1. {ಐಗುಪ್ತದೇಶದಿಂದ ಮೋವಾಬಿನವರೆಗಿನ ಪ್ರಯಾಣ} PS ಮೋಶೆ ಮತ್ತು ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲರ ಪ್ರಯಾಣಗಳ ವಿವರ:
|
3. ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲರು ಐಗುಪ್ತ್ಯರ ಎದುರಿನಲ್ಲೇ ರಮ್ಸೇಸಿನಿಂದ ಹೊರಟರು.
|
4. ಆ ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು * ಅಥವಾ ಐಗುಪ್ತ್ಯರ ದೇವತೆಗಳಿಗೆ ನ್ಯಾಯತೀರಿಸಿ ಅವುಗಳಿಗಿಂತ ತಾನು ಮಾತ್ರವೇ ಅತಿ ಶಕ್ತಿವಂತನಾದ ದೇವರು ಎಂದು ಯೆಹೋವನು ಸಾಬೀತುಪಡಿಸಿದನು. ಶಿಕ್ಷಿಸಿ, ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದ್ದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು. PEPS
|
7. ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿನ ಪೂರ್ವದಲ್ಲಿ ಇಳಿದುಕೊಂಡರು. PEPS
|
8. ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾಮಿನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.
|
9. ಮಾರಾದಿಂದ ಹೊರಟು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದುದರಿಂದ ಅಲ್ಲಿಯೇ ಇಳಿದುಕೊಂಡರು. PEPS
|
38. ಮಹಾಯಾಜಕನಾದ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ, ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ನಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು.
|
40. ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು.
|
48. ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.
|
49. ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಯೊರ್ದನ್ ನದಿಯ ತೀರದಲ್ಲಿ ಇಳಿದುಕೊಂಡರು. PS
|
50. {ಕಾನಾನ್ ದೇಶವನ್ನು ಹಂಚಿಕೊಂಡುವ ಬಗ್ಗೆ ಆಜ್ಞೆ} PS ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
|
52. ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ, ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.
|
53. ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.
|
54. ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ, ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವತ್ತು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.
|
55. ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿವಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.
|