ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಅರಣ್ಯಕಾಂಡ
1. {#1ಕೆಹಾತ್ಯರಿಗೆ ಕೆಲಸಗಳನ್ನು ನೇಮಿಸಿದ್ದು } [PS]ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದೇನೆಂದರೆ,
2. “ನೀನು ಲೇವಿಯರೊಳಗೆ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.
3. ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರನ್ನು ಎಣಿಕೆಮಾಡು, ಅವರು ದೇವದರ್ಶನದ ಗುಡಾರದ ಸೇವೆ ಮಾಡಬೇಕು.
4. ದೇವದರ್ಶನ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವುದೆಂದರೆ; ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು.
5. ದಂಡು ಹೊರಡುವಾಗ, ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಬಂದು ಮಹಾಪವಿತ್ರಸ್ಥಾನವನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಮಂಜೂಷದ ಆಜ್ಞಾಶಾಸನವನ್ನು ಮುಚ್ಚಿಬಿಟ್ಟು,
6. ಅದರ ಮೇಲೆ [* ವಿಮೋ 25:5 ನೋಡಿರಿ. ಕಡಲಪ್ರಾಣಿಯ ತೊಗಲನ್ನೂ. ]ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.
7. ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು.
8. ಇವೆಲ್ಲವುಗಳ ಮೇಲೆ ಅವರು ಕಡುಗೆಂಪಾದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು.
9. ಆ ಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ, ಎಣ್ಣೆಯ ಪಾತ್ರೆಗಳನ್ನೂ
10. ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡದಂಡಕ್ಕೆ ಕಟ್ಟಬೇಕು.
11. ತರುವಾಯ ಅವರು ಬಂಗಾರದ ಯಜ್ಞವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು.
12. ದೇವಸ್ಥಾನದ ಸರ್ವ ಉಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು.
13. ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ಯಜ್ಞವೇದಿಯ ಮೇಲೆ ನೇರಳೆ ವರ್ಣದ ಬಟ್ಟೆಯನ್ನು ಹಾಸಿದರು.
14. ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.
15. ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.
16. ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.” [PE]
17. [PS]ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
18. “ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಡನೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿರಿ.
19. ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರಕ್ಕೆ ಬಂದು ಸಾಯದಂತೆ ನೀವು ಅವರ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು.
20. ಕೆಹಾತ್ಯರು ಒಳಗೆ ಬಂದು, ಒಂದು ಕ್ಷಣವು ಆ ಪರಿಶುದ್ಧ ವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತೇ ಹೋಗುವರು. ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಪ್ರವೇಶಿಸಿ ಅವರ ಕೆಲಸಗಳನ್ನು ಅವರವರ ಹೊರೆಗಳನ್ನೂ ಅವರಿಗೆ ನೇಮಿಸಬೇಕು” ಎಂದನು. [PE]
21. {#1ಗೇರ್ಷೋನ್ಯರಿಗೆ ಕೆಲಸಗಳನ್ನು ನೇಮಿಸಿದ್ದು } [PS]ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
22. “ನೀನು ಗೇರ್ಷೋನ್ಯರ ಗೋತ್ರಕುಟುಂಬಗಳ ಪ್ರಕಾರ ಎಣಿಕೆಮಾಡಬೇಕು.
23. ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಎಣಿಕೆಮಾಡಬೇಕು.
24. ಸೇವಾಕಾರ್ಯ ಮಾಡುವುದರಲ್ಲಿಯೂ, ಹೊರೆಗಳನ್ನು ಹೊರುವುದರಲ್ಲಿಯೂ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಸೇವೆ ಯಾವುದೆಂದರೆ;
25. ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು ಅಂದರೆ ಗುಡಾರ, ಅದರ ಹೊದಿಕೆ, ಅದರ ಮೇಲಣ ಹಸನಾದ ಪ್ರಾಣಿಯ ತೊಗಲಿನ ಹೊದಿಕೆ,
26. ದೇವದರ್ಶನದ ಗುಡಾರದ ಬಾಗಿಲಿನ ಪರದೆ, ಗುಡಾರದ ಮತ್ತು ಯಜ್ಞವೇದಿಯ ಸುತ್ತಣ ಅಂಗಳದ ತೆರೆಗಳು, ಅದರ ಬಾಗಿಲಿನ ಪರದೆಗಳು, ಹಗ್ಗಗಳು, ಎಲ್ಲಾ ಉಪಕರಣಗಳು ಇವುಗಳನ್ನು ಹೊರಬೇಕು ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು.
