ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಅರಣ್ಯಕಾಂಡ
1. {ಯೆಹೋವನು ಆರೋನನ ಕೋಲನ್ನು ಚಿಗುರಿಸಿದ್ದು} [PS] ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
2. “ನೀನು ಇಸ್ರಾಯೇಲರ ಸಂಗಡ ಮಾತನಾಡಿ, ‘ಅವರ ಪೂರ್ವಿಕರ ಒಂದೊಂದು ಕಾಲದ ಅಧಿಪತಿಯಿಂದ ಗೋತ್ರಗಳ ಪ್ರಕಾರವಾಗಿ ಒಂದೊಂದು ಕೋಲುಗಳನ್ನು ತೆಗೆದುಕೊಳ್ಳಬೇಕು. ಗೋತ್ರಗಳ ಪ್ರಕಾರವಾಗಿ ಒಬ್ಬೊಬ್ಬ ಪ್ರಧಾನರ ಹೆಸರಿನಲ್ಲಿ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಅವರ ಹೆಸರನ್ನು ಬರೆಯಿಸಬೇಕು.
3. ಲೇವಿ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು ಏಕೆಂದರೆ ಅವರ ಪೂರ್ವಿಕರ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.
4. ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ [* ಮಂಜೂಷದ ಪೆಟ್ಟಿಗೆ, ವಿಮೋ 25:22; 32:15.] ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.
5. ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’ ” ಎಂದನು. [PE][PS]
6. ಅದಕ್ಕೆ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.
7. ಮೋಶೆ ಆ ಕೋಲುಗಳನ್ನು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇಟ್ಟನು.
8. ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು!
9. ಮೋಶೆ ಆ ಕೋಲುಗಳನ್ನೆಲ್ಲಾ ಯೆಹೋವನ ಸನ್ನಿಧಿಯಿಂದ ಇಸ್ರಾಯೇಲರ ಬಳಿಗೆ ತಂದು ತೋರಿಸಿದನು. ಅವರು ನೋಡಿ ತಮ್ಮತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು. [PE][PS]
10. ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ತಿರುಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡು” ಎಂದು ಆಜ್ಞಾಪಿಸಿದನು.
11. ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು. [PE][PS]
12. ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.
13. ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು?” ಎಂದು ಕೇಳಿದರು. [PE]

ಟಿಪ್ಪಣಿಗಳು

No Verse Added

ಒಟ್ಟು 36 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 17 / 36
ಅರಣ್ಯಕಾಂಡ 17:79
ಯೆಹೋವನು ಆರೋನನ ಕೋಲನ್ನು ಚಿಗುರಿಸಿದ್ದು 1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, 2 “ನೀನು ಇಸ್ರಾಯೇಲರ ಸಂಗಡ ಮಾತನಾಡಿ, ‘ಅವರ ಪೂರ್ವಿಕರ ಒಂದೊಂದು ಕಾಲದ ಅಧಿಪತಿಯಿಂದ ಗೋತ್ರಗಳ ಪ್ರಕಾರವಾಗಿ ಒಂದೊಂದು ಕೋಲುಗಳನ್ನು ತೆಗೆದುಕೊಳ್ಳಬೇಕು. ಗೋತ್ರಗಳ ಪ್ರಕಾರವಾಗಿ ಒಬ್ಬೊಬ್ಬ ಪ್ರಧಾನರ ಹೆಸರಿನಲ್ಲಿ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಅವರ ಹೆಸರನ್ನು ಬರೆಯಿಸಬೇಕು. 3 ಲೇವಿ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು ಏಕೆಂದರೆ ಅವರ ಪೂರ್ವಿಕರ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು. 4 ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ * ಮಂಜೂಷದ ಪೆಟ್ಟಿಗೆ, ವಿಮೋ 25:22; 32:15. ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು. 5 ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’ ” ಎಂದನು. 6 ಅದಕ್ಕೆ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು. 7 ಮೋಶೆ ಆ ಕೋಲುಗಳನ್ನು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇಟ್ಟನು. 8 ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು! 9 ಮೋಶೆ ಆ ಕೋಲುಗಳನ್ನೆಲ್ಲಾ ಯೆಹೋವನ ಸನ್ನಿಧಿಯಿಂದ ಇಸ್ರಾಯೇಲರ ಬಳಿಗೆ ತಂದು ತೋರಿಸಿದನು. ಅವರು ನೋಡಿ ತಮ್ಮತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು. 10 ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ತಿರುಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡು” ಎಂದು ಆಜ್ಞಾಪಿಸಿದನು. 11 ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು. 12 ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ. 13 ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು?” ಎಂದು ಕೇಳಿದರು.
ಒಟ್ಟು 36 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 17 / 36
Common Bible Languages
West Indian Languages
×

Alert

×

kannada Letters Keypad References