1. [QS]ನೀನು ಅಧಿಪತಿಯ ಸಂಗಡ ಊಟಕ್ಕೆ ಕುಳಿತುಕೊಂಡಿರುವಾಗ, [QE][QS2]ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು.[* ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು. ಅಥವಾ ಯಾರ ಸನ್ನಿಧಾನದಲ್ಲಿ ಇದ್ದೀ ಎಂಬುದನ್ನು ಮರೆಯದಿರು ಅಥವಾ ಯಾರ ಮುಂದಿರುವೆ ಎಂಬುದನ್ನು ಮರೆಯದಿರು. ] [QE]
2. [QS]ನೀನು ಹೊಟ್ಟೆಬಾಕನಾಗಿದ್ದರೆ, [QE][QS2]ನಿನ್ನ ಗಂಟಲಿಗೆ ಕತ್ತಿಹಾಕಿಕೋ. [QE]
3. [QS]ಅವನ ರುಚಿಪದಾರ್ಥಗಳನ್ನು ಬಯಸಬೇಡ, [QE][QS2]ಅದು ಮೋಸದ ಆಹಾರವೇ ಸರಿ. [QE]
4. [QS]ದುಡ್ಡಿನಾಶೆಯಿಂದ ದುಡಿಯಬೇಡ, [QE][QS2]ಸ್ವಬುದ್ಧಿಯನ್ನೇ ಆಶ್ರಯಿಸಬೇಡ. [QE]
5. [QS]ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? [QE][QS2]ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, [QE][QS]ಆಕಾಶದ ಕಡೆಗೆ ಹಾರುವ ಹದ್ದಿನಂತೆ, [QE][QS2]ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ. [QE]
6. [QS]ಲೋಭಿಯ ಅನ್ನವನ್ನು ಉಣ್ಣದಿರು, [QE][QS2]ಅವನ ರುಚಿಪದಾರ್ಥಗಳನ್ನು ಬಯಸಬೇಡ. [QE]
7. [QS]ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, [QE][QS2]ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ. [QE]
8. [QS]ನೀನು ತಿಂದ ತುತ್ತನ್ನು ಕಕ್ಕಿಬಿಡುವಿ, [QE][QS2]ನಿನ್ನ ಸವಿಮಾತುಗಳು ವ್ಯರ್ಥ. [QE]
9. [QS]ಮೂಢನ ಸಂಗಡ ಮಾತನಾಡಬೇಡ, [QE][QS2]ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು. [QE]
10. [QS]ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ, [QE][QS2]ಅನಾಥರ ಹೊಲಗಳಲ್ಲಿ ನುಗ್ಗಬೇಡ. [QE]
11. [QS]ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, [QE][QS2]ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು. [QE]
12. [QS]ಉಪದೇಶವನ್ನು ಮನಸ್ಸಿಗೆ ತೆಗೆದುಕೋ, [QE][QS2]ತಿಳಿವಳಿಕೆಯ ಮಾತುಗಳಿಗೆ ಕಿವಿಗೊಡು. [QE]
13. [QS]ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ, [QE][QS2]ಅವನು ಬೆತ್ತದ ಏಟಿಗೆ ಸಾಯನು. [QE]
14. [QS]ಬೆತ್ತದಿಂದ ಹೊಡೆ, [QE][QS2]ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು. [QE]
15. [QS]ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ [QE][QS2]ನನ್ನ ಮನಸ್ಸಿಗೂ ಉಲ್ಲಾಸವಾಗುವುದು. [QE]
16. [QS]ಹೌದು, ನಿನ್ನ ತುಟಿಗಳು ನೀತಿಯ ನುಡಿಗಳನ್ನಾಡಿದರೆ [QE][QS2]ನನ್ನ ಅಂತರಾತ್ಮವು ಹಿಗ್ಗುವುದು. [QE]
17. [QS]ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, [QE][QS2]ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು. [QE]
18. [QS]ಒಂದು ಕಾಲ ಉಂಟು, [QE][QS2]ನಿನ್ನ ನಿರೀಕ್ಷೆಯು ನಿರರ್ಥಕವಾಗದು. [QE]
