1. {#1ಇಸ್ರಾಯೇಲರು ಪಾಳೆಯದಲ್ಲಿ ಗುಡಾರಗಳನ್ನು ಹಾಕಿಕೊಳ್ಳುವ ಕ್ರಮ } [PS]ಯೆಹೋವನು ಮಾತನಾಡಿ ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ,
2. “ಇಸ್ರಾಯೇಲರೆಲ್ಲರೂ ಒಬ್ಬೊಬ್ಬರಾಗಿ ಕುಟುಂಬದ ಗುರುತುಗಳ ಪ್ರಕಾರ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರದಲ್ಲಿ ಹಾಕಿಕೊಳ್ಳಬೇಕು. ಅವರು ದೇವದರ್ಶನದ ಗುಡಾರದ ಎದುರಿನಲ್ಲಿ ಇಳಿದುಕೊಳ್ಳಬೇಕು.” [PE]
3. [PS]ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು.
4. ಅವನ ಸೈನಿಕರ ಸಂಖ್ಯೆ 74,600 ಮಂದಿ. [PE]
5. [PS]ಯೆಹೂದ ಕುಲದ ಬಳಿಯಲ್ಲಿ ಇಳಿದುಕೊಳ್ಳುವವರು ಇಸ್ಸಾಕಾರನ ಕುಲದವರು. ಚೂವಾರನ ಮಗನಾದ ನೆತನೇಲನು ಇಸ್ಸಾಕಾರರ ಸೈನ್ಯಾಧಿಪತಿ.
6. ಅವನ ಸೈನಿಕರ ಸಂಖ್ಯೆ 54,400 ಮಂದಿ. [PE]
7. [PS]ಇಸ್ಸಾಕಾರರ ಬಳಿಯಲ್ಲಿ ಇಳಿದುಕೊಳ್ಳುವವರು ಜೆಬುಲೂನ್ ಕುಲದವರು. ಹೇಲೋನನ ಮಗನಾದ ಎಲೀಯಾಬನು ಜೆಬುಲೂನ್ಯರ ಸೈನ್ಯಾಧಿಪತಿ.
8. ಅವನ ಸೈನಿಕರ ಸಂಖ್ಯೆ 57,400 ಮಂದಿ. [PE]
9.
1. [PS]ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು. [PE][PS]ದಕ್ಷಿಣ ದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಶೆದೇಯೂರನ ಮಗನಾದ ಎಲೀಚೂರನು ರೂಬೇನ್ ಕುಲದ ಸೈನ್ಯಾಧಿಪತಿ.
11. ಅವನ ಸೈನಿಕರ ಸಂಖ್ಯೆ 46,500 ಮಂದಿ. [PE]
12. [PS]ರೂಬೇನ್ ಕುಲದವರ ಬಳಿಯಲ್ಲಿ ಇಳಿದುಕೊಳ್ಳುವವರು ಸಿಮೆಯೋನ್ ಕುಲದವರು. ಚೂರೀಷದ್ದೈಯನ ಮಗನಾದ ಶೆಲುಮೀಯೇಲನು ಸಿಮೆಯೋನ್ ಕುಲದ ಸೈನ್ಯಾಧಿಪತಿ.
13. ಅವನ ಸೈನಿಕರ ಸಂಖ್ಯೆ 59,300 ಮಂದಿ. [PE]
14. [PS]ತರುವಾಯ ಗಾದ್ಯರ ಕುಲದವರು. ರೆಗೂವೇಲನ ಮಗನಾದ ಎಲ್ಯಾಸಾಫನು ಗಾದ್ ಕುಲದ ಸೈನ್ಯಾಧಿಪತಿ.
15. ಅವನ ಸೈನಿಕರ ಸಂಖ್ಯೆ 45,650 ಮಂದಿ. [PE]
16.
