1. ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ, [QBR2] ಮೂಢನಿಗೆ ಮಾನವು ಹಾಗೆ ಸರಿಯಲ್ಲ. [QBR]
2. ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, [QBR2] ಕಾರಣವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು. [QBR]
3. ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, [QBR2] ಮೂಢನ ಬೆನ್ನಿಗೆ ಬೆತ್ತ. [QBR]
4. ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ, [QBR2] ನೀನೂ ಅವನಿಗೆ ಸಮಾನನಾದೀಯೆ. [QBR]
5. ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡು, [QBR2] ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು. [QBR]
6. ಮೂಢನ ಮೂಲಕ ಮಾತನ್ನು ಹೇಳಿಕಳುಹಿಸುವವನು, [QBR2] ತನ್ನ ಕಾಲುಗಳನ್ನು ತಾನೇ ಕಡಿದುಕೊಂಡು ಕೇಡನ್ನು ಕುಡಿಯುವನು. [QBR]
7. ಮೂಢನ ಬಾಯಿಯ ಜ್ಞಾನೋಕ್ತಿಯು, [QBR2] ಜೋಲಾಡುವ ಕುಂಟಕಾಲು. [QBR]
8. ಮೂಢನಿಗೆ ಕೊಡುವ ಮಾನವು, [QBR2] ಕವಣೆಯಲ್ಲಿಟ್ಟ ಕಲ್ಲಿನ ಹಾಗೆ. [QBR]
9. ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು, [QBR2] ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲಿನ ಹಾಗೆ. [QBR]
10. ಮೂಢರನ್ನೂ, ತಿರುಗಾಡುವವರನ್ನೂ [* ತಿರುಗಾಡುವವರನ್ನೂ ಅಥವಾ ಕುಡುಕರನ್ನು] ಕೂಲಿಗೆ ಕರೆಯುವವನು, [QBR2] ಯಾರಿಗೋ ತಗಲಲಿ ಎಂದು ಬಾಣವನ್ನು ಎಸೆಯುವವನಂತೆ. [† ಯಾರಿಗೋ ತಗಲಲಿ ಎಂದು ಬಾಣವನ್ನು ಎಸೆಯುವವನಂತೆ. ಅಥವಾ ಹಾದುಹೋಗುವವರೆಲ್ಲರನ್ನು ಗಾಯಪಡಿಸುವವನಂತೆ.] [QBR]
11. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಳ್ಳುವ ಹಾಗೆ, [QBR2] ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು. [QBR]
12. ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, [QBR2] ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು. [QBR]
13. “ದಾರಿಯಲ್ಲಿ ಸಿಂಹವಿದೆ, [QBR2] ಬೀದಿಗಳಲ್ಲಿ ತಿರುಗಾಡುತ್ತಿದೆ” ಎಂಬುದು ಸೋಮಾರಿಯ ನೆವ. [QBR]
14. ಕದವು ತಿರುಗುಣಿಯಲ್ಲಿ ಹೇಗೋ, [QBR2] ಹಾಗೆ ಸೋಮಾರಿಯು ಹಾಸಿಗೆಯಲ್ಲಿ ಹೊರಳಾಡುತ್ತಿರುವನು. [QBR]
15. ಸೋಮಾರಿಯು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, [QBR2] ತಿರುಗಿ ಬಾಯಿಯ ಹತ್ತಿರ ತರಲಾರದಷ್ಟು ಆಯಾಸಗೊಳ್ಳುತ್ತಾನೆ. [QBR]
16. ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ, [QBR2] ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು. [QBR]
17. ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವುದು, [QBR2] ನಾಯಿಯ ಕಿವಿಹಿಡಿದ ಹಾಗೆ. [QBR]
18. ನೆರೆಯವನನ್ನು ಮೋಸಗೊಳಿಸಿ, “ತಮಾಷೆಗೋಸ್ಕರ, [QBR2] ಮಾಡಿದೆನಲ್ಲಾ” ಎನ್ನುವವನು, [QBR]
19. ಕೊಳ್ಳಿಗಳನ್ನೂ, ಅಂಬುಗಳನ್ನೂ, ಸಾವನ್ನೂ ಬೀರುವ, [QBR2] ದೊಡ್ಡ ಹುಚ್ಚನ ಹಾಗೆ. [QBR]
20. ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು, [QBR2] ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು. [QBR]
21. ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, [QBR2] ವ್ಯಾಜ್ಯದ ಕಿಚ್ಚನ್ನೆಬ್ಬಿಸುವುದಕ್ಕೆ ಜಗಳಗಂಟಿಗ. [QBR]
22. ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, [QBR2] ಇವು ಹೊಟ್ಟೆಯೊಳಕ್ಕೇ ಇಳಿಯುವವು. [QBR]
23. ಕೆಟ್ಟ ಹೃದಯದಿಂದ ಪ್ರೀತಿಯನ್ನಾಡುವ ತುಟಿಯು, [QBR2] ಬೆಳ್ಳಿ ಲೇಪನ ಮಾಡಿದ ಮಣ್ಣಿನ ಮಡಿಕೆಯ ಹಾಗೆ. [QBR]
24. ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ, [QBR2] ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ. [QBR]
25. ಸವಿಮಾತನಾಡಿದರೂ ಅವನನ್ನು ನಂಬಬೇಡ, [QBR2] ಅವನ ಹೃದಯದಲ್ಲಿ ಎಷ್ಟೋ ಹೇಯ ಕೃತ್ಯಗಳು. [QBR]
26. ತನ್ನ ಹಗೆಯನ್ನು ವಂಚನೆಯಿಂದ ಮರೆಮಾಚಿಕೊಂಡಿದ್ದರೂ, [QBR2] ಅವನ ಕೆಟ್ಟತನವು ಸಭೆಯಲ್ಲಿ ಬೈಲಾಗುವುದು. [QBR]
27. ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, [QBR2] ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವುದು. [QBR]
28. ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ದ್ವೇಷಿಸುವನು, [QBR2] ಕಪಟದ ಬಾಯಿ ನಾಶಕರ. [PE]