1. ನೀನು ಅಧಿಪತಿಯ ಸಂಗಡ ಊಟಕ್ಕೆ ಕುಳಿತುಕೊಂಡಿರುವಾಗ, [QBR2] ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು. [* ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು. ಅಥವಾ ಯಾರ ಸನ್ನಿಧಾನದಲ್ಲಿ ಇದ್ದೀ ಎಂಬುದನ್ನು ಮರೆಯದಿರು ಅಥವಾ ಯಾರ ಮುಂದಿರುವೆ ಎಂಬುದನ್ನು ಮರೆಯದಿರು. ] [QBR]
2. ನೀನು ಹೊಟ್ಟೆಬಾಕನಾಗಿದ್ದರೆ, [QBR2] ನಿನ್ನ ಗಂಟಲಿಗೆ ಕತ್ತಿಹಾಕಿಕೋ. [QBR]
3. ಅವನ ರುಚಿಪದಾರ್ಥಗಳನ್ನು ಬಯಸಬೇಡ, [QBR2] ಅದು ಮೋಸದ ಆಹಾರವೇ ಸರಿ. [QBR]
4. ದುಡ್ಡಿನಾಶೆಯಿಂದ ದುಡಿಯಬೇಡ, [QBR2] ಸ್ವಬುದ್ಧಿಯನ್ನೇ ಆಶ್ರಯಿಸಬೇಡ. [QBR]
5. ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? [QBR2] ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, [QBR] ಆಕಾಶದ ಕಡೆಗೆ ಹಾರುವ ಹದ್ದಿನಂತೆ, [QBR2] ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ. [QBR]
6. ಲೋಭಿಯ ಅನ್ನವನ್ನು ಉಣ್ಣದಿರು, [QBR2] ಅವನ ರುಚಿಪದಾರ್ಥಗಳನ್ನು ಬಯಸಬೇಡ. [QBR]
7. ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, [QBR2] ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ. [QBR]
8. ನೀನು ತಿಂದ ತುತ್ತನ್ನು ಕಕ್ಕಿಬಿಡುವಿ, [QBR2] ನಿನ್ನ ಸವಿಮಾತುಗಳು ವ್ಯರ್ಥ. [QBR]
9. ಮೂಢನ ಸಂಗಡ ಮಾತನಾಡಬೇಡ, [QBR2] ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು. [QBR]
10. ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ, [QBR2] ಅನಾಥರ ಹೊಲಗಳಲ್ಲಿ ನುಗ್ಗಬೇಡ. [QBR]
11. ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, [QBR2] ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು. [QBR]
12. ಉಪದೇಶವನ್ನು ಮನಸ್ಸಿಗೆ ತೆಗೆದುಕೋ, [QBR2] ತಿಳಿವಳಿಕೆಯ ಮಾತುಗಳಿಗೆ ಕಿವಿಗೊಡು. [QBR]
13. ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ, [QBR2] ಅವನು ಬೆತ್ತದ ಏಟಿಗೆ ಸಾಯನು. [QBR]
14. ಬೆತ್ತದಿಂದ ಹೊಡೆ, [QBR2] ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು. [QBR]
15. ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ [QBR2] ನನ್ನ ಮನಸ್ಸಿಗೂ ಉಲ್ಲಾಸವಾಗುವುದು. [QBR]
16. ಹೌದು, ನಿನ್ನ ತುಟಿಗಳು ನೀತಿಯ ನುಡಿಗಳನ್ನಾಡಿದರೆ [QBR2] ನನ್ನ ಅಂತರಾತ್ಮವು ಹಿಗ್ಗುವುದು. [QBR]
17. ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, [QBR2] ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು. [QBR]
18. ಒಂದು ಕಾಲ ಉಂಟು, [QBR2] ನಿನ್ನ ನಿರೀಕ್ಷೆಯು ನಿರರ್ಥಕವಾಗದು. [QBR]
