ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಫಿಲಿಪ್ಪಿಯವರಿಗೆ
1. ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ [* ಫಿಲಿ. 1:4, 2:16] ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ [† ಫಿಲಿ. 1:27] ದೃಢವಾಗಿ ನಿಲ್ಲಿರಿ, ಪ್ರಿಯರೇ. [PS]
2. {ಉತ್ತೇಜನದ ಮಾತುಗಳು} [PS] ಕರ್ತನಲ್ಲಿ [‡ ಫಿಲಿ. 2:2] ಒಂದೇ ಮನಸ್ಸುಳ್ಳವರಾಗಿರಿ ಎಂದು ಯುವೊದ್ಯಳನ್ನೂ ಹಾಗೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
3. ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. [§ ಲೂಕ 10:20] ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ. [PE][PS]
4. [* ಫಿಲಿ. 3:1] ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.
5. ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, [† 1 ಕೊರಿ 16:23, ಯಾಕೋಬ. 5:8] ಕರ್ತನು ಹತ್ತಿರವಾಗಿದ್ದಾನೆ.
6. [‡ ಮತ್ತಾ 6:25] ಯಾವ ಸಂಬಂಧವಾಗಿಯೂ ಚಿಂತೆಮಾಡದೆ [§ ಜ್ಞಾ. 16:3] ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.
7. [* ಎಫೆ 3:19] ಆಗ ಎಲ್ಲಾ ಗ್ರಹಿಕೆಯನ್ನು ಮೀರುವ [† ವ. 9, ಯೆಶಾ 26:3, ಕೊಲೊ 3:15, ಯೋಹಾ 14:27] ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು. [PE][PS]
8. ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.
9. [‡ 1 ಥೆಸ. 4:1] ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು [§ ಫಿಲಿ. 3:17] ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ [* ಫಿಲಿ. 4:7, ರೋಮಾ. 15:33] ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು. [PS]
10. {ಅವರು ದಾನಕ್ಕಾಗಿ ಕೃತಜ್ಞತೆ} [PS] [† 2 ಕೊರಿ 11:9, ಫಿಲಿ. 2:30] ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.
11. ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ [‡ 1 ತಿಮೊ. 6:6-8, 2 ಕೊರಿ 9:8, ಇಬ್ರಿ. 13:5] ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ.
12. ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, [§ 1 ಕೊರಿ 4:11, 2 ಕೊರಿ 11:27] ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, [* 2 ಕೊರಿ 11:9] ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ.
13. [† 2 ಕೊರಿ 12:9, ಎಫೆ 3:16, 1 ತಿಮೊ. 1:12] ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
14. ಹೀಗಿದ್ದರೂ [‡ ಫಿಲಿ. 1:7] ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು.
15. ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ [§ 2 ಕೊರಿ 11:8-9] ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲಿರಿ.
16. ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲಾ.
17. [* 2 ಕೊರಿ 9:5] ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, [† ರೋಮಾ. 1:13] ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.
18. ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. [‡ ಫಿಲಿ. 2:25] ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ [§ ಇಬ್ರಿ. 13:16] ಮೆಚ್ಚಿಕೆಯಾದದ್ದು, [* ಆದಿ 8:21] ಸುಗಂಧವಾಸನೆಯೇ, ಇಷ್ಟ ಯಜ್ಞವೇ.
19. [† ಕೀರ್ತ 23:1, 2 ಕೊರಿ 9:8] ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ [‡ ರೋಮಾ. 2:4, 9:23, 10:12, ಎಫೆ 1:7,18, ] ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.
20. [§ ಗಲಾ. 1:5, ರೋಮಾ. 11:36] ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್‍. [PS]
21. {ವಂದನೆಗಳು} [PS] ಕ್ರಿಸ್ತ ಯೇಸುವಿನಲ್ಲಿರುವ ಪ್ರತಿಯೊಬ್ಬ ಭಕ್ತರಿಗೂ ನನ್ನ ವಂದನೆಯನ್ನು ಹೇಳಿರಿ. [* ಗಲಾ. 1:2] ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.
22. [† 2 ಕೊರಿ 13:13] ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. [PE][PS]
23. [‡ ರೋಮಾ. 16:20] ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ. [PE]

