1. [QS]ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ, [QE][QS2]ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ. [QE]
2. [QS]ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, [QE][QS2]ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು. [QE]
3. [QS]ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, [QE][QS2]ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು. [QE]
4. [QS]ಧನ, ಮಾನ ಮತ್ತು ಜೀವಗಳು [QE][QS2]ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ. [QE]
5. [QS]ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, [QE][QS2]ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು. [QE]
6. [QS]ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, [QE][QS2]ಮುಪ್ಪಿನಲ್ಲಿಯೂ ಓರೆಯಾಗರು. [QE]
7. [QS]ಬಲ್ಲಿದನು ಬಡವನಿಗೆ ಒಡೆಯ, [QE][QS2]ಸಾಲಗಾರನು ಸಾಲಕೊಟ್ಟವನಿಗೆ ಸೇವಕ. [QE]
8. [QS]ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, [QE][QS2]ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು. [QE]
9. [QS]ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, [QE][QS2]ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ. [QE]
10. [QS]ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, [QE][QS2]ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು. [QE]
11. [QS]ಹೃದಯಶುದ್ಧಿಯನ್ನು ಅಪೇಕ್ಷಿಸುವ ಮತ್ತು ಸವಿಮಾತನಾಡುವ ಮನುಷ್ಯನಿಗೆ [QE][QS2]ರಾಜನ ಸ್ನೇಹವು ದೊರೆಯುವುದು. [QE]
12. [QS]ಯೆಹೋವನ ಕಣ್ಣು ತಿಳಿವಳಿಕೆಗೆ ಕಾವಲು, [QE][QS2]ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು. [QE]
13. [QS]“ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದ್ದಿತು” [QE][QS2]ಎಂಬುದು ಸೋಮಾರಿಯ ನೆವ. [QE]
14. [QS]ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ, [QE][QS2]ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು. [QE]
15. [QS]ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, [QE][QS2]ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು. [QE]
16. [QS]ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, [QE][QS2]ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ. [QE]
17. {#1ಜ್ಞಾನಿಗಳ ಮಾತುಗಳು } [QS]ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು, [QE][QS2]ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು. [QE]
18. [QS]ನೀನು ಆ ಮಾತುಗಳನ್ನು ಅಂತರಂಗದಲ್ಲಿ ಕಾಪಾಡುತ್ತಾ, [QE][QS2]ತುಟಿಗಳಲ್ಲಿ ಸಿದ್ಧಪಡಿಸಿಕೊಂಡಿದ್ದರೆ ಎಷ್ಟೋ ರಮ್ಯ. [QE]
19. [QS]ನೀನು ಯೆಹೋವನಲ್ಲಿ ಭರವಸವಿಡಬೇಕೆಂದು, [QE][QS2]ಅವುಗಳನ್ನು ಈ ದಿನ ನಿನಗೇ ತಿಳಿಯಪಡಿಸಿದ್ದೇನೆ. [QE]
20. [QS]ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು, [QE][QS2]ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ, [QE]
21. [QS]ಸತ್ಯ, ತಿಳಿವಳಿಕೆಯ ವಿಷಯವಾಗಿ [QE][QS2]ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲಾ. [QE]
22. [QS]ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, [QE][QS2]ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ. [QE]
23. [QS]ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, [QE][QS2]ಹಾಳುಮಾಡಿದವರ ಜೀವವನ್ನು ಹಾಳುಮಾಡುವನು. [QE]
24. [QS]ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, [QE][QS2]ಸಿಟ್ಟುಗಾರನ ಸಹವಾಸ ಮಾಡಬೇಡ. [QE]
25. [QS]ಮಾಡಿದರೆ ಅವನ ದುರ್ನಡತೆಯನ್ನು ಅನುಸರಿಸಿ, [QE][QS2]ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ. [QE]
26. [QS]ಮಾತುಕೊಟ್ಟು ಸಾಲಕ್ಕೆ ಹೊಣೆಯಾಗುವವರಲ್ಲಿ, [QE][QS2]ನೀನೂ ಒಬ್ಬನಾಗಬೇಡ, [QE]
27. [QS]ಆ ಸಾಲವನ್ನು ತೀರಿಸುವುದಕ್ಕೆ ನಿನ್ನಿಂದಾಗದಿರಲು, [QE][QS2]ಸಾಲಕೊಟ್ಟವನು ನಿನ್ನ ಕೆಳಗಿನ ಹಾಸಿಗೆಯನ್ನು ಕಿತ್ತುಹಾಕುವುದು ಬೇಕೇ? [QE]
28. [QS]ನಿನ್ನ ಪೂರ್ವಿಕರು ಹಾಕಿದ ಪೂರ್ವಕಾಲದ ಮೇರೆಯನ್ನು ದಾಟಬೇಡ. [QE]
29. [QS]ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, [QE][QS2]ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, [QE][QS2]ಸಾಮಾನ್ಯ ಜನರ ಮುಂದೆ ಅಲ್ಲ. [QE]