1. [QS]ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ, [QE][QS2]ಸಮಾಧಾನದ ಒಣತುತ್ತೇ ಮೇಲು. [QE]
2. [QS]ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು, [QE][QS2]ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು. [QE]
3. [QS]ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, [QE][QS2]ಹೃದಯಗಳನ್ನು ಶೋಧಿಸುವವನು ಯೆಹೋವನೇ. [QE]
4. [QS]ಕೆಡುಕನು ಕೆಟ್ಟ ತುಟಿಗಳನ್ನು ಗಮನಿಸುವನು, [QE][QS2]ಸುಳ್ಳುಗಾರನು ನಾಶನದ ನಾಲಿಗೆಗೆ ಕಿವಿಗೊಡುವನು. [QE]
5. [QS]ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, [QE][QS2]ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು. [QE]
6. [QS]ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ, [QE][QS2]ತಂದೆತಾಯಿಗಳು ಮಕ್ಕಳಿಗೆ ಭೂಷಣ. [QE]
7. [QS]ಉತ್ತಮವಾದ ಮಾತು ಮೂರ್ಖನಿಗೆ ಅಯುಕ್ತ, [QE][QS2]ಸುಳ್ಳುಮಾತು ಉತ್ತಮನಿಗೆ ಮತ್ತೂ ಅಯುಕ್ತ. [QE]
8. [QS]ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, [QE][QS2]ಎಲ್ಲಿ ಹೋದರೂ ಅವನಿಗೆ ಅನುಕೂಲವೇ. [QE]
9. [QS]ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, [QE][QS2]ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು. [QE]
10. [QS]ಮಂದಮತಿಗೆ ನೂರು ಪೆಟ್ಟು ಹೊಡೆಯುವುದಕ್ಕಿಂತಲೂ, [QE][QS2]ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ. [QE]
11. [QS]ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು, [QE][QS2]ಕ್ರೂರದೂತನು ಅವನನ್ನು ಆಕ್ರಮಿಸುವನು. [QE]
12. [QS]ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, [QE][QS2]ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು. [QE]
13. [QS]ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು. [QE]
14. [QS]ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, [QE][QS2]ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು. [QE]
15. [QS]ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು [QE][QS2]ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು. [QE]
16. [QS]ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? [QE][QS2]ಅವನಿಗೆ ಬುದ್ಧಿಯೇ ಇಲ್ಲವಲ್ಲಾ. [QE]
17. [QS]ಮಿತ್ರನ ಪ್ರೀತಿಯು ನಿರಂತರ, [QE][QS2]ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ. [QE]
18. [QS]ನೆರೆಯವನಿಗಾಗಿ ಪ್ರಮಾಣಮಾಡಿ ಹೊಣೆಯಾದವನು [QE][QS2]ಬುದ್ಧಿಹೀನನೇ ಸರಿ. [QE]
19. [QS]ಪಾಪಪ್ರಿಯನು ಕಲಹಪ್ರಿಯ, [QE][QS2]ಸೊಕ್ಕಿನಿಂದ ಮಾತನಾಡುವವನು ಕೇಡು ಬರಮಾಡಿಕೊಳ್ಳುವನು.[* ಸೊಕ್ಕಿನಿಂದ ಮಾತನಾಡುವವನು ಕೇಡು ಬರಮಾಡಿಕೊಳ್ಳುವನು. ಅಥವಾ ತನ್ನ ಬಾಗಿಲನ್ನು ಎತ್ತರಿಸುವವನು ಹಾಳಾಗುವನು. ] [QE]
20. [QS]ವಕ್ರ ಹೃದಯನು ಶುಭವನ್ನು ಪಡೆಯನು, [QE][QS2]ಕೆಟ್ಟ ನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು. [QE]
21. [QS]ಮೂರ್ಖನನ್ನು ಹೆತ್ತವರಿಗೆ ವ್ಯಥೆ, [QE][QS2]ಮೂರ್ಖನ ತಂದೆಗೆ ವ್ಯಸನ. [QE]
22. [QS]ಹರ್ಷಹೃದಯವು ಒಳ್ಳೆಯ ಔಷಧ, [QE][QS2]ಕುಗ್ಗಿದ ಮನದಿಂದ ಅನಾರೋಗ್ಯ. [QE]
23. [QS]ದುಷ್ಟನು ಲಂಚವನ್ನು ಗುಪ್ತವಾಗಿ ತೆಗೆದುಕೊಂಡು, [QE][QS2]ನ್ಯಾಯವನ್ನು ತಪ್ಪಿಸುವನು. [QE]
24. [QS]ವಿವೇಕಿಗೆ ಜ್ಞಾನವೇ ಗುರಿಯಾಗಿರುವುದು, [QE][QS2]ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವುದು. [QE]
25. [QS]ಜ್ಞಾನಹೀನನಾದ ಮಗನು ತಂದೆಗೆ ಕಿರಿಕಿರಿ, [QE][QS2]ತಾಯಿಗೆ ಕರಕರೆ. [QE]
26. [QS]ಶಿಷ್ಟನಿಗೆ ದಂಡನೆ ಯುಕ್ತವಲ್ಲ, [QE][QS2]ಧರ್ಮಿಷ್ಠನಿಗೆ ಪೆಟ್ಟು ಅಧರ್ಮ. [QE]
27. [QS]ಮಿತವಾಗಿ ಮಾತನಾಡುವವನು ಜ್ಞಾನಿ, [QE][QS2]ಶಾಂತಾತ್ಮನು ವಿವೇಕಿ. [QE]
28. [QS]ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯೆಂತಲೂ, [QE][QS2]ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು. [QE]