1. {ಎರಡನೆಯ ಜನಗಣತಿ} PS ಆ ಘೋರವಾದ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಮತ್ತು ಆರೋನನ ಮಗನೂ, ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡ ಮಾತನಾಡಿ,
|
2. “ನೀವು ಇಸ್ರಾಯೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಅಂದರೆ ಯುದ್ಧಕ್ಕೆ ಹೊರಡತಕ್ಕವರನ್ನು ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.
|
3. ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬ್ಯರ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಹತ್ತಿರ ಅವರ ಸಂಗಡ ಮಾತನಾಡಿ,
|
4. “ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆ ಐಗುಪ್ತ ದೇಶದಿಂದ ಹೊರಟ್ಟಿದ್ದ ಮತ್ತು ಮಹಾಯಾಜಕನಾದ ಎಲ್ಲಾಜಾರನೂ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಲೆಕ್ಕಿಸಿರಿ” ಎಂದನು.
|
5. ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವುವೆಂದರೆ: ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು,
|
9. ಎಲೀಯಾಬನ ಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬುವವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರುದ್ಧವಾಗಿ ವಿವಾದಿಸಿದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ವಿವಾದಿಸಿದ ಆಲೋಚನಾಕರ್ತರಾದ ದಾತಾನ್ ಮತ್ತು ಅಬೀರಾಮರು ಇವರೇ. PEPS
|
10. ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು.
|
12. ಸಿಮೆಯೋನ್ ಕುಲದ ಕುಟುಂಬಗಳು ಯಾವುವೆಂದರೆ:
ನೆಮೂವೇಲನ ವಂಶಸ್ಥರಾದ ನೆಮೂವೇಲ್ಯರು, ಯಾಮೀನನ ವಂಶಸ್ಥರಾದ ಯಾಮೀನ್ಯರು, ಯಾಕೀನನ ವಂಶಸ್ಥರಾದ ಯಾಕೀನ್ಯರು, |
15. ಗಾದ್ ಕುಲದ ಕುಟುಂಬಗಳು ಯಾವುವೆಂದರೆ:
ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯ ವಂಶಸ್ಥರಾದ ಹಗ್ಗೀಯರು, ಶೂನೀಯ ವಂಶಸ್ಥರಾದ ಶೂನೀಯರು, |
20. ಯೆಹೂದನ ಕುಲದಲ್ಲಿ ಉಳಿದ ಕುಟುಂಬಗಳು ಯಾವುವೆಂದರೆ:
ಶೇಲಹನ ವಂಶಸ್ಥರಾದ ಶೇಲಾನ್ಯರು, ಪೆರೆಹನ ವಂಶಸ್ಥರಾದ ಪೆರೆಚ್ಯರು, ಜೆರಹನ ವಂಶಸ್ಥರಾದ ಜೆರಹಿಯರು ಇವರೇ. |
26. ಜೆಬುಲೂನ್ ಕುಲದ ಕುಟುಂಬಗಳು ಯಾವುವೆಂದರೆ:
ಸೆರೆದನ ವಂಶಸ್ಥರಾದ ಸೆರೆದ್ಯರು, ಏಲೋನನ ವಂಶಸ್ಥರಾದ ಏಲೋನ್ಯರು, ಯಹಲೇಲನ ವಂಶಸ್ಥರಾದ ಯಹಲೇಲ್ಯರು. |
29. ಮನಸ್ಸೆ ಕುಲದ ಕುಟುಂಬಗಳು ಯಾವುವೆಂದರೆ:
ಮಾಕೀರನ ವಂಶಸ್ಥರಾದ ಮಾಕೀರ್ಯರು, ಮಾಕೀರನ ಮಗನಾದ ಗಿಲ್ಯಾದನ ವಂಶಸ್ಥರಾದ ಗಿಲ್ಯಾದ್ಯರು ಇವರೇ. |
33. ಹೇಫೆರನ ಮಗನಾದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರೇ. PEPS
|
35. ಎಫ್ರಾಯೀಮ್ ಕುಲದ ಕುಟುಂಬಗಳು ಯಾವುವೆಂದರೆ: ಶೂತೆಲಹನ ವಂಶಸ್ಥರಾದ ಶೂತೆಲಹ್ಯರು, ಬೆಕೆರನ ವಂಶಸ್ಥರಾದ ಬೆಕೆರ್ಯರು, ತಹನನ ವಂಶಸ್ಥರಾದ ತಹನಿಯರು,
|
37. ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ. PEPS
|
38. ಬೆನ್ಯಾಮೀನ್ ಕುಲದ ಕುಟುಂಬಗಳು ಯಾವುವೆಂದರೆ:
ಬೆಲಗನ ವಂಶಸ್ಥರಾದ ಬೆಲಗ್ಯರು, ಅಷ್ಬೇಲನ ವಂಶಸ್ಥರಾದ ಅಷ್ಬೇಲ್ಯರು, ಅಹೀರಾಮನ ವಂಶಸ್ಥರಾದ ಅಹೀರಾಮ್ಯರು, |
40. ಬೆಲಗನಿಗೆ ಅರ್ದ್, ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ದನ ವಂಶದವರು ಅರ್ದ್ಯರು, ನಾಮಾನನ ವಂಶದವರು ನಾಮಾನ್ಯರು.
|
44. ಆಶೇರ್ ಕುಲದ ಕುಟುಂಬಗಳು:
ಇಮ್ನಾಹನ ವಂಶಸ್ಥರಾದ ಇಮ್ನಾಹ್ಯರು, ಇಷ್ವೀಯ ವಂಶಸ್ಥರಾದ ಇಷ್ವೀಯರು, ಬೆರೀಯನ ವಂಶಸ್ಥರಾದ ಬೆರೀಯರು. |
54. ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ, ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವತ್ತಾಗಿ ಕೊಡಬೇಕು.
|
56. ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆಯಾದ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸ್ವತ್ತನ್ನು ಗೊತ್ತುಮಾಡಬೇಕು.” PS
|
57. {ಲೇವಿಯರ ಜನಗಣತಿ} PS ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು:
ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೆಹಾತನ ವಂಶದವರಾದ ಕೆಹಾತ್ಯರು, ಮೆರಾರೀಯ ವಂಶದವರಾದ ಮೆರಾರೀಯರು. |
58. ಲೇವಿ ಕುಲದವರ ಕುಟುಂಬಗಳು:
ಲಿಬ್ನೀಯರ ಕುಟುಂಬ, ಹೆಬ್ರೋನ್ಯರ ಕುಟುಂಬ, ಮಹ್ಲೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ ಇವುಗಳೇ. ಕೆಹಾತನು ಅಮ್ರಾಮನನ್ನು ಪಡೆದನು. PEPS |
59. ಅಮ್ರಾಮನ ಹೆಂಡತಿ ಯಾರೆಂದರೆ: ಐಗುಪ್ತ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ, ಮೋಶೆಯೂ ಮತ್ತು ಇವರ ಅಕ್ಕ ಮಿರ್ಯಾಮಳೂ ಹುಟ್ಟಿದರು. PEPS
|
61. ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಸತ್ತುಹೋದರು.
|
62. ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ. PEPS
|
63. ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಮತ್ತು ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲರ ಜನಸಂಖ್ಯೆಯನ್ನು ಲೆಕ್ಕಿಸಿದರು.
|
64. ಮೋಶೆಯೂ ಮತ್ತು ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರ ಸಂಖ್ಯೆಯಲ್ಲಿ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ.
|
65. ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ. PE
|