1. ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ, [QBR2] ಸಮಾಧಾನದ ಒಣತುತ್ತೇ ಮೇಲು. [QBR]
2. ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು, [QBR2] ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು. [QBR]
3. ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, [QBR2] ಹೃದಯಗಳನ್ನು ಶೋಧಿಸುವವನು ಯೆಹೋವನೇ. [QBR]
4. ಕೆಡುಕನು ಕೆಟ್ಟ ತುಟಿಗಳನ್ನು ಗಮನಿಸುವನು, [QBR2] ಸುಳ್ಳುಗಾರನು ನಾಶನದ ನಾಲಿಗೆಗೆ ಕಿವಿಗೊಡುವನು. [QBR]
5. ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, [QBR2] ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು. [QBR]
6. ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ, [QBR2] ತಂದೆತಾಯಿಗಳು ಮಕ್ಕಳಿಗೆ ಭೂಷಣ. [QBR]
7. ಉತ್ತಮವಾದ ಮಾತು ಮೂರ್ಖನಿಗೆ ಅಯುಕ್ತ, [QBR2] ಸುಳ್ಳುಮಾತು ಉತ್ತಮನಿಗೆ ಮತ್ತೂ ಅಯುಕ್ತ. [QBR]
8. ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, [QBR2] ಎಲ್ಲಿ ಹೋದರೂ ಅವನಿಗೆ ಅನುಕೂಲವೇ. [QBR]
9. ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, [QBR2] ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು. [QBR]
10. ಮಂದಮತಿಗೆ ನೂರು ಪೆಟ್ಟು ಹೊಡೆಯುವುದಕ್ಕಿಂತಲೂ, [QBR2] ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ. [QBR]
11. ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು, [QBR2] ಕ್ರೂರದೂತನು ಅವನನ್ನು ಆಕ್ರಮಿಸುವನು. [QBR]
12. ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, [QBR2] ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು. [QBR]
13. ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು. [QBR]
14. ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, [QBR2] ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು. [QBR]
15. ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು [QBR2] ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು. [QBR]
16. ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? [QBR2] ಅವನಿಗೆ ಬುದ್ಧಿಯೇ ಇಲ್ಲವಲ್ಲಾ. [QBR]
17. ಮಿತ್ರನ ಪ್ರೀತಿಯು ನಿರಂತರ, [QBR2] ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ. [QBR]
18. ನೆರೆಯವನಿಗಾಗಿ ಪ್ರಮಾಣಮಾಡಿ ಹೊಣೆಯಾದವನು [QBR2] ಬುದ್ಧಿಹೀನನೇ ಸರಿ. [QBR]
19. ಪಾಪಪ್ರಿಯನು ಕಲಹಪ್ರಿಯ, [QBR2] ಸೊಕ್ಕಿನಿಂದ ಮಾತನಾಡುವವನು ಕೇಡು ಬರಮಾಡಿಕೊಳ್ಳುವನು. [* ಸೊಕ್ಕಿನಿಂದ ಮಾತನಾಡುವವನು ಕೇಡು ಬರಮಾಡಿಕೊಳ್ಳುವನು. ಅಥವಾ ತನ್ನ ಬಾಗಿಲನ್ನು ಎತ್ತರಿಸುವವನು ಹಾಳಾಗುವನು.] [QBR]
20. ವಕ್ರ ಹೃದಯನು ಶುಭವನ್ನು ಪಡೆಯನು, [QBR2] ಕೆಟ್ಟ ನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು. [QBR]
21. ಮೂರ್ಖನನ್ನು ಹೆತ್ತವರಿಗೆ ವ್ಯಥೆ, [QBR2] ಮೂರ್ಖನ ತಂದೆಗೆ ವ್ಯಸನ. [QBR]
22. ಹರ್ಷಹೃದಯವು ಒಳ್ಳೆಯ ಔಷಧ, [QBR2] ಕುಗ್ಗಿದ ಮನದಿಂದ ಅನಾರೋಗ್ಯ. [QBR]
23. ದುಷ್ಟನು ಲಂಚವನ್ನು ಗುಪ್ತವಾಗಿ ತೆಗೆದುಕೊಂಡು, [QBR2] ನ್ಯಾಯವನ್ನು ತಪ್ಪಿಸುವನು. [QBR]
24. ವಿವೇಕಿಗೆ ಜ್ಞಾನವೇ ಗುರಿಯಾಗಿರುವುದು, [QBR2] ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವುದು. [QBR]
25. ಜ್ಞಾನಹೀನನಾದ ಮಗನು ತಂದೆಗೆ ಕಿರಿಕಿರಿ, [QBR2] ತಾಯಿಗೆ ಕರಕರೆ. [QBR]
26. ಶಿಷ್ಟನಿಗೆ ದಂಡನೆ ಯುಕ್ತವಲ್ಲ, [QBR2] ಧರ್ಮಿಷ್ಠನಿಗೆ ಪೆಟ್ಟು ಅಧರ್ಮ. [QBR]
27. ಮಿತವಾಗಿ ಮಾತನಾಡುವವನು ಜ್ಞಾನಿ, [QBR2] ಶಾಂತಾತ್ಮನು ವಿವೇಕಿ. [QBR]
28. ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯೆಂತಲೂ, [QBR2] ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು. [PE]