1. ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, [QBR2] ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ. [QBR]
2. ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ, [QBR2] ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು. [QBR]
3. ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ. [QBR]
4. ಗರ್ವದ ದೃಷ್ಟಿ, ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, [QBR2] ಇವು ಧರ್ಮವಿರುದ್ಧ. [QBR]
5. ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, [QBR2] ಆತುರಪಡುವವರಿಗೆಲ್ಲಾ ಕೊರತೆಯೇ. [QBR]
6. ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, [QBR2] ಮೃತ್ಯುಪಾಶದಂತೆ ನಾಶಕರ. [QBR]
7. ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, [QBR2] ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವುದು. [QBR]
8. ದೋಷಿಯ ದಾರಿ ಡೊಂಕು; [QBR2] ಶುದ್ಧನ ನಡತೆ ಸರಳ. [QBR]
9. ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, [QBR2] ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು. [QBR]
10. ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು [QBR2] ನೆರೆಯವನಿಗೂ ದಯೆತೋರಿಸನು. [QBR]
11. ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು, [QBR2] ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು. [QBR]
12. ನೀತಿಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆ ತಂದು, [QBR2] ಅಧರ್ಮಿಗಳನ್ನು ಕೆಡವಿ ಅವರನ್ನು ಕೇಡಿಗೆ ತಳ್ಳುವನು. [QBR]
13. ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, [QBR2] ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು. [QBR]
14. ಗುಪ್ತ ಬಹುಮಾನವು ಕೋಪವನ್ನಾರಿಸುವುದು, [QBR2] ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು. [QBR]
15. ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ, [QBR2] ಕೆಡುಕರಿಗೆ ಕೇಡು. [QBR]
16. ಜ್ಞಾನಮಾರ್ಗದಿಂದ ತಪ್ಪಿದವನಿಗೆ, [QBR2] ಪ್ರೇತಸಮೂಹವೇ ವಿಶ್ರಾಂತಿಸ್ಥಾನ. [QBR]
17. ಭೋಗಾಸಕ್ತನು ಕೊರತೆಪಡುವನು, [QBR2] ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು. [QBR]
18. ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ, [QBR2] ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡಾಗುವರು. [QBR]
19. ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ, [QBR2] ಕಾಡಿನ ವಾಸವೇ ಲೇಸು. [QBR]
20. ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, [QBR2] ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು. [QBR]
21. ನೀತಿ ಮತ್ತು ಕೃಪೆಗಳನ್ನು ಹುಡುಕುವವನು [QBR2] ಜೀವ ಮತ್ತು ಕೀರ್ತಿಗಳನ್ನು ಪಡೆಯುವನು. [QBR]
22. ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಮುತ್ತಿಗೆ ಹಾಕಿ, [QBR2] ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು. [QBR]
23. ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು [QBR2] ತೊಂದರೆಗಳಿಂದ ರಕ್ಷಿಸಿಕೊಳ್ಳುವನು. [QBR]
24. “ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, [QBR2] ಗರ್ವ ಮತ್ತು ಮದದಿಂದ ಪ್ರವರ್ತಿಸುವನು. [QBR]
25. ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, [QBR2] ಅವನ ಕೈಗಳು ದುಡಿಯಲಾರವು. [QBR]
26. ಧರ್ಮಿಯು ಹಿಂತೆಗೆಯದೆ ಕೊಡುವನು, [QBR2] ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು. [QBR]
27. ದುಷ್ಟರ ಯಜ್ಞವೇ ಅಸಹ್ಯ, [QBR2] ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ. [QBR]
28. ಸುಳ್ಳು ಸಾಕ್ಷಿಯು ಅಳಿದುಹೋಗುವುದು, [QBR2] ಕೇಳಿದ್ದನ್ನೇ ಹೇಳುವವನ ಸಾಕ್ಷಿಯು ಶಾಶ್ವತವಾಗಿರುವುದು. [QBR]
29. ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ, [QBR2] ಸತ್ಯವಂತನು ತನ್ನ ನಡತೆಯನ್ನು ಸರಿಪಡಿಸಿಕೊಳ್ಳುತ್ತಿರುವನು. [QBR]
30. ಯಾವ ಜ್ಞಾನವೂ, ಯಾವ ವಿವೇಕವೂ, [QBR2] ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ. [QBR]
31. ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ [QBR2] ಜಯವು ಯೆಹೋವನಿಂದಲೇ. [PE]