1. [PS]ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು. [PE]
18. [PS]ಅನಂತರ ಸೈನ್ಯಗಳ ಮಧ್ಯದಲ್ಲಿ ದೇವದರ್ಶನದ ಗುಡಾರವು ಲೇವಿಯರ ಪಾಳೆಯದಿಂದ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮಗೆ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು. [PE][PS]ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಹೂದನ ಮಗನಾದ ಎಲೀಷಾಮಾನು ಎಫ್ರಾಯೀಮ್ ಕುಲದ ಸೈನ್ಯಾಧಿಪತಿ.
19. ಅವನ ಸೈನಿಕರ ಸಂಖ್ಯೆ 40,500 ಮಂದಿ. [PE]
20. [PS]ಎಫ್ರಾಯೀಮ್ ಬಳಿಯಲ್ಲಿ ಮನಸ್ಸೆ ಕುಲದವರೂ ತಮ್ಮ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪೆದಾಚೂರನ ಮಗನಾದ ಗಮ್ಲೀಯೇಲ್ ಮನಸ್ಸೆ ಕುಲದ ಸೈನ್ಯಾಧಿಪತಿ.
21. ಅವನ ಸೈನಿಕರ ಸಂಖ್ಯೆ 32,200 ಮಂದಿ. [PE]
22. [PS]ತರುವಾಯ ಬೆನ್ಯಾಮೀನ ಕುಲದವರು. ಗಿದ್ಯೋನಿಯ ಮಗನಾದ ಅಬೀದಾನ್ ಬೆನ್ಯಾಮೀನ ಕುಲದ ಸೈನ್ಯಾಧಿಪತಿ.
23. ಅವನ ಸೈನಿಕರ ಸಂಖ್ಯೆ 35,400 ಮಂದಿ. [PE]
24.
1. [PS]ಹೀಗೆ ಎಫ್ರಾಯೀಮ್ಯರ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,08,100 ಮಂದಿ. ಇವರು ಮೂರನೆಯ ದಂಡಾಗಿ ಹೊರಡಬೇಕು. [PE][PS]ಉತ್ತರ ದಿಕ್ಕಿನಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್ ದಾನ್ ಕುಲದ ಸೈನ್ಯಾಧಿಪತಿ.
26. ಅವನ ಸೈನಿಕರ ಸಂಖ್ಯೆ 62,700 ಮಂದಿ. [PE]
27. [PS]ದಾನ್ ಕುಲದ ಬಳಿಯಲ್ಲಿ ಆಶೇರ್ ಕುಲದವರು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಒಕ್ರಾನನ ಮಗನಾದ ಪಗೀಯೇಲನು ಆಶೇರ್ ಕುಲದವರ ಸೈನ್ಯಾಧಿಪತಿ.
28. ಅವನ ಸೈನಿಕರ ಸಂಖ್ಯೆ 41,500 ಮಂದಿ. [PE]
29. [PS]ತರುವಾಯ ನಫ್ತಾಲಿ ಕುಲದವರು, ಏನಾನನ ಮಗನಾದ ಅಹೀರನು ನಫ್ತಾಲಿ ಕುಲದ ಸೈನ್ಯಾಧಿಪತಿ.
30. ಅವನ ಸೈನಿಕರ ಸಂಖ್ಯೆ 53,400 ಮಂದಿ. [PE]
31.
1. [PS]ಹೀಗೆ ದಾನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,57,600 ಮಂದಿ. ಇವರು ಕಡೆಯ ದಂಡಾಗಿ ಹೊರಡಬೇಕು. [PE][PS]ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ.
33. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಲೇವಿಯರು ಇಸ್ರಾಯೇಲರ ಸಂಗಡ ಲೆಕ್ಕಹಾಕಲಿಲ್ಲ. [PE]
34. [PS]ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. ಹಾಗೆಯೇ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು ಮತ್ತು ಗೋತ್ರಕುಟುಂಬಗಳ ಪ್ರಕಾರವೇ ಹೊರಡುತ್ತಿದ್ದರು. [PE]