅಂತೂ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸ ಮಾಡತೊಡಗಿದರು. PE
|