1. ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ, [QBR2] ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ. [QBR]
2. ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, [QBR2] ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು. [QBR]
3. ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, [QBR2] ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು. [QBR]
4. ಧನ, ಮಾನ ಮತ್ತು ಜೀವಗಳು [QBR2] ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ. [QBR]
5. ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, [QBR2] ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು. [QBR]
6. ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, [QBR2] ಮುಪ್ಪಿನಲ್ಲಿಯೂ ಓರೆಯಾಗರು. [QBR]
7. ಬಲ್ಲಿದನು ಬಡವನಿಗೆ ಒಡೆಯ, [QBR2] ಸಾಲಗಾರನು ಸಾಲಕೊಟ್ಟವನಿಗೆ ಸೇವಕ. [QBR]
8. ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, [QBR2] ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು. [QBR]
9. ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, [QBR2] ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ. [QBR]
10. ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, [QBR2] ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು. [QBR]
11. ಹೃದಯಶುದ್ಧಿಯನ್ನು ಅಪೇಕ್ಷಿಸುವ ಮತ್ತು ಸವಿಮಾತನಾಡುವ ಮನುಷ್ಯನಿಗೆ [QBR2] ರಾಜನ ಸ್ನೇಹವು ದೊರೆಯುವುದು. [QBR]
12. ಯೆಹೋವನ ಕಣ್ಣು ತಿಳಿವಳಿಕೆಗೆ ಕಾವಲು, [QBR2] ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು. [QBR]
13. “ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದ್ದಿತು” [QBR2] ಎಂಬುದು ಸೋಮಾರಿಯ ನೆವ. [QBR]
14. ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ, [QBR2] ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು. [QBR]
15. ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, [QBR2] ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು. [QBR]
16. ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, [QBR2] ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.
17. {ಜ್ಞಾನಿಗಳ ಮಾತುಗಳು} [PS] ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು, [QBR2] ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು. [QBR]
18. ನೀನು ಆ ಮಾತುಗಳನ್ನು ಅಂತರಂಗದಲ್ಲಿ ಕಾಪಾಡುತ್ತಾ, [QBR2] ತುಟಿಗಳಲ್ಲಿ ಸಿದ್ಧಪಡಿಸಿಕೊಂಡಿದ್ದರೆ ಎಷ್ಟೋ ರಮ್ಯ. [QBR]
19. ನೀನು ಯೆಹೋವನಲ್ಲಿ ಭರವಸವಿಡಬೇಕೆಂದು, [QBR2] ಅವುಗಳನ್ನು ಈ ದಿನ ನಿನಗೇ ತಿಳಿಯಪಡಿಸಿದ್ದೇನೆ. [QBR]
20. ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು, [QBR2] ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ, [QBR]
21. ಸತ್ಯ, ತಿಳಿವಳಿಕೆಯ ವಿಷಯವಾಗಿ [QBR2] ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲಾ. [QBR]
22. ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, [QBR2] ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ. [QBR]
23. ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, [QBR2] ಹಾಳುಮಾಡಿದವರ ಜೀವವನ್ನು ಹಾಳುಮಾಡುವನು. [QBR]
24. ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, [QBR2] ಸಿಟ್ಟುಗಾರನ ಸಹವಾಸ ಮಾಡಬೇಡ. [QBR]
25. ಮಾಡಿದರೆ ಅವನ ದುರ್ನಡತೆಯನ್ನು ಅನುಸರಿಸಿ, [QBR2] ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ. [QBR]
26. ಮಾತುಕೊಟ್ಟು ಸಾಲಕ್ಕೆ ಹೊಣೆಯಾಗುವವರಲ್ಲಿ, [QBR2] ನೀನೂ ಒಬ್ಬನಾಗಬೇಡ, [QBR]
27. ಆ ಸಾಲವನ್ನು ತೀರಿಸುವುದಕ್ಕೆ ನಿನ್ನಿಂದಾಗದಿರಲು, [QBR2] ಸಾಲಕೊಟ್ಟವನು ನಿನ್ನ ಕೆಳಗಿನ ಹಾಸಿಗೆಯನ್ನು ಕಿತ್ತುಹಾಕುವುದು ಬೇಕೇ? [QBR]
28. ನಿನ್ನ ಪೂರ್ವಿಕರು ಹಾಕಿದ ಪೂರ್ವಕಾಲದ ಮೇರೆಯನ್ನು ದಾಟಬೇಡ. [QBR]
29. ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, [QBR2] ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, [QBR2] ಸಾಮಾನ್ಯ ಜನರ ಮುಂದೆ ಅಲ್ಲ. [PE]