2. “ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ನೀನು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳುಹಿಸಬೇಕು” ಎಂದು ಆಜ್ಞಾಪಿಸಿದನು. PEPS
|
16. ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.
|
17. ಕಾನಾನ್ ದೇಶದಲ್ಲಿ ಸಂಚರಿಸಿ ನೋಡುವುದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.
|
20. ಭೂಮಿಯು ಸಾರವಾದುದೋ ಅಥವಾ ನಿಸ್ಸಾರವಾದುದೋ, ಮರಗಳುಳ್ಳದ್ದೋ ಅಥವಾ ಬಯಲುಪ್ರದೇಶವೋ ಎಂದು ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ನೀವು ಧೈರ್ಯವುಳ್ಳವರಾಗಿದ್ದು ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಬೇಕು” ಎಂದು ಹೇಳಿದನು. ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು. PEPS
|
21. ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.
|
22. ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.
|
23. ಅವರು ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಾಲತೆಯಿಂದ ಒಂದೇ ಗೊಂಚಲುಳ್ಳ ಕೊಂಬೆಯನ್ನು ಕೊಯ್ದರು; ಇಬ್ಬರು ಅದನ್ನು ಅಡ್ಡಕೋಲಿನಿಂದ ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಮತ್ತು ಅಂಜೂರದ ಹಣ್ಣುಗಳನ್ನೂ ತಂದರು.
|
24. ಇಸ್ರಾಯೇಲರು ಅಲ್ಲಿ ಆ ದ್ರಾಕ್ಷಿಯ ಗೊಂಚಲನ್ನು ಕೊಯ್ದದ್ದರಿಂದಲೇ ಆ ಸ್ಥಳಕ್ಕೆ “ * ದ್ರಾಕ್ಷಿಯ ಗೊಂಚಲು. ಎಷ್ಕೋಲ್” ಎಂದು ಹೆಸರು ಉಂಟಾಯಿತು. PS
|
26. ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.
|
27. ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ನಿಜವಾಗಿಯೂ † ಬಹಳಷ್ಟು ಫಲವತ್ತಾದ ದೇಶ. ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.
|
28. ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು: ಅವರಿರುವ ಪಟ್ಟಣಗಳು ದೊಡ್ಡದಾಗಿಯೂ, ಕೋಟೆ ಕೊತ್ತಲುಗಳುಳ್ಳದ್ದಾಗಿಯೂ ಇದೆ. ಅದಲ್ಲದೆ ಅಲ್ಲಿ ಉನ್ನತ ಪುರುಷರನ್ನು ನೋಡಿದೆವು.
|
29. ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರು, ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ” ಎಂದು ತಿಳಿಸಿದರು. PEPS
|
30. ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿದರು. ಕಾಲೇಬನು ಅವರನ್ನು ಸುಮ್ಮನಿರಿಸಿ, “ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ” ಎಂದು ಹೇಳಿದನು.
|
31. ಆದರೆ ಅವನ ಜೊತೆಯಲ್ಲಿ ಹೋದವರು, “ಆ ಜನರು ನಮಗಿಂತ ಬಲಿಷ್ಠರು; ಅವರನ್ನು ಜಯಿಸಲು ನಮಗೆ ಶಕ್ತಿಸಾಲುವುದಿಲ್ಲ” ಎಂದು ಹೇಳಿದರು. PEPS
|
32. ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು.
|
33. ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ‡ ನೆಫೀಲಿಯ ರಾಕ್ಷಸಾಕಾರದವರು. ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು. PE
|