2. “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’
|
3. ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.
|
5. ನೀವು ಧಾನ್ಯನೈವೇದ್ಯಕ್ಕಾಗಿ * ಸುಮಾರು ಒಂದು ಕಿಲೋಗ್ರಾಂ. ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ, ಮೂರು ಸೇರು ಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.
|
6. ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬುದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು.
|
7. ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.
|
8. ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು. PS
|
9. {ಸಬ್ಬತ್ ದಿನದ ಯಜ್ಞಸಮರ್ಪಣೆ} PS “ ‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.
|
11. {ಮಾಸಿಕ ಯಜ್ಞಸಮರ್ಪಣೆ} PS “ ‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.
|
12. ಒಂದೊಂದು ಹೋರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು ಸೇರಿಸಬೇಕು.
|
13. ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು ಯೆಹೋವನಿಗೆ ಸುಗಂಧವಾಸನೆಯ ಸರ್ವಾಂಗಹೋಮಕ್ಕಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.
|
14. ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು.
|
15. ನಿತ್ಯ ಸರ್ವಾಂಗಹೋಮ ಹೊರತು ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು. PS
|
16. {ಪಸ್ಕ ಹಬ್ಬದ ಯಜ್ಞಸಮರ್ಪಣೆ} PS “ ‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನು ನೇಮಿಸಿದ ಹಬ್ಬವಾಗಬೇಕು.
|
17. ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವುದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.
|
19. ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ, ಒಂದು ಟಗರನ್ನೂ ಮತ್ತು ಒಂದು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು.
|
20. ಇವುಗಳೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ತಂದುಕೊಡಬೇಕು. ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು,
|
24. ಆ ಏಳು ದಿನಗಳಲ್ಲಿಯೂ ನಿತ್ಯ ಸರ್ವಾಂಗಹೋಮವನ್ನು ಸಮರ್ಪಿಸುವುದಲ್ಲದೆ ಮೇಲೆ ಹೇಳಿದ ಕ್ರಮದ ಪ್ರಕಾರ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು, ಪಾನದ್ರವ್ಯವನ್ನು ಸಹ ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು.
|
26. {ಸುಗ್ಗಿ ಹಬ್ಬದ ಯಜ್ಞಸಮರ್ಪಣೆ} PS “ ‘ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.
|
27. ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಒಂದು ವರ್ಷದ ಏಳು ಕುರಿಗಳು ಇವುಗಳನ್ನೂ,
|
31. ಈ ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.’ ” PE
|