1. ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, [QBR2] ಬಿರುನುಡಿಯು ಸಿಟ್ಟನ್ನೇರಿಸುವುದು. [QBR]
2. ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, [QBR2] ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು. [QBR]
3. ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, [QBR2] ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು. [QBR]
4. ಸಂತೈಸುವ ನಾಲಿಗೆ ಜೀವವೃಕ್ಷವು, [QBR2] ಬಲತ್ಕರಿಸುವ ನಾಲಿಗೆ ಮನಮುರಿಯುವುದು. [QBR]
5. ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು, [QBR2] ಗದರಿಕೆಯನ್ನು ಗಮನಿಸುವವನು ಜಾಣನು. [QBR]
6. ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ, [QBR2] ದುಷ್ಟನ ಆದಾಯವು ನಷ್ಟಕ್ಕೆ ದಾರಿ. [QBR]
7. ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು. [QBR2] ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ. [QBR]
8. ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, [QBR2] ಶಿಷ್ಟರ ಬಿನ್ನಹ ಆತನಿಗೆ ಇಷ್ಟ. [QBR]
9. ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ, [QBR2] ಧರ್ಮಾಸಕ್ತನು ಆತನಿಗೆ ಪ್ರಿಯ. [QBR]
10. ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, [QBR2] ಗದರಿಕೆಯನ್ನು ಕೇಳದವನಿಗೆ ಸಾವು. [QBR]
11. ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ [QBR2] ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ. [QBR]
12. ಧರ್ಮನಿಂದಕನು ಗದರಿಕೆಯನ್ನು ಕೇಳನು, [QBR2] ಜ್ಞಾನಿಗಳ ಸಂಗಡ ಸೇರನು. [QBR]
13. ಹರ್ಷ ಹೃದಯದಿಂದ ಹಸನ್ಮುಖ, [QBR2] ಮನೋವ್ಯಥೆಯಿಂದ ಆತ್ಮಭಂಗ. [QBR]
14. ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು, [QBR2] ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವುದು. [QBR]
15. ದೀನನ ದಿನಗಳೆಲ್ಲಾ ದುಃಖಭರಿತ, [QBR2] ಹರ್ಷಹೃದಯನಿಗೆ ನಿತ್ಯವೂ ಔತಣ. [QBR]
16. ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ [QBR2] ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು. [QBR]
17. ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ, [QBR2] ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ. [QBR]
18. ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, [QBR2] ದೀರ್ಘಶಾಂತನು ಜಗಳವನ್ನು ಶಮನಪಡಿಸುವನು. [QBR]
19. ಸೋಮಾರಿಯ ಮಾರ್ಗ ಮುಳ್ಳುಬೇಲಿ, [QBR2] ಯಥಾರ್ಥವಂತನ ಮಾರ್ಗ ರಾಜಮಾರ್ಗ. [QBR]
20. ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು, [QBR2] ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು. [QBR]
21. ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು, [QBR2] ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು. [QBR]
22. ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, [QBR2] ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು. [QBR]
23. ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ! [QBR2] ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ! [QBR]
24. ಜೀವದ ಮಾರ್ಗವು ವಿವೇಕಿಯನ್ನು ಮೇಲಕ್ಕೆತ್ತುವುದು; [QBR2] ಅದು ಅವನನ್ನು ಪಾತಾಳದಿಂದ ತಪ್ಪಿಸುವುದು. [QBR]
25. ಯೆಹೋವನು ಗರ್ವಿಷ್ಠನ ಮನೆಯನ್ನು ಕೆಡವಿಬಿಡುವನು; [QBR2] ವಿಧವೆಯ ಮೇರೆಯನ್ನು ನೆಲೆಗೊಳಿಸುವನು. [QBR]
26. ಕುಯುಕ್ತಿಯು ಯೆಹೋವನಿಗೆ ಅಸಹ್ಯ, [QBR2] ನಯನುಡಿಯು ಆತನಿಗೆ ಪ್ರಿಯ. [QBR]
27. ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. [QBR2] ಲಂಚವನ್ನೊಪ್ಪದವನು ಸುಖವಾಗಿ ಬಾಳುವನು. [QBR]
28. ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ, [QBR2] ದುಷ್ಟನ ಬಾಯಿ ಕೆಟ್ಟದ್ದನ್ನು ಕಾರುತ್ತದೆ. [QBR]
29. ಯೆಹೋವನು ದುಷ್ಟರಿಗೆ ದೂರ, [QBR2] ಶಿಷ್ಟರ ಬಿನ್ನಹಕ್ಕೆ ಹತ್ತಿರ. [QBR]
30. [* ಮೂಲತಃ ಕಣ್ಣಿನ ಬೆಳಕು.] ಹಸನ್ಮುಖ ಹೃದಯಕ್ಕೆ ಆನಂದ, [QBR2] [† ಮೂಲತಃ ಕಿವಿಗೆ ಬಿದ್ದ ಒಳ್ಳೆಯ ಸುದ್ದಿ ಎಲುಬಿಗೆ ಪುಷ್ಟಿ.] ಶುಭಸಮಾಚಾರ ದೇಹಕ್ಕೆ ಆರೋಗ್ಯ. [QBR]
31. ಜೀವಪ್ರದವಾದ ಗದರಿಕೆಗೆ ಕಿವಿಗೊಡುವವನು, [QBR2] ಜ್ಞಾನಿಗಳ ನಡುವೆ ನೆಲೆಗೊಳ್ಳುವನು. [QBR]
32. ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು, [QBR2] ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು. [QBR]
33. ಯೆಹೋವನ ಭಯವೇ ಜ್ಞಾನೋಪದೇಶ, [QBR2] ಗೌರವಕ್ಕೆ ಮೊದಲು ವಿನಯ. [PE]