ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಅರಣ್ಯಕಾಂಡ
1. {#1ಯಾಜಕರ ಮತ್ತು ಲೇವಿಯರ ಕರ್ತವ್ಯ } [PS]ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.
2. ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.
3. ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.
4. ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು.
5. ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.
6. ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು.
7. ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು. [PE]
8. {#1ಯಾಜಕರಿಗಾಗಿ ಮತ್ತು ಲೇವಿಯರಿಗಾಗಿ ಕಾಣಿಕೆಗಳು } [PS]ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು.
9. ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.
10. ನೀವು [* ಅಥವಾ ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು. ]ಮಹಾಪರಿಶುದ್ಧವಾದ ಒಂದು ಸ್ಥಳದಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು. [PE]
11. [PS]“ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.
12. ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ.
13. ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.
14. ಕೇವಲ ಯೆಹೋವನಿಗೋಸ್ಕರ ಇರುವುದಕ್ಕೆ ಇಸ್ರಾಯೇಲರು ಹರಕೆಮಾಡಿ ಸಮರ್ಪಿಸುವುದೆಲ್ಲವೂ ನಿನಗೆ ಸೇರಬೇಕು.
15. ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲಮಕ್ಕಳಿಗೂ, ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.
16. ಹೀಗೆ ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ನೀವು ಗೊತ್ತು ಮಾಡಿದ ಈಡನ್ನು ದೇವರ ಸೇವೆಗೆ ನೇಮಕವಾದ [† 55 ಗ್ರಾಂ ಬೆಳ್ಳಿ. ]ಇಪ್ಪತ್ತು ಗೇರಾ ತೂಕದ ಶೆಕೆಲ್ ಪ್ರಕಾರ ಐದು ಶೆಕೆಲ್ ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು. [PE]
17. [PS]“ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವುದರಿಂದ ಅವುಗಳನ್ನು ಬಿಡಬಾರದು. ಅವುಗಳ ರಕ್ತವನ್ನು ಯಜ್ಞವೇದಿಗೆ ಚಿಮುಕಿಸಿಬೇಕು, ಅವುಗಳ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.
18. ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು.
19. ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಬೇಕು” ಎಂದು ಹೇಳಿದನು.
20. ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ. [PE]
21. {#1ಲೇವಿಯರ ಪಾಲು } [PS]“ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.
22. ಇನ್ನು ಮುಂದೆ ಇಸ್ರಾಯೇಲರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಬಾರದು, ಬಂದರೆ ಅವರು ಆ ದೋಷದಿಂದ ಸತ್ತುಹೋಗುವರು.
23. ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವತ್ತು ಇರುವುದಿಲ್ಲ.
24. ಇಸ್ರಾಯೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ಸ್ವತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ಲೇವಿಯರಿಗೆ ‘ಇತರ ಇಸ್ರಾಯೇಲರೊಂದಿಗೆ ಪಾಲು ದೊರೆಯುವುದಿಲ್ಲ’ ” ಎಂದು ಹೇಳಿದ ಮಾತಿಗೆ ಇದೇ ಕಾರಣ. [PE]
25. [PS]ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
26. “ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.
27. ನೀವು ಹೀಗೆ ಸಮರ್ಪಿಸಿದ ಹತ್ತನೆಯ ಒಂದು ಭಾಗದ ಕಣದಲ್ಲಿನ ಧಾನ್ಯವನ್ನೂ, ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಮಾಂಶವೆಂದು ಪರಿಗಣಿಸಲ್ಪಡುವುದು.
28. ಇಸ್ರಾಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.
29. ನಿಮಗೆ ಕೊಡಲ್ಪಡುವ ಸಕಲ ಪದಾರ್ಥಗಳಲ್ಲಿಯೂ ನೀವು ಉತ್ತಮ ಭಾಗವನ್ನೇ ದೇವರ ವಸ್ತುವಾಗುವುದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು’
30. ಆದುದರಿಂದ ನೀನು ಲೇವಿಯರಿಗೆ ಹೀಗೆ ಹೇಳಬೇಕು, ‘ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಉಳಿದದ್ದನ್ನು ಕಣದಲ್ಲಿನ ದವಸದ ಹಾಗೂ, ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ಉಪಯೋಗಿಸಿಕೊಳ್ಳಬಹುದು.
31. ನೀವೂ, ನಿಮ್ಮ ಮನೆಯವರೂ ಅದನ್ನು ಎಲ್ಲಾ ಸ್ಥಳಗಳಲ್ಲಿ ಊಟಮಾಡಬಹುದು. ನೀವು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ದೊರೆಯುವ ಪ್ರತಿಫಲ.
32. ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ಉಳಿದ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ದೇವರ ವಸ್ತುಗಳನ್ನು ಅಪವಿತ್ರಮಾಡಿದರೆ ನೀವು ಸಾಯುವಿರಿ’ ” ಎಂದನು. [PE]
