1. {#1ಜ್ಞಾನದ ಫಲ } [QS]ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, [QE][QS2]ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ, [QE]
2. [QS]ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, [QE][QS2]ಹೃದಯವನ್ನು ವಿವೇಕದ ಕಡೆಗೂ ತಿರುಗಿಸು; [QE]
3. [QS]ಬುದ್ಧಿಗಾಗಿ ಮೊರೆಯಿಟ್ಟು, ವಿವೇಕಕ್ಕಾಗಿ ಕೂಗಿಕೋ. [QE]
4. [QS]ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು; [QE]
5. [QS]ಆಗ ನೀನು ಯೆಹೋವನ ಭಯವನ್ನು ಅರಿತು, [QE][QS2]ದೈವಜ್ಞಾನವನ್ನು ಪಡೆದುಕೊಳ್ಳುವಿ. [QE]
6. [QS]ಯೆಹೋವನೇ ಜ್ಞಾನವನ್ನು ಕೊಡುವಾತನು, [QE][QS2]ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ. [QE]
7. [QS]ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. [QE][QS2]ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು, [QE]
8. [QS]ನ್ಯಾಯಮಾರ್ಗವನ್ನು ರಕ್ಷಿಸುತ್ತಾ, [QE][QS2]ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು. [QE]
9. [QS]ಹೀಗಿರಲು ನೀನು ನೀತಿ, ನ್ಯಾಯ, ಧರ್ಮವನ್ನೂ ಅಂದರೆ [QE][QS2]ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ. [QE]
10. [QS]ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವುದು, [QE][QS2]ತಿಳಿವಳಿಕೆಯು ನಿನ್ನ ಆತ್ಮಕ್ಕೆ ಹಿತಕರವಾಗಿರುವುದು. [QE]
11. [QS]ಬುದ್ಧಿಯು ನಿನಗೆ ಕಾವಲಾಗಿರುವುದು, [QE][QS2]ವಿವೇಕವು ನಿನ್ನನ್ನು ಕಾಪಾಡುವುದು. [QE]
12. [QS]ಇದರಿಂದ ನೀನು ದುರ್ಮಾರ್ಗದಿಂದಲೂ, [QE][QS2]ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ. [QE]
13. [QS]ಅವರಾದರೋ ಕತ್ತಲೆಯ ಮಾರ್ಗಗಳನ್ನು ಹಿಡಿಯಬೇಕೆಂದು, [QE][QS2]ಧರ್ಮಮಾರ್ಗಗಳನ್ನು ತೊರೆದುಬಿಡುವರು. [QE]
14. [QS]ಅವರು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸಿ, [QE][QS2]ಕೆಟ್ಟವರ ದುಷ್ಟತನದಲ್ಲಿ ಆನಂದಿಸುವರು. [QE]
15. [QS]ಅವರ ಮಾರ್ಗಗಳು ವಕ್ರವಾಗಿವೆ. [QE][QS2]ಅವರ ನಡತೆಗಳು ದುರ್ನಡತೆಗಳೇ. [QE]
16. [QS]ವಿವೇಕವು ನಿನ್ನನ್ನು ಜಾರಳಿಂದ ಅಂದರೆ [QE][QS2]ಸವಿಮಾತನಾಡುವ ಪರಸ್ತ್ರೀಯಿಂದ ತಪ್ಪಿಸುವುದು. [QE]
17. [QS]ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ, [QE][QS2]ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳೆ. [QE]
18. [QS]ಅವಳ ಮನೆಯು ಪಾತಾಳಕ್ಕೆ ಇಳಿಯುವ ದಾರಿ, [QE][QS2]ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ. [QE]
19. [QS]ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವುದಿಲ್ಲ, [QE][QS2]ಅವರಿಗೆ ಜೀವದ ಮಾರ್ಗವು ದೊರೆಯುವುದೇ ಇಲ್ಲ. [QE]
20. [QS]ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ [QE][QS2]ವಿವೇಕವು ನಿನ್ನನ್ನು ಪ್ರೇರೇಪಿಸಿ, [QE][QS2]ನೀತಿವಂತರ ದಾರಿಗಳನ್ನು ಹಿಡಿಯುವ ಹಾಗೆ ಮಾಡುವುದು. [QE]
21. [QS]ಯಥಾರ್ಥವಂತರು ದೇಶದಲ್ಲಿ ಸ್ವತಂತ್ರರಾಗಿರುವರು, [QE][QS2]ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು. [QE]
22. [QS]ದುಷ್ಟರಾದರೋ ದೇಶದೊಳಗಿಂದ ತೆಗೆದುಹಾಕಲ್ಪಡುವರು, [QE][QS2]ದ್ರೋಹಿಗಳು ನಿರ್ಮೂಲರಾಗುವರು. [QE]