1. ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, [QBR2] ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ. [QBR]
2. ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, [QBR2] ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು. [QBR]
3. ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು, [QBR2] ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ. [QBR]
4. ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, [QBR2] ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು? [QBR]
5. ಮನುಷ್ಯನ ಹೃದಯಸಂಕಲ್ಪವು ಆಳವಾದ ಬಾವಿಯ ನೀರು. [QBR2] ಆದರೆ ವಿವೇಕಿಯು ಅದನ್ನು ಸೇದಬಲ್ಲನು. [QBR]
6. ಸ್ನೇಹಿತರೆಂದು ಹೇಳಿಕೊಳ್ಳುವವರು ಬಹಳ ಜನರು, [QBR2] ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು? [QBR]
7. ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು, [QBR2] ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು. [QBR]
8. ರಾಜನು ನ್ಯಾಯಾಸನಾರೂಢನಾಗಿ, [QBR2] ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು. [QBR]
9. “ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, [QBR2] ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು? [QBR]
10. ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, [QBR2] ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ. [QBR]
11. ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ, [QBR2] ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು. [QBR]
12. ಕೇಳುವ ಕಿವಿ, ನೋಡುವ ಕಣ್ಣು, [QBR2] ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ. [QBR]
13. ನಿದ್ರಾನಿರತನಾಗಿರಬೇಡ! ಬಡವನಾದೀಯೆ, [QBR2] ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ. [QBR]
14. ಕೊಳ್ಳುವವನು, “ಚೆನ್ನಾಗಿಲ್ಲ, ಚೆನ್ನಾಗಿಲ್ಲ” ಎಂದು ಹೇಳುತ್ತಾನೆ, [QBR2] ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ. [QBR]
15. ಹೊನ್ನು ಉಂಟು, ಹವಳದ ರಾಶಿ ಉಂಟು, [QBR2] ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ. [QBR]
16. ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, [QBR2] ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ. [QBR]
17. ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, [QBR2] ಆ ಮೇಲೆ ಅವನ ಬಾಯಿ ಮರಳಿನಿಂದ ತುಂಬುವುದು. [QBR]
18. ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, [QBR2] ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು. [QBR]
19. ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, [QBR2] ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ. [QBR]
20. ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, [QBR2] ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು. [QBR]
21. ಮೊದಲು ಬೇಗನೆ ಬಾಚಿಕೊಂಡ ಸ್ವತ್ತು, [QBR2] ಕೊನೆಯಲ್ಲಿ ಕಳೆದು ಹೋಗುವುದು. [QBR]
22. ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, [QBR2] ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು. [QBR]
23. ತೂಕದ ಕಲ್ಲನ್ನು ಹೆಚ್ಚಿಸುವುದು, ತಗ್ಗಿಸುವುದು ಯೆಹೋವನಿಗೆ ಅಸಹ್ಯ, [QBR2] ಮೋಸದ ತಕ್ಕಡಿ ಒಳ್ಳೆಯದಲ್ಲ. [QBR]
24. ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ, [QBR2] ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು? [QBR]
25. “ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, [QBR2] ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು. [QBR]
26. ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ, [QBR2] ಅವರನ್ನು ತೂರಿಬಿಡುವನು. [QBR]
27. ಮನುಷ್ಯನ ಆತ್ಮವು ಯೆಹೋವನ ದೀಪವಾಗಿದೆ, [QBR2] ಅದು ಅಂತರಂಗವನ್ನೆಲ್ಲಾ ಶೋಧಿಸುತ್ತದೆ. [QBR]
28. ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು, [QBR2] ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ. [QBR]
29. ಯುವಕರಿಗೆ ಬಲವು ಭೂಷಣ, [QBR2] ಮುದುಕರಿಗೆ ನರೆಯು ಒಡವೆ. [QBR]
30. ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೊಳೆದುಬಿಡುವುದು, [QBR2] ಏಟುಗಳು ಅಂತರಂಗವನ್ನು ಶುದ್ಧಿಮಾಡುವುದು. [PE]