ಒಟ್ಟು 36 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 18 / 36
ಯಾಜಕರ ಮತ್ತು ಲೇವಿಯರ ಕರ್ತವ್ಯ 1 ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು. 2 ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು. 3 ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ. 4 ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು. 5 ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು. 6 ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. 7 ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು. ಯಾಜಕರಿಗಾಗಿ ಮತ್ತು ಲೇವಿಯರಿಗಾಗಿ ಕಾಣಿಕೆಗಳು 8 ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು. 9 ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು. 10 ನೀವು * ಅಥವಾ ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು. ಮಹಾಪರಿಶುದ್ಧವಾದ ಒಂದು ಸ್ಥಳದಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು. 11 “ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು. 12 ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ. 13 ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು. 14 ಕೇವಲ ಯೆಹೋವನಿಗೋಸ್ಕರ ಇರುವುದಕ್ಕೆ ಇಸ್ರಾಯೇಲರು ಹರಕೆಮಾಡಿ ಸಮರ್ಪಿಸುವುದೆಲ್ಲವೂ ನಿನಗೆ ಸೇರಬೇಕು. 15 ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲಮಕ್ಕಳಿಗೂ, ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು. 16 ಹೀಗೆ ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ನೀವು ಗೊತ್ತು ಮಾಡಿದ ಈಡನ್ನು ದೇವರ ಸೇವೆಗೆ ನೇಮಕವಾದ 55 ಗ್ರಾಂ ಬೆಳ್ಳಿ. ಇಪ್ಪತ್ತು ಗೇರಾ ತೂಕದ ಶೆಕೆಲ್ ಪ್ರಕಾರ ಐದು ಶೆಕೆಲ್ ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು. 17 “ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವುದರಿಂದ ಅವುಗಳನ್ನು ಬಿಡಬಾರದು. ಅವುಗಳ ರಕ್ತವನ್ನು ಯಜ್ಞವೇದಿಗೆ ಚಿಮುಕಿಸಿಬೇಕು, ಅವುಗಳ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು. 18 ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು. 19 ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಬೇಕು” ಎಂದು ಹೇಳಿದನು. 20 ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ. ಲೇವಿಯರ ಪಾಲು 21 “ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ. 22 ಇನ್ನು ಮುಂದೆ ಇಸ್ರಾಯೇಲರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಬಾರದು, ಬಂದರೆ ಅವರು ಆ ದೋಷದಿಂದ ಸತ್ತುಹೋಗುವರು. 23 ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವತ್ತು ಇರುವುದಿಲ್ಲ. 24 ಇಸ್ರಾಯೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ಸ್ವತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ಲೇವಿಯರಿಗೆ ‘ಇತರ ಇಸ್ರಾಯೇಲರೊಂದಿಗೆ ಪಾಲು ದೊರೆಯುವುದಿಲ್ಲ’ ” ಎಂದು ಹೇಳಿದ ಮಾತಿಗೆ ಇದೇ ಕಾರಣ. 25 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, 26 “ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು. 27 ನೀವು ಹೀಗೆ ಸಮರ್ಪಿಸಿದ ಹತ್ತನೆಯ ಒಂದು ಭಾಗದ ಕಣದಲ್ಲಿನ ಧಾನ್ಯವನ್ನೂ, ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಮಾಂಶವೆಂದು ಪರಿಗಣಿಸಲ್ಪಡುವುದು. 28 ಇಸ್ರಾಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು. 29 ನಿಮಗೆ ಕೊಡಲ್ಪಡುವ ಸಕಲ ಪದಾರ್ಥಗಳಲ್ಲಿಯೂ ನೀವು ಉತ್ತಮ ಭಾಗವನ್ನೇ ದೇವರ ವಸ್ತುವಾಗುವುದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು’ 30 ಆದುದರಿಂದ ನೀನು ಲೇವಿಯರಿಗೆ ಹೀಗೆ ಹೇಳಬೇಕು, ‘ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಉಳಿದದ್ದನ್ನು ಕಣದಲ್ಲಿನ ದವಸದ ಹಾಗೂ, ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ಉಪಯೋಗಿಸಿಕೊಳ್ಳಬಹುದು. 31 ನೀವೂ, ನಿಮ್ಮ ಮನೆಯವರೂ ಅದನ್ನು ಎಲ್ಲಾ ಸ್ಥಳಗಳಲ್ಲಿ ಊಟಮಾಡಬಹುದು. ನೀವು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ದೊರೆಯುವ ಪ್ರತಿಫಲ. 32 ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ಉಳಿದ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ದೇವರ ವಸ್ತುಗಳನ್ನು ಅಪವಿತ್ರಮಾಡಿದರೆ ನೀವು ಸಾಯುವಿರಿ’ ” ಎಂದನು.
ಒಟ್ಟು 36 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 18 / 36
×

Alert

×

Kannada Letters Keypad References