27. ಗೇರ್ಷೋನ್ಯರು ಹೊರೆ ಹೊರುವುದರಲ್ಲಿಯೂ ಬೇರೆ ಸೇವಾಕಾರ್ಯ ಮಾಡುವುದರಲ್ಲಿಯೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.
28. ದೇವದರ್ಶನದ ಗುಡಾರದ ವಿಷಯದಲ್ಲಿ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಣೆ ಮಾಡಬೇಕು. [PE]
29. {#1ಮೆರಾರೀಯರಿಗೆ ಕೆಲಸಗಳನ್ನು ನೇಮಿಸಿದ್ದು } [PS]“ನೀನು ಮೆರಾರೀಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.
30. ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಲೆಕ್ಕಿಸಬೇಕು.
31. ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕೆಲಸ ಯಾವುದೆಂದರೆ: ಅವರು ಗುಡಾರದ ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಅವುಗಳ ಗದ್ದಿಗೆಕಲ್ಲುಗಳನ್ನು,
32. ಅಂಗಳದ ಕಂಬಗಳನ್ನು, ಇವುಗಳ ಗದ್ದಿಗೆಕಲ್ಲುಗಳನ್ನೂ, ಗೂಟಗಳನ್ನೂ, ಹಗ್ಗಗಳನ್ನೂ ಎಲ್ಲಾ ಉಪಕರಣಗಳನ್ನೂ ಹೊರಬೇಕು; ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು. ಅವರವರ ಜವಾಬ್ದಾರಿಗಳನ್ನೆಲ್ಲಾ ನೀವು ಹೆಸರು ಹೇಳಿ ಗೊತ್ತುಮಾಡಬೇಕು.
33. ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಅಧೀನದಲ್ಲಿದ್ದು ಕಾರ್ಯಗಳನ್ನು ಮಾಡಬೇಕು” ಎಂದನು. [PE]
34. {#1ಲೇವಿ ಗೋತ್ರಕುಟುಂಬಗಳ ಲೆಕ್ಕ } [PS]ಮೋಶೆ ಮತ್ತು ಆರೋನರೂ, ಸಮೂಹದ ಪ್ರಧಾನರೂ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು.
35. ಅವರು ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಯೋಗ್ಯರಾದವರನ್ನು ಎಣಿಕೆಮಾಡಿದರು.
36. ಅವರಲ್ಲಿ ಗೋತ್ರಕುಟುಂಬಗಳ ಪ್ರಕಾರ ಎಣಿಕೆಯಾದವರು 2,750 ಮಂದಿ.
37. ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಕೆಹಾತ್ಯರ ಗೋತ್ರಕುಟುಂಬವನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.
38. ಗೇರ್ಷೋನ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.
39. ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರದವರನ್ನು ಎಣಿಕೆಮಾಡಿದರು.
40. ಗುಡಾರದ ಕೆಲಸಕ್ಕೆ ಸೇರತಕ್ಕವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,630 ಮಂದಿ.
41. ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಮತ್ತು ಆರೋನರು ಗೇರ್ಷೋನ್ಯರ ಗೋತ್ರಕುಟುಂಬದವರನು ಎಣಿಕೆಮಾಡಿದಾಗ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.
42. ಮೆರಾರೀಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು.
43. ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು.
44. ಗುಡಾರದ ಕೆಲಸಕ್ಕೆ ಸೇರಿದವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 3,200 ಮಂದಿ.
45. ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಮತ್ತು ಆರೋನರು ಮೆರಾರೀಯರ ಗೋತ್ರಕುಟುಂಬವನ್ನು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಎಂದು ಗೊತ್ತಾಯಿತು.
46. ಮೋಶೆ ಮತ್ತು ಆರೋನರೂ ಇಸ್ರಾಯೇಲರ ಪ್ರಧಾನರೂ ಲೇವಿಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.
47. ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು. ದೇವದರ್ಶನದ ಗುಡಾರದ ಸೇವಕಾರ್ಯವನ್ನು ಮಾಡಲೂ, ಅದರ ಜವಾಬ್ದಾರಿಗಳನ್ನು ನಿರ್ವಹಿಸುವವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.
48. ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 8,580.
49. ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ, ಜವಾಬ್ದಾರಿಯೂ ನಿಗದಿಪಡಿಸಲಾಯಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು. [PE]
ಒಟ್ಟು 36 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 36
ಕೆಹಾತ್ಯರಿಗೆ ಕೆಲಸಗಳನ್ನು ನೇಮಿಸಿದ್ದು 1 ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದೇನೆಂದರೆ, 2 “ನೀನು ಲೇವಿಯರೊಳಗೆ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು. 3 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರನ್ನು ಎಣಿಕೆಮಾಡು, ಅವರು ದೇವದರ್ಶನದ ಗುಡಾರದ ಸೇವೆ ಮಾಡಬೇಕು. 4 ದೇವದರ್ಶನ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವುದೆಂದರೆ; ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು. 5 ದಂಡು ಹೊರಡುವಾಗ, ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಬಂದು ಮಹಾಪವಿತ್ರಸ್ಥಾನವನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಮಂಜೂಷದ ಆಜ್ಞಾಶಾಸನವನ್ನು ಮುಚ್ಚಿಬಿಟ್ಟು, 6 ಅದರ ಮೇಲೆ * ವಿಮೋ 25:5 ನೋಡಿರಿ. ಕಡಲಪ್ರಾಣಿಯ ತೊಗಲನ್ನೂ. ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು. 7 ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು. 8 ಇವೆಲ್ಲವುಗಳ ಮೇಲೆ ಅವರು ಕಡುಗೆಂಪಾದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು. 9 ಆ ಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ, ಎಣ್ಣೆಯ ಪಾತ್ರೆಗಳನ್ನೂ 10 ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡದಂಡಕ್ಕೆ ಕಟ್ಟಬೇಕು. 11 ತರುವಾಯ ಅವರು ಬಂಗಾರದ ಯಜ್ಞವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು. 12 ದೇವಸ್ಥಾನದ ಸರ್ವ ಉಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು. 13 ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ಯಜ್ಞವೇದಿಯ ಮೇಲೆ ನೇರಳೆ ವರ್ಣದ ಬಟ್ಟೆಯನ್ನು ಹಾಸಿದರು. 14 ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು. 15 ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ. 16 ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.” 17 ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ, 18 “ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಡನೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿರಿ. 19 ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರಕ್ಕೆ ಬಂದು ಸಾಯದಂತೆ ನೀವು ಅವರ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು. 20 ಕೆಹಾತ್ಯರು ಒಳಗೆ ಬಂದು, ಒಂದು ಕ್ಷಣವು ಆ ಪರಿಶುದ್ಧ ವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತೇ ಹೋಗುವರು. ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಪ್ರವೇಶಿಸಿ ಅವರ ಕೆಲಸಗಳನ್ನು ಅವರವರ ಹೊರೆಗಳನ್ನೂ ಅವರಿಗೆ ನೇಮಿಸಬೇಕು” ಎಂದನು. ಗೇರ್ಷೋನ್ಯರಿಗೆ ಕೆಲಸಗಳನ್ನು ನೇಮಿಸಿದ್ದು 21 ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ, 22 “ನೀನು ಗೇರ್ಷೋನ್ಯರ ಗೋತ್ರಕುಟುಂಬಗಳ ಪ್ರಕಾರ ಎಣಿಕೆಮಾಡಬೇಕು. 23 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಎಣಿಕೆಮಾಡಬೇಕು. 24 ಸೇವಾಕಾರ್ಯ ಮಾಡುವುದರಲ್ಲಿಯೂ, ಹೊರೆಗಳನ್ನು ಹೊರುವುದರಲ್ಲಿಯೂ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಸೇವೆ ಯಾವುದೆಂದರೆ; 25 ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು ಅಂದರೆ ಗುಡಾರ, ಅದರ ಹೊದಿಕೆ, ಅದರ ಮೇಲಣ ಹಸನಾದ ಪ್ರಾಣಿಯ ತೊಗಲಿನ ಹೊದಿಕೆ, 26 ದೇವದರ್ಶನದ ಗುಡಾರದ ಬಾಗಿಲಿನ ಪರದೆ, ಗುಡಾರದ ಮತ್ತು ಯಜ್ಞವೇದಿಯ ಸುತ್ತಣ ಅಂಗಳದ ತೆರೆಗಳು, ಅದರ ಬಾಗಿಲಿನ ಪರದೆಗಳು, ಹಗ್ಗಗಳು, ಎಲ್ಲಾ ಉಪಕರಣಗಳು ಇವುಗಳನ್ನು ಹೊರಬೇಕು ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು. 