2. “ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.
|
6. ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು.
|
9. ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.
|
10. ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.” PS
|
11. {ಇಸ್ರಾಯೇಲ್ಯರು ಸೀನಾಯಿ ಅರಣ್ಯವನ್ನು ಬಿಟ್ಟುಹೊರಟ್ಟಿದ್ದು} PS ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.
|
12. ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.
|
14. ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.
|
18. ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಶೆದೇಯೂರನ ಮಗನಾದ ಎಲೀಚೂರನು.
|
21. ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು. PEPS
|
22. ಆ ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು.
|
25. ಆ ಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನಾಗಿ ಇದ್ದವನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು.
|
29. {ಯೆಹೋವನ ಮಂಜೂಷವು ಮುಂದಾಗಿ ಹೋದದ್ದು} PS ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು. PEPS
|
30. ಆದರೆ ಹೋಬಾಬನು ಮೋಶೆಗೆ, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿದನು. PEPS
|
31. ಅದಕ್ಕೆ ಮೋಶೆಯು ಉತ್ತರವಾಗಿ, “ನಮ್ಮನ್ನು ಬಿಟ್ಟು ಹೋಗಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ಗೊತ್ತಿದೆ. ಆದುದರಿಂದ ನೀನು ನಮಗೆ ಕಣ್ಣಾಗಿರಬೇಕು.
|
32. ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು” ಎಂದು ಹೇಳಿದನು. PEPS
|
33. ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.
|
35. ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ,
“ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು. PEPS |