19. [QS]ಕಂದಾ, ಕೇಳು, ಜ್ಞಾನವಂತನಾಗಿರು, [QE][QS2]ನಿನ್ನ ಮನಸ್ಸನ್ನು ಜ್ಞಾನದ ಮಾರ್ಗದಲ್ಲಿ ಮುಂದೆ ನಡೆಯಿಸು. [QE]
20. [QS]ಕುಡುಕರಲ್ಲಿಯೂ, [QE][QS2]ಅತಿಮಾಂಸಭಕ್ಷಕರಲ್ಲಿಯೂ ಸೇರದಿರು. [QE]
21. [QS]ಕುಡುಕರು, ಹೊಟ್ಟೆಬಾಕರು ದುರ್ಗತಿಗೆ ಬರುವರು, [QE][QS2]ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವುದು. [QE]
22. [QS]ಹೆತ್ತ ತಂದೆಯ ಮಾತಿಗೆ ಕಿವಿಗೊಡು, [QE][QS2]ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ. [QE]
23. [QS]ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, [QE][QS2]ಮಾರಿ ಬಿಡಬೇಡ. [QE]
24. [QS]ಧರ್ಮಿಯ ತಂದೆಯು ಅತಿ ಸಂತೋಷಪಡುವನು, [QE][QS2]ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು. [QE]
25. [QS]ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ, [QE][QS2]ನಿನ್ನನ್ನು ಹೆತ್ತವಳು ಆನಂದಪಡಲಿ. [QE]
26. [QS]ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, [QE][QS2]ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ. [QE]
27. [QS]ಸೂಳೆಯು ಆಳವಾದ ಹಳ್ಳ, [QE][QS2]ಜಾರಸ್ತ್ರೀಯು ಇಕ್ಕಟ್ಟಾದ ಗುಂಡಿ. [QE]
28. [QS]ಹೌದು, ಕಳ್ಳನಂತೆ ಹೊಂಚುಹಾಕುತ್ತಾಳೆ, [QE][QS2]ಜನರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ. [QE]
29. [QS]ಅಯ್ಯಯ್ಯೋ ಅನ್ನುವವರು ಯಾರು? [QE][QS2]ಅಕಟಾ ಎಂದು ಕೂಗಿಕೊಳ್ಳುವವರು ಯಾರು? [QE][QS]ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? [QE][QS2]ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? [QE][QS]ಕೆಂಪೇರಿದ ಕಣ್ಣುಳ್ಳವರು ಯಾರು? [QE]
30. [QS]ಅವರು ಮಿಶ್ರಮದ್ಯಪಾನಾಸಕ್ತರಾಗಿ, [QE][QS2]ದ್ರಾಕ್ಷಾರಸವನ್ನು ಕುಡಿಯುತ್ತಾ, ಕಾಲಹರಣಮಾಡುವವರೇ. [QE]
31. [QS]ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ [QE][QS2]ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. [QE][QS2]ಅದು ಗಂಟಲಿನೊಳಗೆ ಮೆಲ್ಲಗೆ ಇಳಿದುಹೋಗಿ [QE]
32. [QS]ಆಮೇಲೆ ಹಾವಿನಂತೆ ಕಚ್ಚುತ್ತದೆ, [QE][QS2]ಹೌದು, ನಾಗರ ಹಾವಿನ ಹಾಗೆ ಕಡಿಯುತ್ತದೆ. [QE]
33. [QS]ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವುದು, [QE][QS2]ಮನಸ್ಸು ವಿಪರೀತಗಳನ್ನು ಹೊರಪಡಿಸುವುದು. [QE]
34. [QS]ನೀನು ಸಮುದ್ರದ ನಡುವೆಯಾಗಲಿ, [QE][QS2]ಹಡಗಿನ ಕಂಬದ ತುದಿಯಲ್ಲಿಯಾಗಲಿ ಮಲಗಿರುವವನಂತೆ ಇರುವಿ. [QE]
35. [QS]ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, [QE][QS2]ಬಡಿದರೂ ತಿಳಿಯಲಿಲ್ಲ, [QE][QS2]ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ. [QE]