1. {ಜ್ಞಾನದ ಫಲ} [PS] ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, [QBR2] ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ, [QBR]
2. ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, [QBR2] ಹೃದಯವನ್ನು ವಿವೇಕದ ಕಡೆಗೂ ತಿರುಗಿಸು; [QBR]
3. ಬುದ್ಧಿಗಾಗಿ ಮೊರೆಯಿಟ್ಟು, ವಿವೇಕಕ್ಕಾಗಿ ಕೂಗಿಕೋ. [QBR]
4. ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು; [QBR]
5. ಆಗ ನೀನು ಯೆಹೋವನ ಭಯವನ್ನು ಅರಿತು, [QBR2] ದೈವಜ್ಞಾನವನ್ನು ಪಡೆದುಕೊಳ್ಳುವಿ. [QBR]
6. ಯೆಹೋವನೇ ಜ್ಞಾನವನ್ನು ಕೊಡುವಾತನು, [QBR2] ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ. [QBR]
7. ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. [QBR2] ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು, [QBR]
8. ನ್ಯಾಯಮಾರ್ಗವನ್ನು ರಕ್ಷಿಸುತ್ತಾ, [QBR2] ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು. [QBR]
9. ಹೀಗಿರಲು ನೀನು ನೀತಿ, ನ್ಯಾಯ, ಧರ್ಮವನ್ನೂ ಅಂದರೆ [QBR2] ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ. [QBR]
10. ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವುದು, [QBR2] ತಿಳಿವಳಿಕೆಯು ನಿನ್ನ ಆತ್ಮಕ್ಕೆ ಹಿತಕರವಾಗಿರುವುದು. [QBR]
11. ಬುದ್ಧಿಯು ನಿನಗೆ ಕಾವಲಾಗಿರುವುದು, [QBR2] ವಿವೇಕವು ನಿನ್ನನ್ನು ಕಾಪಾಡುವುದು. [QBR]
12. ಇದರಿಂದ ನೀನು ದುರ್ಮಾರ್ಗದಿಂದಲೂ, [QBR2] ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ. [QBR]
13. ಅವರಾದರೋ ಕತ್ತಲೆಯ ಮಾರ್ಗಗಳನ್ನು ಹಿಡಿಯಬೇಕೆಂದು, [QBR2] ಧರ್ಮಮಾರ್ಗಗಳನ್ನು ತೊರೆದುಬಿಡುವರು. [QBR]
14. ಅವರು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸಿ, [QBR2] ಕೆಟ್ಟವರ ದುಷ್ಟತನದಲ್ಲಿ ಆನಂದಿಸುವರು. [QBR]
15. ಅವರ ಮಾರ್ಗಗಳು ವಕ್ರವಾಗಿವೆ. [QBR2] ಅವರ ನಡತೆಗಳು ದುರ್ನಡತೆಗಳೇ. [QBR]
16. ವಿವೇಕವು ನಿನ್ನನ್ನು ಜಾರಳಿಂದ ಅಂದರೆ [QBR2] ಸವಿಮಾತನಾಡುವ ಪರಸ್ತ್ರೀಯಿಂದ ತಪ್ಪಿಸುವುದು. [QBR]
17. ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ, [QBR2] ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳೆ. [QBR]
18. ಅವಳ ಮನೆಯು ಪಾತಾಳಕ್ಕೆ ಇಳಿಯುವ ದಾರಿ, [QBR2] ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ. [QBR]
19. ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವುದಿಲ್ಲ, [QBR2] ಅವರಿಗೆ ಜೀವದ ಮಾರ್ಗವು ದೊರೆಯುವುದೇ ಇಲ್ಲ. [QBR]
20. ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ [QBR2] ವಿವೇಕವು ನಿನ್ನನ್ನು ಪ್ರೇರೇಪಿಸಿ, [QBR2] ನೀತಿವಂತರ ದಾರಿಗಳನ್ನು ಹಿಡಿಯುವ ಹಾಗೆ ಮಾಡುವುದು. [QBR]
21. ಯಥಾರ್ಥವಂತರು ದೇಶದಲ್ಲಿ ಸ್ವತಂತ್ರರಾಗಿರುವರು, [QBR2] ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು. [QBR]
22. ದುಷ್ಟರಾದರೋ ದೇಶದೊಳಗಿಂದ ತೆಗೆದುಹಾಕಲ್ಪಡುವರು, [QBR2] ದ್ರೋಹಿಗಳು ನಿರ್ಮೂಲರಾಗುವರು. [PE]