19. ಕಂದಾ, ಕೇಳು, ಜ್ಞಾನವಂತನಾಗಿರು, [QBR2] ನಿನ್ನ ಮನಸ್ಸನ್ನು ಜ್ಞಾನದ ಮಾರ್ಗದಲ್ಲಿ ಮುಂದೆ ನಡೆಯಿಸು. [QBR]
20. ಕುಡುಕರಲ್ಲಿಯೂ, [QBR2] ಅತಿಮಾಂಸಭಕ್ಷಕರಲ್ಲಿಯೂ ಸೇರದಿರು. [QBR]
21. ಕುಡುಕರು, ಹೊಟ್ಟೆಬಾಕರು ದುರ್ಗತಿಗೆ ಬರುವರು, [QBR2] ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವುದು. [QBR]
22. ಹೆತ್ತ ತಂದೆಯ ಮಾತಿಗೆ ಕಿವಿಗೊಡು, [QBR2] ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ. [QBR]
23. ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, [QBR2] ಮಾರಿ ಬಿಡಬೇಡ. [QBR]
24. ಧರ್ಮಿಯ ತಂದೆಯು ಅತಿ ಸಂತೋಷಪಡುವನು, [QBR2] ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು. [QBR]
25. ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ, [QBR2] ನಿನ್ನನ್ನು ಹೆತ್ತವಳು ಆನಂದಪಡಲಿ. [QBR]
26. ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, [QBR2] ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ. [QBR]
27. ಸೂಳೆಯು ಆಳವಾದ ಹಳ್ಳ, [QBR2] ಜಾರಸ್ತ್ರೀಯು ಇಕ್ಕಟ್ಟಾದ ಗುಂಡಿ. [QBR]
28. ಹೌದು, ಕಳ್ಳನಂತೆ ಹೊಂಚುಹಾಕುತ್ತಾಳೆ, [QBR2] ಜನರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ. [QBR]
29. ಅಯ್ಯಯ್ಯೋ ಅನ್ನುವವರು ಯಾರು? [QBR2] ಅಕಟಾ ಎಂದು ಕೂಗಿಕೊಳ್ಳುವವರು ಯಾರು? [QBR] ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? [QBR2] ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? [QBR] ಕೆಂಪೇರಿದ ಕಣ್ಣುಳ್ಳವರು ಯಾರು? [QBR]
30. ಅವರು ಮಿಶ್ರಮದ್ಯಪಾನಾಸಕ್ತರಾಗಿ, [QBR2] ದ್ರಾಕ್ಷಾರಸವನ್ನು ಕುಡಿಯುತ್ತಾ, ಕಾಲಹರಣಮಾಡುವವರೇ. [QBR]
31. ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ [QBR2] ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. [QBR2] ಅದು ಗಂಟಲಿನೊಳಗೆ ಮೆಲ್ಲಗೆ ಇಳಿದುಹೋಗಿ [QBR]
32. ಆಮೇಲೆ ಹಾವಿನಂತೆ ಕಚ್ಚುತ್ತದೆ, [QBR2] ಹೌದು, ನಾಗರ ಹಾವಿನ ಹಾಗೆ ಕಡಿಯುತ್ತದೆ. [QBR]
33. ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವುದು, [QBR2] ಮನಸ್ಸು ವಿಪರೀತಗಳನ್ನು ಹೊರಪಡಿಸುವುದು. [QBR]
34. ನೀನು ಸಮುದ್ರದ ನಡುವೆಯಾಗಲಿ, [QBR2] ಹಡಗಿನ ಕಂಬದ ತುದಿಯಲ್ಲಿಯಾಗಲಿ ಮಲಗಿರುವವನಂತೆ ಇರುವಿ. [QBR]
35. ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, [QBR2] ಬಡಿದರೂ ತಿಳಿಯಲಿಲ್ಲ, [QBR2] ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ. [PE]