ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಅರಣ್ಯಕಾಂಡ
1. {#1ಇಸ್ರಾಯೇಲರು ಎರಡನೆಯ ಪಸ್ಕ ಹಬ್ಬವನ್ನು ಆಚರಿಸಿದ್ದು } [PS]ಇಸ್ರಾಯೇಲರು ಐಗುಪ್ತ ದೇಶವನ್ನು ಬಿಟ್ಟುಬಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನಲ್ಲಿ, ಸೀನಾಯಿ ಅರಣ್ಯದಲ್ಲಿ ಯೆಹೋವನು ಮೋಶೆಗೆ,
2. “ಇಸ್ರಾಯೇಲರು ಪಸ್ಕಹಬ್ಬ ಆಚರಿಸಲು ನೇಮಕವಾದ ಕಾಲದಲ್ಲಿ ಆಚರಿಸಲು ಹೇಳು.
3. ನಾನು ನೇಮಿಸಿದ ಆಜ್ಞಾವಿಧಿಗಳ ಪ್ರಕಾರ ನೇಮಕವಾದ ಕಾಲದಲ್ಲಿಯೇ ಅಂದರೆ ಈ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ನೀವು ಅದನ್ನು ಆಚರಿಸಬೇಕು” ಎಂದು ಹೇಳಿದನು. [PE]
4. [PS]ಆದಕಾರಣ ಮೋಶೆ ಇಸ್ರಾಯೇಲರಿಗೆ, ನೀವು ಪಸ್ಕಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಿದನು.
5. ಹಾಗೆಯೇ ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಪಸ್ಕಹಬ್ಬವನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಎಲ್ಲವನ್ನು ಇಸ್ರಾಯೇಲರು ಮಾಡಿದರು. [PE]
6. [PS]ಆದರೆ ಕೆಲವು ಜನರಿಗೆ ಮನುಷ್ಯನ ಶವಸೋಂಕು ಇದ್ದುದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗದೆ ಮೋಶೆ ಮತ್ತು ಆರೋನರ ಬಳಿಗೆ ಬಂದರು.
7. ಈ ಜನರು ಮೋಶೆಗೆ “ಮನುಷ್ಯನ ಶವಸೋಂಕಿದರಿಂದ ನಾವು ಅಶುದ್ಧರಾದೆವು. ನಾವು ಉಳಿದ ಇಸ್ರಾಯೇಲರೊಡನೆ ನೇಮಕವಾದ ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವುದಕ್ಕೆ ಅಪ್ಪಣೆಯಿಲ್ಲವೋ?” ಎಂದು ಕೇಳಿದರು. [PE]
8.
9. [PS]ಅದಕ್ಕೆ ಮೋಶೆ ಅವರಿಗೆ, “ಸ್ವಲ್ಪ ಕಾದುಕೊಂಡಿರಿ. ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ” ಎಂದು ಹೇಳಿದನು. [PE][PS]ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
10. “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಶವ ಸೋಂಕಿನಿಂದ ಅಶುದ್ಧರಾದವರೂ ಅಥವಾ ದೂರ ಪ್ರಯಾಣದಲ್ಲಿರುವವರೂ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.’
11. ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು.
12. ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. ಅಂತೂ ಪಸ್ಕಹಬ್ಬದ ವಿಷಯವಾಗಿರುವ ವಿಧಿನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.
13. ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ಕಹಬ್ಬವನ್ನು ಆಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು. [PE]
14.
15. [PS]“ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ನಿಯಮವಿರಬೇಕು.” [PE]{#1ಇಸ್ರಾಯೇಲರಿಗೆ ಮೇಘಸ್ತಂಭದ ಸೂಚನೆ } [PS]ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು.
16. ನಿತ್ಯವೂ ಹಾಗೆಯೇ ಕಾಣಿಸುತ್ತಿತ್ತು; ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುತ್ತಿತ್ತು.
17. ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲರು ಮುಂದಕ್ಕೆ ಪ್ರಯಾಣಮಾಡುತ್ತಿದ್ದರು. ಆ ಮೇಘವು ಎಲ್ಲಿ ನಿಲ್ಲುವುದೋ ಅಲ್ಲಿ ಇಸ್ರಾಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು.
18. ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರು ಪ್ರಯಾಣಮಾಡುತ್ತಿದ್ದರು, ಯೆಹೋವನ ಅಪ್ಪಣೆಯನ್ನು ಹೊಂದಿ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುತ್ತಿದ್ದರು.
19. ಆ ಮೇಘವು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುವಾಗ ಇಸ್ರಾಯೇಲರು ಯೆಹೋವನ ಸೂಚನೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.
20. ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿನಗಳು ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಯೆಹೋವನ ಆಜ್ಞಾನುಸಾರವಾಗಿ ಅವರು ಇಳಿದುಕೊಳ್ಳುತ್ತಿದ್ದರು. ಯೆಹೋವನ ಆಜ್ಞಾನುಸಾರವಾಗಿ ತಮ್ಮ ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು.
21. ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಬೆಳಗ್ಗಿನವರೆಗೆ ಇರುತ್ತಿತ್ತು. ಬೆಳಗ್ಗೆ ಅದು ಮೇಲಕ್ಕೆ ಏಳುವಾಗ ಜನರು ಪ್ರಯಾಣಮಾಡುತ್ತಿದ್ದರು. ಕೆಲವು ಸಮಯಗಳಲ್ಲಿ ಅದು ಹಗಲಿರುಳು ನಿಂತಿರುತ್ತಿತ್ತು. ಅದು ಯಾವಾಗ ಮೇಲೇಳುತ್ತಿತ್ತೋ ಆಗ ಜನರು ಹೊರಡುತ್ತಿದ್ದರು.
22. ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವುದು ಎರಡು ದಿನವಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಅಲ್ಲಿಯ ತನಕ ಇಸ್ರಾಯೇಲರು ಪ್ರಯಾಣಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಮೇಘವು ಏಳುವಾಗ ಅವರು ಹೊರಡುತ್ತಿದ್ದರು.
23. ಯೆಹೋವನ ಆಜ್ಞೆಯ ಪ್ರಕಾರ ಅವರು ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಯೆಹೋವನ ಆಜ್ಞೆಯ ಪ್ರಕಾರವೇ ಅವರು ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು. ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆಯೇ ಅವರು ಯೆಹೋವನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು. [PE]
ಒಟ್ಟು 36 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 9 / 36
ಇಸ್ರಾಯೇಲರು ಎರಡನೆಯ ಪಸ್ಕ ಹಬ್ಬವನ್ನು ಆಚರಿಸಿದ್ದು 1 ಇಸ್ರಾಯೇಲರು ಐಗುಪ್ತ ದೇಶವನ್ನು ಬಿಟ್ಟುಬಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನಲ್ಲಿ, ಸೀನಾಯಿ ಅರಣ್ಯದಲ್ಲಿ ಯೆಹೋವನು ಮೋಶೆಗೆ, 2 “ಇಸ್ರಾಯೇಲರು ಪಸ್ಕಹಬ್ಬ ಆಚರಿಸಲು ನೇಮಕವಾದ ಕಾಲದಲ್ಲಿ ಆಚರಿಸಲು ಹೇಳು. 3 ನಾನು ನೇಮಿಸಿದ ಆಜ್ಞಾವಿಧಿಗಳ ಪ್ರಕಾರ ನೇಮಕವಾದ ಕಾಲದಲ್ಲಿಯೇ ಅಂದರೆ ಈ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ನೀವು ಅದನ್ನು ಆಚರಿಸಬೇಕು” ಎಂದು ಹೇಳಿದನು. 4 ಆದಕಾರಣ ಮೋಶೆ ಇಸ್ರಾಯೇಲರಿಗೆ, ನೀವು ಪಸ್ಕಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಿದನು. 5 ಹಾಗೆಯೇ ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಪಸ್ಕಹಬ್ಬವನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಎಲ್ಲವನ್ನು ಇಸ್ರಾಯೇಲರು ಮಾಡಿದರು. 6 ಆದರೆ ಕೆಲವು ಜನರಿಗೆ ಮನುಷ್ಯನ ಶವಸೋಂಕು ಇದ್ದುದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗದೆ ಮೋಶೆ ಮತ್ತು ಆರೋನರ ಬಳಿಗೆ ಬಂದರು. 7 ಈ ಜನರು ಮೋಶೆಗೆ “ಮನುಷ್ಯನ ಶವಸೋಂಕಿದರಿಂದ ನಾವು ಅಶುದ್ಧರಾದೆವು. ನಾವು ಉಳಿದ ಇಸ್ರಾಯೇಲರೊಡನೆ ನೇಮಕವಾದ ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವುದಕ್ಕೆ ಅಪ್ಪಣೆಯಿಲ್ಲವೋ?” ಎಂದು ಕೇಳಿದರು. 8 9 ಅದಕ್ಕೆ ಮೋಶೆ ಅವರಿಗೆ, “ಸ್ವಲ್ಪ ಕಾದುಕೊಂಡಿರಿ. ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ” ಎಂದು ಹೇಳಿದನು. ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 10 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಶವ ಸೋಂಕಿನಿಂದ ಅಶುದ್ಧರಾದವರೂ ಅಥವಾ ದೂರ ಪ್ರಯಾಣದಲ್ಲಿರುವವರೂ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.’ 11 ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು. 12 ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. ಅಂತೂ ಪಸ್ಕಹಬ್ಬದ ವಿಷಯವಾಗಿರುವ ವಿಧಿನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು. 13 ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ಕಹಬ್ಬವನ್ನು ಆಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು. 14 15 “ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ನಿಯಮವಿರಬೇಕು.” ಇಸ್ರಾಯೇಲರಿಗೆ ಮೇಘಸ್ತಂಭದ ಸೂಚನೆ ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು. 16 ನಿತ್ಯವೂ ಹಾಗೆಯೇ ಕಾಣಿಸುತ್ತಿತ್ತು; ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುತ್ತಿತ್ತು. 17 ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲರು ಮುಂದಕ್ಕೆ ಪ್ರಯಾಣಮಾಡುತ್ತಿದ್ದರು. ಆ ಮೇಘವು ಎಲ್ಲಿ ನಿಲ್ಲುವುದೋ ಅಲ್ಲಿ ಇಸ್ರಾಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. 18 ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರು ಪ್ರಯಾಣಮಾಡುತ್ತಿದ್ದರು, ಯೆಹೋವನ ಅಪ್ಪಣೆಯನ್ನು ಹೊಂದಿ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುತ್ತಿದ್ದರು. 19 ಆ ಮೇಘವು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುವಾಗ ಇಸ್ರಾಯೇಲರು ಯೆಹೋವನ ಸೂಚನೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು. 20 ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿನಗಳು ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಯೆಹೋವನ ಆಜ್ಞಾನುಸಾರವಾಗಿ ಅವರು ಇಳಿದುಕೊಳ್ಳುತ್ತಿದ್ದರು. ಯೆಹೋವನ ಆಜ್ಞಾನುಸಾರವಾಗಿ ತಮ್ಮ ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು. 21 ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಬೆಳಗ್ಗಿನವರೆಗೆ ಇರುತ್ತಿತ್ತು. ಬೆಳಗ್ಗೆ ಅದು ಮೇಲಕ್ಕೆ ಏಳುವಾಗ ಜನರು ಪ್ರಯಾಣಮಾಡುತ್ತಿದ್ದರು. ಕೆಲವು ಸಮಯಗಳಲ್ಲಿ ಅದು ಹಗಲಿರುಳು ನಿಂತಿರುತ್ತಿತ್ತು. ಅದು ಯಾವಾಗ ಮೇಲೇಳುತ್ತಿತ್ತೋ ಆಗ ಜನರು ಹೊರಡುತ್ತಿದ್ದರು. 22 ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವುದು ಎರಡು ದಿನವಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಅಲ್ಲಿಯ ತನಕ ಇಸ್ರಾಯೇಲರು ಪ್ರಯಾಣಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಮೇಘವು ಏಳುವಾಗ ಅವರು ಹೊರಡುತ್ತಿದ್ದರು. 23 ಯೆಹೋವನ ಆಜ್ಞೆಯ ಪ್ರಕಾರ ಅವರು ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಯೆಹೋವನ ಆಜ್ಞೆಯ ಪ್ರಕಾರವೇ ಅವರು ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು. ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆಯೇ ಅವರು ಯೆಹೋವನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.
ಒಟ್ಟು 36 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 9 / 36
×

Alert

×

Kannada Letters Keypad References