1. {#1ಸೊಲೊಮೋನನ ಇನ್ನೂ ಕೆಲವು ಜ್ಞಾನೋಕ್ತಿಗಳು } [QS]ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳು, ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಇವುಗಳನ್ನು ಸಂಗ್ರಹಿಸಿ ಬರೆದರು. [QE]
2. [QS]ವಿಷಯವನ್ನು ರಹಸ್ಯವಾಗಿಡುವುದು ದೇವರ ಮಹಿಮೆ, [QE][QS2]ವಿಷಯವನ್ನು ವಿಮರ್ಶೆಮಾಡುವುದು ರಾಜರ ಹಿರಿಮೆ. [QE]
3. [QS]ಆಕಾಶವು ಉನ್ನತ, ಭೂಮಿಯು ಅಗಾಧ, [QE][QS2]ರಾಜರ ಹೃದಯವು ಅಗೋಚರ. [QE]
4. [QS]ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, [QE][QS2]ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯಾಗುವುದು. [QE]
5. [QS]ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ, [QE][QS2]ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವುದು. [QE]
6. [QS]ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ, [QE][QS2]ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳಬೇಡ. [QE]
7. [QS]ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮದಲ್ಲಿ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತಲೂ, [QE][QS2]“ಇನ್ನೂ ಮೇಲಕ್ಕೆ ಬಾ” ಎಂದು ಕರೆಯಿಸಿಕೊಳ್ಳುವುದು ಲೇಸು. [QE]
8. [QS]ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, [QE][QS2]ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ. [QE]
9. [QS]ವ್ಯಾಜ್ಯವಾಡಿದವನ ಸಂಗಡಲೇ ಅದನ್ನು ಚರ್ಚಿಸು, [QE][QS2]ಒಬ್ಬನ ಗುಟ್ಟನ್ನೂ ಬಯಲುಮಾಡಬೇಡ. [QE]
10. [QS]ಅದನ್ನು ಕೇಳುವವನು ನಿನ್ನನ್ನು ದೂಷಿಸಾನು, [QE][QS2]ನಿನಗೆ ಬಂದ ಅಪಕೀರ್ತಿಯು ಹೋಗದು. [QE]
11. [QS]ಸಮಯೋಚಿತವಾದ ಮಾತುಗಳು ಬೆಳ್ಳಿಯ ಕಟ್ಟಿನಲ್ಲಿ [QE][QS2]ಖಚಿತವಾದ ಬಂಗಾರದ ಹಣ್ಣುಗಳಿಗೆ ಸಮಾನ. [QE]
12. [QS]ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು [QE][QS2]ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ. [QE]
13. [QS]ಸುಗ್ಗೀಕಾಲದಲ್ಲಿ[* ಸುಗ್ಗೀಕಾಲದಲ್ಲಿ ಅಥವಾ ಬೇಸಿಗೆಕಾಲದಲ್ಲಿ. ] ಹಿಮದ ಶೀತವು ಹೇಗೋ [QE][QS2]ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ. [QE]
14. [QS]ಬರೀ ಗಾಳಿಯ ಮೋಡಗಳು ಹೇಗೋ, [QE][QS2]ದಾನಕೊಡುತ್ತೇನೆಂದು ಸುಳ್ಳಾಡಿ ಜಂಬಮಾಡುವವನೂ ಹಾಗೆಯೇ. [QE]
15. [QS]ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು, [QE][QS2]ಮೃದುವಚನವು ಎಲುಬನ್ನು ಮುರಿಯುವುದು. [QE]
16. [QS]ಜೇನು ಸಿಕ್ಕಿತೋ? ಮಿತವಾಗಿ ತಿನ್ನು, [QE][QS2]ಹೊಟ್ಟೆತುಂಬಾ ತಿಂದರೆ ಕಾರಿಬಿಟ್ಟೀಯೇ. [QE]
17. [QS]ನೆರೆಯವನು ಬೇಸರಗೊಂಡು ಹಗೆಮಾಡದ ಹಾಗೆ, [QE][QS2]ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು. [QE]
18. [QS]ನೆರೆಯವನ ಮೇಲೆ ಸುಳ್ಳುಸಾಕ್ಷಿಹೇಳುವವನು, [QE][QS2]ಚಮಟಿಕೆ, ಕತ್ತಿ, ಚೂಪಾದ ಬಾಣ ಇವುಗಳೇ. [QE]
19. [QS]ಕಷ್ಟಕಾಲದಲ್ಲಿ ದ್ರೋಹಿಯಲ್ಲಿಡುವ ನಂಬಿಕೆಯು, [QE][QS2]ಮುರುಕಹಲ್ಲು ಮತ್ತು ಜಾರುವ ಕಾಲು. [QE]
20. [QS]ಮನಗುಂದಿದವನಿಗೆ ಸಂಗೀತಹಾಡುವುದು [QE][QS2]ಚಳಿದಿನದಲ್ಲಿ ಬಟ್ಟೆ ತೆಗೆದಂತೆ, [QE][QS2]ಗಾಯಕ್ಕೆ[† ಗಾಯಕ್ಕೆ ಅಥವಾ ಸೋಡಉಪ್ಪಿಗೆ. ] ಹುಳಿಹೊಯ್ದಂತೆ. [QE]
21. [QS]ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, [QE][QS2]ಬಾಯಾರಿದ್ದರೆ ನೀರುಕೊಡು, [QE]
22. [QS]ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು.[‡ ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಅಥವಾ ಹೀಗೆ ಮಾಡುವುದ್ದರಿಂದ ನೀನು ಅವನನ್ನು ಅವಮಾನಗೊಳಿಸುವಿ. ] [QE][QS2]ಯೆಹೋವನೇ ನಿನಗೆ ಪ್ರತಿಫಲಕೊಡುವನು. [QE]
23. [QS]ಉತ್ತರದ ಗಾಳಿ ಮಳೆ ಬರಮಾಡುವುದು, [QE][QS2]ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು. [QE]
24. [QS]ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, [QE][QS2]ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು. [QE]
25. [QS]ಬಳಲಿ ಬಾಯಾರಿದವನಿಗೆ ತಣ್ಣೀರು ಹೇಗೋ, [QE][QS2]ದೇಶಾಂತರದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ. [QE]
26. [QS]ದುಷ್ಟರಿಂದ ಸೋತ ಶಿಷ್ಟನು, [QE][QS2]ಹಾಳು ಬಾವಿ ಮತ್ತು ತುಳಿದಾಡಿದ ಒರತೆ. [QE]
27. [QS]ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, [QE][QS2]ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವುದು ಮಾನವಲ್ಲ. [QE]
28. [QS]ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು [QE][QS2]ಗೋಡೆ ಬಿದ್ದ ಹಾಳೂರಿಗೆ ಸಮಾನ. [QE]