27 ಗೇರ್ಷೋನ್ಯರು ಹೊರೆ ಹೊರುವುದರಲ್ಲಿಯೂ ಬೇರೆ ಸೇವಾಕಾರ್ಯ ಮಾಡುವುದರಲ್ಲಿಯೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು. 28 ದೇವದರ್ಶನದ ಗುಡಾರದ ವಿಷಯದಲ್ಲಿ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಣೆ ಮಾಡಬೇಕು. ಮೆರಾರೀಯರಿಗೆ ಕೆಲಸಗಳನ್ನು ನೇಮಿಸಿದ್ದು 29 “ನೀನು ಮೆರಾರೀಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು. 30 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಲೆಕ್ಕಿಸಬೇಕು. 31 ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕೆಲಸ ಯಾವುದೆಂದರೆ: ಅವರು ಗುಡಾರದ ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಅವುಗಳ ಗದ್ದಿಗೆಕಲ್ಲುಗಳನ್ನು, 32 ಅಂಗಳದ ಕಂಬಗಳನ್ನು, ಇವುಗಳ ಗದ್ದಿಗೆಕಲ್ಲುಗಳನ್ನೂ, ಗೂಟಗಳನ್ನೂ, ಹಗ್ಗಗಳನ್ನೂ ಎಲ್ಲಾ ಉಪಕರಣಗಳನ್ನೂ ಹೊರಬೇಕು; ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು. ಅವರವರ ಜವಾಬ್ದಾರಿಗಳನ್ನೆಲ್ಲಾ ನೀವು ಹೆಸರು ಹೇಳಿ ಗೊತ್ತುಮಾಡಬೇಕು. 33 ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಅಧೀನದಲ್ಲಿದ್ದು ಕಾರ್ಯಗಳನ್ನು ಮಾಡಬೇಕು” ಎಂದನು. ಲೇವಿ ಗೋತ್ರಕುಟುಂಬಗಳ ಲೆಕ್ಕ 34 ಮೋಶೆ ಮತ್ತು ಆರೋನರೂ, ಸಮೂಹದ ಪ್ರಧಾನರೂ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು. 35 ಅವರು ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಯೋಗ್ಯರಾದವರನ್ನು ಎಣಿಕೆಮಾಡಿದರು. 36 ಅವರಲ್ಲಿ ಗೋತ್ರಕುಟುಂಬಗಳ ಪ್ರಕಾರ ಎಣಿಕೆಯಾದವರು 2,750 ಮಂದಿ. 37 ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಕೆಹಾತ್ಯರ ಗೋತ್ರಕುಟುಂಬವನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು. 38 ಗೇರ್ಷೋನ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು. 39 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರದವರನ್ನು ಎಣಿಕೆಮಾಡಿದರು. 40 ಗುಡಾರದ ಕೆಲಸಕ್ಕೆ ಸೇರತಕ್ಕವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,630 ಮಂದಿ. 41 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಮತ್ತು ಆರೋನರು ಗೇರ್ಷೋನ್ಯರ ಗೋತ್ರಕುಟುಂಬದವರನು ಎಣಿಕೆಮಾಡಿದಾಗ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು. 42 ಮೆರಾರೀಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು. 43 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು. 44 ಗುಡಾರದ ಕೆಲಸಕ್ಕೆ ಸೇರಿದವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 3,200 ಮಂದಿ. 45 ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಮತ್ತು ಆರೋನರು ಮೆರಾರೀಯರ ಗೋತ್ರಕುಟುಂಬವನ್ನು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಎಂದು ಗೊತ್ತಾಯಿತು. 46 ಮೋಶೆ ಮತ್ತು ಆರೋನರೂ ಇಸ್ರಾಯೇಲರ ಪ್ರಧಾನರೂ ಲೇವಿಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು. 47 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು. ದೇವದರ್ಶನದ ಗುಡಾರದ ಸೇವಕಾರ್ಯವನ್ನು ಮಾಡಲೂ, ಅದರ ಜವಾಬ್ದಾರಿಗಳನ್ನು ನಿರ್ವಹಿಸುವವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು. 48 ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 8, 580. 49 ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ, ಜವಾಬ್ದಾರಿಯೂ ನಿಗದಿಪಡಿಸಲಾಯಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು.
ಒಟ್ಟು 36 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 36
×

Alert

×

Kannada Letters Keypad References