1. ಇಸ್ರಾಯೇಲರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು. [QBR]
2. ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು, [QBR2] ಬುದ್ಧಿವಾದಗಳನ್ನು ಗ್ರಹಿಸಿಕೊಳ್ಳುವರು. [QBR]
3. ಅವರು ವಿವೇಕಮಾರ್ಗದಲ್ಲಿ ಅಂದರೆ ನೀತಿ, [QBR2] ನ್ಯಾಯ ಮತ್ತು ಧರ್ಮಮಾರ್ಗಗಳಲ್ಲಿ ಶಿಕ್ಷಿತರಾಗುವರು. [QBR]
4. ಈ ನುಡಿಗಳು ಮೂಢರಿಗೆ ಜಾಣತನವನ್ನೂ, [QBR2] ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು. [QBR]
5. ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, [QBR2] ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು. [QBR]
6. ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ. [QBR]
7. ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, [QBR2] ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
8. {ಪಾಪಿಗಳ ಕುರಿತು ಎಚ್ಚರಿಕೆಗಳು} [PS] ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, [QBR2] ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ. [QBR]
9. ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ, [QBR2] ಕೊರಳಿಗೆ ಹಾರದಂತಿರುವುದು. [QBR]
10. ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ. [QBR]
11. ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, [QBR2] ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ. [QBR]
12. ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, [QBR2] ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ. [QBR]
13. ಸಕಲವಿಧವಾದ ಅಮೂಲ್ಯ ಸಂಪತ್ತನ್ನು ಕಂಡುಹಿಡಿದು, [QBR2] ಕೊಳ್ಳೆಮಾಡಿ ನಮ್ಮ ಮನೆಗಳಲ್ಲಿ ತುಂಬಿಕೊಳ್ಳೋಣ. [QBR]
14. ನಮ್ಮ ಸಂಗಡ ಚೀಟು ಹಾಕು; [QBR2] ನಮ್ಮೆಲ್ಲರ ಹಣದ ಚೀಲ ಒಂದೇ ಆಗಿರಲಿ” ಎಂದು ಹೇಳಿದರೆ, [QBR]
15. ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, [QBR2] ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ. [QBR]
16. ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, [QBR2] ಅವರು ರಕ್ತವನ್ನು ಸುರಿಸಲು ಆತುರಪಡುವರು. [QBR]
17. ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವುದು ವ್ಯರ್ಥ. [QBR]
18. ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, [QBR2] ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ. [QBR]
19. ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; [QBR2] ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು.
20. {ಜ್ಞಾನವನ್ನು ತಿರಸ್ಕರಿಸಿದರೆ ಎಚ್ಚರ} [PS] ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, [QBR2] ಚೌಕಗಳಲ್ಲಿ ಧ್ವನಿಮಾಡುತ್ತಾಳೆ. [QBR]
21. ಪೇಟೆಯ ಮುಖ್ಯಸ್ಥಾನದಲ್ಲಿ ಆಕೆ ಕೂಗುತ್ತಾಳೆ, [QBR2] ಊರ ಬಾಗಿಲಿನಲ್ಲಿ ಆಕೆಯು ನುಡಿಯುವುದೇನೆಂದರೆ, [QBR]
22. “ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? [QBR2] ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? [QBR2] ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು? [QBR]
23. ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; [QBR2] ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, [QBR2] ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು. [QBR]
24. ನಾನು ಕರೆದಾಗ ನೀವು ತಿರಸ್ಕರಿಸಿದಿರಿ. [QBR2] ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ; [QBR]
25. ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ. [QBR]
26. ಆದಕಾರಣ ಬಿರುಗಾಳಿಯಂತೆ ಅಪಾಯವೂ, [QBR2] ತುಫಾನಿನಂತೆ ಆಪತ್ತೂ ಬಂದು, ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ [QBR]
27. ನಿಮ್ಮ ಅಪಾಯದಲ್ಲಿ ನಾನೂ ನಗುವೆನು; [QBR2] ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯ ಮಾಡುವೆನು. [QBR]
28. ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, [QBR2] ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು. [QBR]
29. ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ [QBR2] ತಿಳಿವಳಿಕೆಯನ್ನು ಹಗೆಮಾಡಿದರು. [QBR]
30. ನನ್ನ ಬೋಧನೆಯನ್ನು ಕೇಳಲೊಲ್ಲದೆ, [QBR2] ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು. [QBR]
31. ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, [QBR2] ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು. [QBR]
32. ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, [QBR2] ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು. [QBR]
33. ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು, [QBR2] ಯಾವ ಕೇಡಿಗೂ ಭಯಪಡದೆ ನೆಮ್ಮದಿಯಾಗಿ ಬಾಳುವನು” ಎಂಬುದೇ. [PE]