1. {#1ಪೀಠಿಕೆ: ಜ್ಞಾನೋಕ್ತಿಗಳ ಉದ್ದೇಶ }
2. [PS]ಇಸ್ರಾಯೇಲರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು. [PE][QS]ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು, [QE][QS2]ಬುದ್ಧಿವಾದಗಳನ್ನು ಗ್ರಹಿಸಿಕೊಳ್ಳುವರು. [QE]
3. [QS]ಅವರು ವಿವೇಕಮಾರ್ಗದಲ್ಲಿ ಅಂದರೆ ನೀತಿ, [QE][QS2]ನ್ಯಾಯ ಮತ್ತು ಧರ್ಮಮಾರ್ಗಗಳಲ್ಲಿ ಶಿಕ್ಷಿತರಾಗುವರು. [QE]
4. [QS]ಈ ನುಡಿಗಳು ಮೂಢರಿಗೆ ಜಾಣತನವನ್ನೂ, [QE][QS2]ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು. [QE]
5. [QS]ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, [QE][QS2]ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು. [QE]
6. [QS]ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ. [QE]
7. [QS]ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, [QE][QS2]ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು. [QE]
8. {#1ಪಾಪಿಗಳ ಕುರಿತು ಎಚ್ಚರಿಕೆಗಳು } [QS]ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, [QE][QS2]ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ. [QE]
9. [QS]ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ, [QE][QS2]ಕೊರಳಿಗೆ ಹಾರದಂತಿರುವುದು. [QE]
10. [QS]ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ. [QE]
11. [QS]ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, [QE][QS2]ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ. [QE]
12. [QS]ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, [QE][QS2]ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ. [QE]
13. [QS]ಸಕಲವಿಧವಾದ ಅಮೂಲ್ಯ ಸಂಪತ್ತನ್ನು ಕಂಡುಹಿಡಿದು, [QE][QS2]ಕೊಳ್ಳೆಮಾಡಿ ನಮ್ಮ ಮನೆಗಳಲ್ಲಿ ತುಂಬಿಕೊಳ್ಳೋಣ. [QE]
14. [QS]ನಮ್ಮ ಸಂಗಡ ಚೀಟು ಹಾಕು; [QE][QS2]ನಮ್ಮೆಲ್ಲರ ಹಣದ ಚೀಲ ಒಂದೇ ಆಗಿರಲಿ” ಎಂದು ಹೇಳಿದರೆ, [QE]
15. [QS]ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, [QE][QS2]ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ. [QE]
16. [QS]ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, [QE][QS2]ಅವರು ರಕ್ತವನ್ನು ಸುರಿಸಲು ಆತುರಪಡುವರು. [QE]
17. [QS]ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವುದು ವ್ಯರ್ಥ. [QE]
18. [QS]ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, [QE][QS2]ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ. [QE]
19. [QS]ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; [QE][QS2]ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು. [QE]
20. {#1ಜ್ಞಾನವನ್ನು ತಿರಸ್ಕರಿಸಿದರೆ ಎಚ್ಚರ } [QS]ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, [QE][QS2]ಚೌಕಗಳಲ್ಲಿ ಧ್ವನಿಮಾಡುತ್ತಾಳೆ. [QE]
21. [QS]ಪೇಟೆಯ ಮುಖ್ಯಸ್ಥಾನದಲ್ಲಿ ಆಕೆ ಕೂಗುತ್ತಾಳೆ, [QE][QS2]ಊರ ಬಾಗಿಲಿನಲ್ಲಿ ಆಕೆಯು ನುಡಿಯುವುದೇನೆಂದರೆ, [QE]
22. [QS]“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? [QE][QS2]ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? [QE][QS2]ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು? [QE]
23. [QS]ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; [QE][QS2]ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, [QE][QS2]ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು. [QE]
24. [QS]ನಾನು ಕರೆದಾಗ ನೀವು ತಿರಸ್ಕರಿಸಿದಿರಿ. [QE][QS2]ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ; [QE]
25. [QS]ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ. [QE]
26. [QS]ಆದಕಾರಣ ಬಿರುಗಾಳಿಯಂತೆ ಅಪಾಯವೂ, [QE][QS2]ತುಫಾನಿನಂತೆ ಆಪತ್ತೂ ಬಂದು, ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ [QE]
27. [QS]ನಿಮ್ಮ ಅಪಾಯದಲ್ಲಿ ನಾನೂ ನಗುವೆನು; [QE][QS2]ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯ ಮಾಡುವೆನು. [QE]
28. [QS]ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, [QE][QS2]ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು. [QE]
29. [QS]ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ [QE][QS2]ತಿಳಿವಳಿಕೆಯನ್ನು ಹಗೆಮಾಡಿದರು. [QE]
30. [QS]ನನ್ನ ಬೋಧನೆಯನ್ನು ಕೇಳಲೊಲ್ಲದೆ, [QE][QS2]ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು. [QE]
31. [QS]ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, [QE][QS2]ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು. [QE]
32. [QS]ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, [QE][QS2]ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು. [QE]
33. [QS]ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು, [QE][QS2]ಯಾವ ಕೇಡಿಗೂ ಭಯಪಡದೆ ನೆಮ್ಮದಿಯಾಗಿ ಬಾಳುವನು” ಎಂಬುದೇ. [QE]