1. [QS]ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, [QE][QS2]ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ. [QE]
2. [QS]ತಿಳಿವಳಿಕೆಯಿಲ್ಲದೆ ಕೋರುವುದು ಯುಕ್ತವಲ್ಲ, [QE][QS2]ದುಡುಕುವ ಕಾಲು ದಾರಿತಪ್ಪುವುದು. [QE]
3. [QS]ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, [QE][QS2]ಯೆಹೋವನ ಮೇಲೆ ಕುದಿಯುವನು. [QE]
4. [QS]ಭಾಗ್ಯವಂತನಿಗೆ ಬಹು ಮಂದಿ ಸ್ನೇಹಿತರು, [QE][QS2]ಬಡವನಿಗೆ ಇದ್ದ ಸ್ನೇಹಿತನೂ ದೂರವಾಗುವನು. [QE]
5. [QS]ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, [QE][QS2]ಸುಳ್ಳಾಡುವವನು ತಪ್ಪಿಸಿಕೊಳ್ಳನು. [QE]
6. [QS]ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, [QE][QS2]ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ. [QE]
7. [QS]ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, [QE][QS2]ಹೌದು, ಮಿತ್ರರೂ ಅವನಿಗೆ ದೂರವಾಗುವರು. [QE][QS2]ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು. [QE]
8. [QS]ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, [QE][QS2]ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು. [QE]
9. [QS]ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, [QE][QS2]ಸುಳ್ಳಾಡುವವನು ಹಾಳಾಗುವನು. [QE]
10. [QS]ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, [QE][QS2]ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ. [QE]
11. [QS]ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, [QE][QS2]ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ. [QE]
12. [QS]ರಾಜನ ರೋಷವು ಸಿಂಹದ ಗರ್ಜನೆ, [QE][QS2]ಅವನ ದಯೆಯು ಪೈರಿನ ಇಬ್ಬನಿ. [QE]
13. [QS]ಜ್ಞಾನಹೀನನಾದ ಮಗನು ತಂದೆಗೆ ಹಾನಿ, [QE][QS2]ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ. [QE]
14. [QS]ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, [QE][QS2]ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ. [QE]
15. [QS]ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, [QE][QS2]ಸೋಮಾರಿಯು ಹಸಿವೆಗೊಳ್ಳುವನು. [QE]
16. [QS]ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, [QE][QS2]ನಡತೆಯನ್ನು ಲಕ್ಷಿಸದವನು ಸಾಯುವನು. [QE]
17. [QS]ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, [QE][QS2]ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು. [QE]
18. [QS]ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, [QE][QS2]ಹಾಳುಮಾಡಲು ಮನಸ್ಸು ಮಾಡಬೇಡ, [QE]
19. [QS]ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, [QE][QS2]ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು. [QE]
20. [QS]ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, [QE][QS2]ಮುಂದೆ ಜ್ಞಾನಿಯಾಗುವಿ. [QE]
21. [QS]ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, [QE][QS2]ಯೆಹೋವನ ಸಂಕಲ್ಪವೇ ಈಡೇರುವುದು. [QE]
22. [QS] [* ಅಥವಾ ಇಷ್ಟವು ಔದಾರ್ಯದ ಪ್ರಮಾಣ, ಇದ್ದರೂ ಇಲ್ಲವೆಂದು ಸುಳ್ಳಾಡುವವನಿಗಿಂತಲೂ, ಏನೂ ಇಲ್ಲದವನೇ ಲೇಸು. ]ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, [QE][QS2]ಬಡವನಾಗಿರುವುದು ಉತ್ತಮ. [QE]
23. [QS]ಯೆಹೋವನ ಭಯವು ಜೀವದಾಯಕವು, [QE][QS2]ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, [QE][QS2]ಅವನಿಗೆ ಕೇಡು ಸಂಭವಿಸದು. [QE]
24. [QS]ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, [QE][QS2]ತಿರುಗಿ ಬಾಯಿಯ ಹತ್ತಿರಕ್ಕೆ ತರಲಾರನು. [QE]
25. [QS]ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು, [QE][QS2]ವಿವೇಕಿಯನ್ನು ಗದರಿಸು, ತಾನೇ ತಿಳಿವಳಿಕೆಯನ್ನು ಗ್ರಹಿಸುವನು. [QE]
26. [QS]ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು, [QE][QS2]ನಾಚಿಕೆಯನ್ನು ಮತ್ತು ಅವಮಾನವನ್ನು ಉಂಟುಮಾಡುವನು. [QE]
27. [QS]ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, [QE][QS2]ಉಪದೇಶ ಕೇಳುವುದನ್ನೇ ಬಿಟ್ಟುಬಿಡು. [QE]
28. [QS]ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು, [QE][QS2]ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವುದು. [QE]
29. [QS]ಧರ್ಮನಿಂದಕರಿಗೆ ದಂಡನೆಯ ತೀರ್ಪು ಸಿದ್ಧ, [QE][QS2]ಮೂಢರ ಬೆನ್ನಿಗೆ ಪೆಟ್ಟು ಖಂಡಿತ. [QE]