1. [QS]ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, [QE][QS2]ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು. [QE]
2. [QS]ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, [QE][QS2]ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು. [QE]
3. [QS] [* ಅಥವಾ ಮೂರ್ಖನ ಬಾಯಲ್ಲಿ ಗರ್ವವು ಅಂಕುರಿಸುವದು, ]ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ, [QE][QS2]ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು. [QE]
4. [QS]ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ, [QE][QS2]ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಾಗುವುದು. [QE]
5. [QS]ಸತ್ಯಸಾಕ್ಷಿಯು ಸುಳ್ಳಾಡನು, [QE][QS2]ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು. [QE]
6. [QS]ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, [QE][QS2]ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು. [QE]
7. [QS]ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳಿವಳಿಕೆಯನ್ನೂ ಕಾಣಲಾರೆ. [QE]
8. [QS]ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, [QE][QS2]ಮೂಢರ ಮೂರ್ಖತನ ಮೋಸಕರ. [QE]
9. [QS]ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವುದು, [QE][QS2]ಯಥಾರ್ಥವಂತರಲ್ಲಿ (ದೇವರ) ದಯೆಯಿರುವುದು. [QE]
10. [QS]ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, [QE][QS2]ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ. [QE]
11. [QS]ದುಷ್ಟರ ಮನೆಗೆ ನಾಶನ, [QE][QS2]ಶಿಷ್ಟರ ಗುಡಾರಕ್ಕೆ ಏಳಿಗೆ. [QE]
12. [QS]ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. [QE][QS2]ಅದು ಕಟ್ಟಕಡೆಗೆ ಮರಣಮಾರ್ಗವೇ. [QE]
13. [QS]ನಗುವವನಿಗೂ ಮನೋವ್ಯಥೆಯುಂಟು, [QE][QS2]ಉಲ್ಲಾಸದ ಅಂತ್ಯವು ವ್ಯಾಕುಲವೇ. [QE]
14. [QS]ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, [QE][QS2]ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು. [QE]
15. [QS]ಮೂಢನು ಯಾವ ಮಾತನ್ನಾದರೂ ನಂಬುವನು, [QE][QS2]ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು. [QE]
16. [QS] [† ಅಥವಾ ಜ್ಞಾನಿಯು ಯೆಹೋವನಿಗೆ ಭಯಪಡುತ್ತಾನೆ ]ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, [QE][QS2]ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು. [QE]
17. [QS]ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, [QE][QS2][‡ ಅಥವಾ ಜ್ಞಾನಿಗಳು ಮೌನವಾಗಿರುತ್ತಾರೆ. ]ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು. [QE]
18. [QS]ಮೂರ್ಖರಿಗೆ ಮೂರ್ಖತನವೇ ಸ್ವತ್ತು, [QE][QS2]ಜಾಣರಿಗೆ ಜ್ಞಾನವೇ ಕಿರೀಟ. [QE]
19. [QS]ಕೆಟ್ಟವರು ಒಳ್ಳೆಯವರಿಗೆ ಬಾಗುವರು, [QE][QS2]ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು. [QE]
20. [QS]ಬಡವನು ನೆರೆಯವನಿಗೂ ಅಸಹ್ಯ, [QE][QS2]ಧನವಂತನಿಗೆ ಬಹು ಜನ ಮಿತ್ರರು. [QE]
21. [QS]ನೆರೆಯವನನ್ನು ತಿರಸ್ಕರಿಸುವವನು ದೋಷಿ, [QE][QS2]ದರಿದ್ರನನ್ನು ಕನಿಕರಿಸುವವನು ಧನ್ಯನು. [QE]
22. [QS]ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, [QE][QS2]ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು. [QE]
23. [QS]ಶ್ರಮೆಯಿಂದ ಸಮೃದ್ಧಿ, [QE][QS2]ಹರಟೆಯಿಂದ ಕೊರತೆ. [QE]
24. [QS]ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, [QE][QS2]ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ. [QE]
25. [QS]ಸತ್ಯಸಾಕ್ಷಿಯು ಪ್ರಾಣರಕ್ಷಕ, [QE][QS2]ಸುಳ್ಳುಸಾಕ್ಷಿಯು ವಂಚಕ. [QE]
26. [QS]ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, [QE][QS2]ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು. [QE]
27. [QS]ಯೆಹೋವನ ಭಯ ಜೀವದ ಬುಗ್ಗೆ, [QE][QS2]ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ. [QE]
28. [QS]ಪ್ರಜೆಗಳ ವೃದ್ಧಿ ರಾಜನ ಮಹಿಮೆ, [QE][QS2]ಪ್ರಜೆಗಳ ನಾಶ ಪ್ರಭುವಿಗೆ ಭಯ. [QE]
29. [QS]ದೀರ್ಘಶಾಂತನು ಕೇವಲ ಬುದ್ಧಿವಂತನು, [QE][QS2]ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು. [QE]
30. [QS]ಶಾಂತಗುಣವು ದೇಹಕ್ಕೆ ಜೀವಾಧಾರವು, [QE][QS2]ಕ್ರೋಧವು ಎಲುಬಿಗೆ ಕ್ಷಯವು. [QE]
31. [QS]ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, [QE][QS2]ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು. [QE]
32. [QS]ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, [QE][QS2]ಶಿಷ್ಟನು [§ ಅಥವಾ ತನ್ನ ಸತ್ಯದಲ್ಲಿ. ]ಮರಣಕಾಲದಲ್ಲಿಯೂ ಆಶ್ರಯಹೊಂದುವನು. [QE]
33. [QS]ವಿವೇಕಿಯ ಹೃದಯ ಜ್ಞಾನಾಶ್ರಯ, [QE][QS2]ಜ್ಞಾನಹೀನನ ಹೃದಯದಲ್ಲಿ ಅದು ಕಾಣದು. [QE]
34. [QS]ಪ್ರಜೆಗೆ ಧರ್ಮವು ಉನ್ನತಿ, [QE][QS2]ಅಧರ್ಮವು ಅವಮಾನ. [QE]
35. [QS]ಜಾಣನಾದ ಸೇವಕನಿಗೆ ರಾಜನ ಕೃಪೆ, [QE][QS2]ಮಾನಗೇಡಿಗೆ ರಾಜನ ರೌದ್ರ. [QE]