1. {ಮಿರ್ಯಾಮಳಿಗೆ ಉಂಟಾದ ತೊನ್ನು} PS ಮೋಶೆ ಕೂಷ್ ದೇಶದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಆ ಕಾರಣಕ್ಕಾಗಿ ಮಿರ್ಯಾಮಳೂ ಹಾಗೂ ಆರೋನನೂ ಅವನಿಗೆ ವಿರುದ್ಧವಾಗಿ ಮಾತನಾಡಿದರು.
|
2. ಅವರು, “ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತನಾಡುತ್ತಾನೋ? ನಮ್ಮ ಮೂಲಕ ಆತನು ಮಾತನಾಡುವುದಿಲ್ಲವೇ?” ಎಂದು ಹೇಳಿಕೊಂಡರು. ಅವರು ಆಡಿದ ಮಾತು ಯೆಹೋವನಿಗೆ ಕೇಳಿಸಿತು.
|
4. ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ, ಆರೋನ್ ಮತ್ತು ಮಿರ್ಯಾಮರಿಗೆ, “ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕು” ಎಂದು ಆಜ್ಞಾಪಿಸಿದನು. ಆಗ ಆ ಮೂವರು ಹೊರಗೆ ಬಂದರು.
|
5. ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನ್ನು ಮತ್ತು ಮಿರ್ಯಾಮಳನ್ನು ಹತ್ತಿರಕ್ಕೆ ಕರೆದನು. ಅವರು ಮುಂದೆ ಬಂದರು. PEPS
|
6. ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ.
ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು. |
8. ನಾನು ಅವನ ಸಂಗಡ ಗುಪ್ತವಾಗಿ ಅಲ್ಲ,
ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು. PEPS |
10. ಆ ಮೇಘವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು.
|
11. ಆಗ ಆರೋನನು ಮೋಶೆಗೆ, “ನನ್ನ ಒಡೆಯನೇ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದೆವು. ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
|
14. ಅದಕ್ಕೆ ಯೆಹೋವನು ಮೋಶೆಗೆ, “ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು” ಎಂದು ಉತ್ತರಕೊಟ್ಟನು.
|
15. ಹಾಗೆಯೇ ಮಿರ್ಯಾಮಳು ಏಳು ದಿನಗಳವರೆಗೆ ಪಾಳೆಯದ ಹೊರಗೆ ಇರಬೇಕಾಯಿತು. ಆಕೆಯನ್ನು ತಿರುಗಿ ಸೇರಿಸಿಕೊಳ್ಳುವ ವರೆಗೆ ಇಸ್ರಾಯೇಲರು ಪ್ರಯಾಣಮಾಡಲಿಲ್ಲ.
|