1. ಹೃದಯದ ಸಂಕಲ್ಪವು ಮನುಷ್ಯನ ವಶವು, [QBR2] ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು. [QBR]
2. ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧವಾಗಿದೆ, [QBR2] ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು. [QBR]
3. ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ, [QBR2] ನಿನ್ನ ಉದ್ದೇಶಗಳು ಸಫಲವಾಗುವವು. [QBR]
4. ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, [QBR2] ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ. [QBR]
5. ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ, [QBR2] ಅವರಿಗೆ ದಂಡನೆ ಖಂಡಿತ. [QBR]
6. ಕೃಪಾಸತ್ಯತೆಗಳಿಂದ ಪಾಪನಿವಾರಣೆ, [QBR2] ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ. [QBR]
7. ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, [QBR2] ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು. [QBR]
8. ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ, [QBR2] ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು. [QBR]
9. ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, [QBR2] ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು. [QBR]
10. ರಾಜನ ತುಟಿಗಳಲ್ಲಿ ದೈವೋಕ್ತಿ, [QBR2] ನ್ಯಾಯತೀರಿಸುವುದರಲ್ಲಿ ಅವನ ಬಾಯಿ ತಪ್ಪಿಹೋಗದು. [QBR]
11. ನ್ಯಾಯದ ಅಳತೆ ಮತ್ತು ತಕ್ಕಡಿಗಳು ಯೆಹೋವನ ಏರ್ಪಾಡು, [QBR2] ಚೀಲದಲ್ಲಿನ ತೂಕದಕಲ್ಲುಗಳೆಲ್ಲಾ ಆತನ ಕೈಕೆಲಸವೇ. [QBR]
12. ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು, [QBR2] ಅಧರ್ಮವನ್ನಾಚರಿಸಲು ಅಸಹ್ಯಪಡುವರು. [QBR]
13. ರಾಜರು ಸತ್ಯದ ತುಟಿಗಳನ್ನು ಮೆಚ್ಚುವರು, [QBR2] ಯಥಾರ್ಥವಾದಿಯನ್ನು ಪ್ರೀತಿಸುವರು. [QBR]
14. ರಾಜನ ಕೋಪ ಮೃತ್ಯುವಿನ ದೂತ, [QBR2] ಜಾಣನು ಅದನ್ನು ಶಮನಪಡಿಸುವನು. [QBR]
15. ಪ್ರಭುವಿನ ಮುಖಪ್ರಸನ್ನತೆ ಜೀವ, [QBR2] ಆತನ ದಯೆ ಮುಂಗಾರುಮುಗಿಲು. [QBR]
16. ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, [QBR2] ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು. [QBR]
17. ಸತ್ಯವಂತನ ರಾಜಮಾರ್ಗ ಹಾನಿಗೆ ದೂರ, [QBR2] ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು. [QBR]
18. ಗರ್ವದಿಂದ ಭಂಗ, [QBR2] ಉಬ್ಬಿನಿಂದ ದೊಬ್ಬು. [QBR]
19. ಸೊಕ್ಕಿನವರ ಸಂಗಡ ಸೂರೆಯನ್ನು ಹಂಚಿಕೊಳ್ಳುವುದಕ್ಕಿಂತಲೂ, [QBR2] ದೀನರ ಸಂಗಡ ದೈನ್ಯದಿಂದಿರುವುದು ವಾಸಿ. [QBR]
20. ದೇವರ ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು, [QBR2] ಯೆಹೋವನಲ್ಲಿ ಭರವಸವಿಡುವವನು ಭಾಗ್ಯವಂತನು. [QBR]
21. ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವುದು, [QBR2] ಸವಿತುಟಿಯಿಂದ ಉಪದೇಶ ಶಕ್ತಿಯು ಹೆಚ್ಚುವುದು. [QBR]
22. ವಿವೇಕಿಗೆ ವಿವೇಕವೇ ಜೀವದ ಬುಗ್ಗೆ, [QBR2] ಮೂರ್ಖನಿಗೆ ಮೂರ್ಖತನವೇ ದಂಡನೆ. [QBR]
23. ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, [QBR2] ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು. [QBR]
24. ಸವಿನುಡಿಯು ಜೇನುಕೊಡ, [QBR2] ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ. [QBR]
25. ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು, [QBR2] ಕಟ್ಟಕಡೆಗೆ ಅದು ಮರಣಮಾರ್ಗವೇ. [QBR]
26. ದುಡಿಯುವವನಿಗೆ ಅವನ ಹೊಟ್ಟೆಯೇ ದುಡಿಯುವಂತೆ ಮಾಡುವುದು, [QBR2] ದುಡಿಯಲಿಕ್ಕೆ ಅವನ ಬಾಯೇ ಅವನನ್ನು ಒತ್ತಾಯ ಮಾಡುವುದು. [QBR]
27. ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ, [QBR2] ಅವನ ಮಾತುಗಳು ಬೆಂಕಿಯ ಉರಿಯಂತಿದೆ. [QBR]
28. ತುಂಟನು ಜಗಳ ಬಿತ್ತುತ್ತಾನೆ, [QBR2] ಚಾಡಿಕೋರನು ಮಿತ್ರರನ್ನು ಅಗಲಿಸುತ್ತಾನೆ. [QBR]
29. ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, [QBR2] ದುರ್ಮಾರ್ಗಕ್ಕೆ ಎಳೆಯುವನು. [QBR]
30. ಕಣ್ಣನ್ನು ಮುಚ್ಚಿಕೊಳ್ಳುವವನು ಕುಯುಕ್ತಿಯನ್ನು ಕಲ್ಪಿಸುವನು, [QBR2] ತುಟಿಯನ್ನು ಕಚ್ಚುವವನು ಕೇಡನ್ನು ಸಾಧಿಸುವನು. [QBR]
31. ನರೆಗೂದಲೇ ಸುಂದರ ಕಿರೀಟವು, [QBR2] ಅದು ಧರ್ಮಮಾರ್ಗದಲ್ಲಿ ದೊರಕುವುದು. [QBR]
32. ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, [QBR2] ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ. [QBR]
33. ಮಡಲಿನಲ್ಲಿ ಚೀಟು ಹಾಕಬಹುದು, [QBR2] ಅದರ ತೀರ್ಪು ಯೆಹೋವನದೇ. [PE]