1. {ಬಿಳಾಮನ ಮೊದಲನೆಯ ದೈವವಾಣಿ} PS ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸಬೇಕು” ಎಂದು ಹೇಳಿದನು.
|
2. ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಯಜ್ಞವೇದಿಯ ಮೇಲೆ ಒಂದು ಹೋರಿಯನ್ನು ಮತ್ತು ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು.
|
3. ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು. PEPS
|
4. ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಆ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಒಂದೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನು, ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು.
|
5. ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂತಿರುಗಿ ಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.
|
6. ಬಿಳಾಮನು ಬಾಲಾಕನ ಬಳಿಗೆ ಹಿಂತಿರುಗಿ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ್ದ ಯಜ್ಞವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನ ಬಳಿಯಲ್ಲಿದ್ದರು. PEPS
|
7. ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ,
“ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’ |
9. ಬಂಡೆಗಳ ಶಿಖರದಿಂದ ನಾನು ಅವರನ್ನು ನೋಡುತ್ತೇನೆ;
ಗುಡ್ಡದಿಂದ ಅವರನ್ನು ದೃಷ್ಟಿಸುತ್ತೇನೆ. ಆ ಜನಾಂಗವು ಪ್ರತ್ಯೇಕವಾಗಿ ವಾಸಿಸುವುದು. ಆ ಜನಾಂಗವು ಇತರ ಜನಾಂಗಗಳಂತೆ ಸಾಧಾರಣ ಜನರೆಂದು ಎಣಿಸಲ್ಪಡುವುದಿಲ್ಲ. |
10. ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು?
ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು? ನೀತಿವಂತನು ಸಾಯುವಂತೆ ನಾನು ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು. |
11. ಬಾಲಾಕನು ಬಿಳಾಮನಿಗೆ, “ನೀನು ನನಗೆ ಮಾಡಿದ್ದೇನು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ಕರೆಯಿಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿದೆ” ಎಂದು ಹೇಳಿದನು.
|
13. {ಬಿಳಾಮನ ಎರಡನೆಯ ದೈವವಾಣಿ} PS ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು.
|
14. ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.
|
15. ಬಿಳಾಮನು ಬಾಲಾಕನಿಗೆ, “ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು” ಎಂದು ಹೇಳಿದನು. PEPS
|
16. ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟನು. ಆಗ ಅವನು ಹೇಳಿದ್ದೇನೆಂದರೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಹೀಗೆ ಹೇಳಬೇಕು” ಎಂದನು.
|
17. ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದನು.
|
18. ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ,
“ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು. ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು. |
19. ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ.
ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ? |
21. ಈ ಯಾಕೋಬನಲ್ಲಿ ಯಾವ ಆಪತ್ತಿನ ಸೂಚನೆಯೂ ಕಾಣುವುದಿಲ್ಲ
ಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ, ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ. |
23. ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ,
ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’ |
24. ಇಗೋ, ಜನಾಂಗದವರು ಎದ್ದು ಪ್ರಾಯದ ಸಿಂಹದಂತೆ ನಿಂತಿದ್ದಾರೆ;
ಸಿಂಹವು ಮೃಗವನ್ನು ಕೊಂದು ಮಾಂಸವನ್ನು ತಿಂದು ತೃಪ್ತಿಹೊಂದದ ಹೊರತು ಮಲಗುವುದಿಲ್ಲ ತಾನು ಬೇಟೆಯಾಡಿದ ರಕ್ತವನ್ನು ಕುಡಿದು ಮಲಗುವುದು.” |
26. ಅದಕ್ಕೆ ಬಿಳಾಮನು ಬಾಲಾಕನಿಗೆ ಉತ್ತರವಾಗಿ, “ಯೆಹೋವನು ಆಜ್ಞಾಪಿಸುವುದನ್ನೆಲ್ಲಾ ನಾನು ಹೇಳಬೇಕೆಂದು ನಿನಗೆ ಹೇಳಲಿಲ್ಲವೇ?” ಎಂದನು. PS
|
27. {ಬಿಳಾಮನ ಮೂರನೆಯ ದೈವವಾಣಿ} PS ತರುವಾಯ ಬಾಲಾಕನು ಬಿಳಾಮನಿಗೆ, “ಬೇರೊಂದು ಸ್ಥಳಕ್ಕೆ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವುದಕ್ಕೆ ದೇವರು ಅನುಮತಿ ಕೊಡಬಹುದು” ಎಂದು ಹೇಳಿದನು. PEPS
|
28. ಆದಕಾರಣ ಬಾಲಾಕನು ಬಿಳಾಮನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ.
|
29. ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು” ಎಂದು ಹೇಳಿದನು
|
30. ಬಿಳಾಮನ ಅಪ್ಪಣೆಯ ಪ್ರಕಾರ ಬಾಲಾಕನು ಪ್ರತಿಯೊಂದು ಯಜ್ಞ ವೇದಿಯಲ್ಲಿ ಒಂದು ಹೋರಿಯನ್ನೂ. ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು. PE
|