4. ದೇವದರ್ಶನ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವುದೆಂದರೆ; ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು.
|
5. ದಂಡು ಹೊರಡುವಾಗ, ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಬಂದು ಮಹಾಪವಿತ್ರಸ್ಥಾನವನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಮಂಜೂಷದ ಆಜ್ಞಾಶಾಸನವನ್ನು ಮುಚ್ಚಿಬಿಟ್ಟು,
|
6. ಅದರ ಮೇಲೆ * ವಿಮೋ 25:5 ನೋಡಿರಿ. ಕಡಲಪ್ರಾಣಿಯ ತೊಗಲನ್ನೂ. ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.
|
7. ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು.
|
8. ಇವೆಲ್ಲವುಗಳ ಮೇಲೆ ಅವರು ಕಡುಗೆಂಪಾದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು.
|
10. ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡದಂಡಕ್ಕೆ ಕಟ್ಟಬೇಕು.
|
11. ತರುವಾಯ ಅವರು ಬಂಗಾರದ ಯಜ್ಞವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು.
|
12. ದೇವಸ್ಥಾನದ ಸರ್ವ ಉಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು.
|
14. ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.
|
15. ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.
|
16. ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.” PEPS
|
20. ಕೆಹಾತ್ಯರು ಒಳಗೆ ಬಂದು, ಒಂದು ಕ್ಷಣವು ಆ ಪರಿಶುದ್ಧ ವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತೇ ಹೋಗುವರು. ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಪ್ರವೇಶಿಸಿ ಅವರ ಕೆಲಸಗಳನ್ನು ಅವರವರ ಹೊರೆಗಳನ್ನೂ ಅವರಿಗೆ ನೇಮಿಸಬೇಕು” ಎಂದನು. PS
|
23. ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಎಣಿಕೆಮಾಡಬೇಕು.
|
24. ಸೇವಾಕಾರ್ಯ ಮಾಡುವುದರಲ್ಲಿಯೂ, ಹೊರೆಗಳನ್ನು ಹೊರುವುದರಲ್ಲಿಯೂ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಸೇವೆ ಯಾವುದೆಂದರೆ;
|
25. ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು ಅಂದರೆ ಗುಡಾರ, ಅದರ ಹೊದಿಕೆ, ಅದರ ಮೇಲಣ ಹಸನಾದ ಪ್ರಾಣಿಯ ತೊಗಲಿನ ಹೊದಿಕೆ,
|
26. ದೇವದರ್ಶನದ ಗುಡಾರದ ಬಾಗಿಲಿನ ಪರದೆ, ಗುಡಾರದ ಮತ್ತು ಯಜ್ಞವೇದಿಯ ಸುತ್ತಣ ಅಂಗಳದ ತೆರೆಗಳು, ಅದರ ಬಾಗಿಲಿನ ಪರದೆಗಳು, ಹಗ್ಗಗಳು, ಎಲ್ಲಾ ಉಪಕರಣಗಳು ಇವುಗಳನ್ನು ಹೊರಬೇಕು ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು.
|
27. ಗೇರ್ಷೋನ್ಯರು ಹೊರೆ ಹೊರುವುದರಲ್ಲಿಯೂ ಬೇರೆ ಸೇವಾಕಾರ್ಯ ಮಾಡುವುದರಲ್ಲಿಯೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.
|
28. ದೇವದರ್ಶನದ ಗುಡಾರದ ವಿಷಯದಲ್ಲಿ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಣೆ ಮಾಡಬೇಕು. PS
|
31. ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕೆಲಸ ಯಾವುದೆಂದರೆ: ಅವರು ಗುಡಾರದ ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಅವುಗಳ ಗದ್ದಿಗೆಕಲ್ಲುಗಳನ್ನು,
|
32. ಅಂಗಳದ ಕಂಬಗಳನ್ನು, ಇವುಗಳ ಗದ್ದಿಗೆಕಲ್ಲುಗಳನ್ನೂ, ಗೂಟಗಳನ್ನೂ, ಹಗ್ಗಗಳನ್ನೂ ಎಲ್ಲಾ ಉಪಕರಣಗಳನ್ನೂ ಹೊರಬೇಕು; ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು. ಅವರವರ ಜವಾಬ್ದಾರಿಗಳನ್ನೆಲ್ಲಾ ನೀವು ಹೆಸರು ಹೇಳಿ ಗೊತ್ತುಮಾಡಬೇಕು.
|
33. ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಅಧೀನದಲ್ಲಿದ್ದು ಕಾರ್ಯಗಳನ್ನು ಮಾಡಬೇಕು” ಎಂದನು. PS
|
34. {ಲೇವಿ ಗೋತ್ರಕುಟುಂಬಗಳ ಲೆಕ್ಕ} PS ಮೋಶೆ ಮತ್ತು ಆರೋನರೂ, ಸಮೂಹದ ಪ್ರಧಾನರೂ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು.
|
35. ಅವರು ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಯೋಗ್ಯರಾದವರನ್ನು ಎಣಿಕೆಮಾಡಿದರು.
|
37. ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಕೆಹಾತ್ಯರ ಗೋತ್ರಕುಟುಂಬವನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.
|
39. ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರದವರನ್ನು ಎಣಿಕೆಮಾಡಿದರು.
|
41. ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಮತ್ತು ಆರೋನರು ಗೇರ್ಷೋನ್ಯರ ಗೋತ್ರಕುಟುಂಬದವರನು ಎಣಿಕೆಮಾಡಿದಾಗ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.
|
43. ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು.
|
45. ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಮತ್ತು ಆರೋನರು ಮೆರಾರೀಯರ ಗೋತ್ರಕುಟುಂಬವನ್ನು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಎಂದು ಗೊತ್ತಾಯಿತು.
|
47. ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು. ದೇವದರ್ಶನದ ಗುಡಾರದ ಸೇವಕಾರ್ಯವನ್ನು ಮಾಡಲೂ, ಅದರ ಜವಾಬ್ದಾರಿಗಳನ್ನು ನಿರ್ವಹಿಸುವವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.
|
49. ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ, ಜವಾಬ್ದಾರಿಯೂ ನಿಗದಿಪಡಿಸಲಾಯಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು. PE
|