ಟಿಪ್ಪಣಿಗಳು

No Verse Added

ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 4
1 2 3 4
ಫಿಲಿಪ್ಪಿಯವರಿಗೆ 4:21
1 ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ * ಫಿಲಿ. 1:4, 2:16 ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ † ಫಿಲಿ. 1:27 ದೃಢವಾಗಿ ನಿಲ್ಲಿರಿ, ಪ್ರಿಯರೇ. ಉತ್ತೇಜನದ ಮಾತುಗಳು 2 ಕರ್ತನಲ್ಲಿ ಫಿಲಿ. 2:2 ಒಂದೇ ಮನಸ್ಸುಳ್ಳವರಾಗಿರಿ ಎಂದು ಯುವೊದ್ಯಳನ್ನೂ ಹಾಗೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ. 3 ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. § ಲೂಕ 10:20 ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ. 4 * ಫಿಲಿ. 3:1 ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ. 5 ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, 1 ಕೊರಿ 16:23, ಯಾಕೋಬ. 5:8 ಕರ್ತನು ಹತ್ತಿರವಾಗಿದ್ದಾನೆ. 6 ಮತ್ತಾ 6:25 ಯಾವ ಸಂಬಂಧವಾಗಿಯೂ ಚಿಂತೆಮಾಡದೆ § ಜ್ಞಾ. 16:3 ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ. 7 * ಎಫೆ 3:19 ಆಗ ಎಲ್ಲಾ ಗ್ರಹಿಕೆಯನ್ನು ಮೀರುವ † ವ. 9, ಯೆಶಾ 26:3, ಕೊಲೊ 3:15, ಯೋಹಾ 14:27 ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು. 8 ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ. 9 1 ಥೆಸ. 4:1 ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು § ಫಿಲಿ. 3:17 ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ * ಫಿಲಿ. 4:7, ರೋಮಾ. 15:33 ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು. ಅವರು ದಾನಕ್ಕಾಗಿ ಕೃತಜ್ಞತೆ 10 2 ಕೊರಿ 11:9, ಫಿಲಿ. 2:30 ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ. 11 ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ 1 ತಿಮೊ. 6:6-8, 2 ಕೊರಿ 9:8, ಇಬ್ರಿ. 13:5 ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ. 12 ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, § 1 ಕೊರಿ 4:11, 2 ಕೊರಿ 11:27 ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, * 2 ಕೊರಿ 11:9 ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ. 13 2 ಕೊರಿ 12:9, ಎಫೆ 3:16, 1 ತಿಮೊ. 1:12 ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ. 14 ಹೀಗಿದ್ದರೂ ಫಿಲಿ. 1:7 ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು. 15 ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ § 2 ಕೊರಿ 11:8-9 ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲಿರಿ. 16 ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲಾ. 17 * 2 ಕೊರಿ 9:5 ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, † ರೋಮಾ. 1:13 ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ. 18 ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಫಿಲಿ. 2:25 ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ § ಇಬ್ರಿ. 13:16 ಮೆಚ್ಚಿಕೆಯಾದದ್ದು, * ಆದಿ 8:21 ಸುಗಂಧವಾಸನೆಯೇ, ಇಷ್ಟ ಯಜ್ಞವೇ. 19 ಕೀರ್ತ 23:1, 2 ಕೊರಿ 9:8 ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ‡ ರೋಮಾ. 2:4, 9:23, 10:12, ಎಫೆ 1:7,18, ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು. 20 § ಗಲಾ. 1:5, ರೋಮಾ. 11:36 ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್‍. ವಂದನೆಗಳು 21 ಕ್ರಿಸ್ತ ಯೇಸುವಿನಲ್ಲಿರುವ ಪ್ರತಿಯೊಬ್ಬ ಭಕ್ತರಿಗೂ ನನ್ನ ವಂದನೆಯನ್ನು ಹೇಳಿರಿ. * ಗಲಾ. 1:2 ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ. 22 2 ಕೊರಿ 13:13 ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. 23 ರೋಮಾ. 16:20 ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 4
1 2 3 4
Common Bible Languages
West Indian Languages
×

Alert

×

kannada Letters Keypad References