1. ನಾಳೆ ಎಂದು ಕೊಚ್ಚಿಕೊಳ್ಳಬೇಡ, [QBR2] ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು. [QBR]
2. ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ, [QBR2] ಮತ್ತೊಬ್ಬನು ಹೊಗಳಿದರೆ ಹೊಗಳಲಿ, [QBR2] ಆತ್ಮಸ್ತುತಿ ಬೇಡ, [QBR2] ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ. [QBR]
3. ಕಲ್ಲು ಭಾರ, ಮರಳು ಭಾರ, [QBR2] ಎರಡಕ್ಕಿಂತಲೂ ಮೂಢನ ಕೋಪವು ಬಲು ಭಾರ. [QBR]
4. ಕೋಪವು ಕ್ರೂರ, ಕ್ರೋಧವು ಪ್ರವಾಹ, [QBR2] ಮತ್ಸರಕ್ಕೆ ಎದುರಾಗಿ ಯಾರು ನಿಂತಾರು? [QBR]
5. ಕಾರ್ಯದಿಂದ ಹೊರಪಡದ ಪ್ರೀತಿಗಿಂತಲೂ, [QBR2] ಬಹಿರಂಗವಾದ ಗದರಿಕೆಯು ಲೇಸು. [QBR]
6. ಮಿತ್ರನು ಮಾಡುವ ಗಾಯಗಳು ಮೇಲಿಗಾಗಿಯೇ, [QBR2] ಶತ್ರುವಿನ ಮುದ್ದುಗಳು ಹೇರಳವಾಗಿವೆ. [QBR]
7. ಹೊಟ್ಟೆತುಂಬಿದವನಿಗೆ ಜೇನುತುಪ್ಪವೂ ಅಸಹ್ಯ, [QBR2] ಹೊಟ್ಟೆ ಹಸಿದವನಿಗೆ ಕಹಿಯೆಲ್ಲಾ ಸಿಹಿ. [QBR]
8. ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು, [QBR2] ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ. [QBR]
9. ತೈಲವೂ, ಸುಗಂಧದ್ರವ್ಯಗಳೂ ಹೇಗೋ, [QBR2] ಮಿತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ. [QBR]
10. ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, [QBR2] ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, [QBR2] ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು. [QBR]
11. ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಹೃದಯವನ್ನು ಸಂತೋಷಪಡಿಸು, [QBR2] ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವುದು. [QBR]
12. ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, [QBR2] ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು. [QBR]
13. ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, [QBR2] ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ. [QBR]
14. ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು, [QBR2] ಶಪಿಸುವವನೆನಿಸಿಕೊಳ್ಳುವನು. [QBR]
15. ದೊಡ್ಡ ಮಳೆಯ ದಿನದಲ್ಲಿ ತಟತಟನೆ ತೊಟ್ಟಿಕ್ಕುವ ಹನಿ, [QBR2] ತಂಟೆಮಾಡುವ ಹೆಂಡತಿ, ಎರಡೂ ಒಂದೇ. [QBR]
16. ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು, [QBR2] ಅವಳನ್ನು ಹಿಡಿಯುವ ಬಲಗೈ ಜಿಡ್ಡಿನ ವಸ್ತುವನ್ನು ಹಿಡಿಯುವುದು. [QBR]
17. ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ, [QBR2] ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು. [QBR]
18. ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು, [QBR2] ಯಜಮಾನನ ಮಾತಿನಂತೆ ನಡೆಯುವವನು ಸನ್ಮಾನವನ್ನು ಅನುಭವಿಸುವನು. [QBR]
19. ನೀರು ಮುಖಕ್ಕೆ ಮುಖವನ್ನು ಹೇಗೆ ಪ್ರತಿಬಿಂಬಿಸುತ್ತದೋ, [QBR2] ಹಾಗೆಯೇ ಮನುಷ್ಯನಿಗೆ ಮನುಷ್ಯನ ಹೃದಯವು ತೋರ್ಪಡಿಸುತ್ತದೆ. [QBR]
20. ಪಾತಾಳಕ್ಕೂ, ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ, [QBR2] ಹಾಗೆಯೇ ಮನುಷ್ಯನ ಕಣ್ಣುಗಳಿಗೆ [* ಕಣ್ಣುಗಳಿಗೆ ಅಥವಾ ಆಸೆಗೆ.] ತೃಪ್ತಿಯಿಲ್ಲ. [QBR]
21. ಪುಟಕುಲುಮೆಗಳಿಂದ ಬೆಳ್ಳಿಬಂಗಾರಗಳಿಗೆ ಶೋಧನೆಯು ಹೇಗೋ, [QBR2] ಹೊಗಳಿಕೆಯಿಂದ ಮನುಷ್ಯನಿಗೆ ಶೋಧನೆಯು ಹಾಗೆಯೇ. [QBR]
22. ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ, [QBR2] ಮೂರ್ಖತನವು ಅವನಿಂದ ತೊಲಗದು. [QBR]
23. ನಿನ್ನ ಹಿಂಡುಗಳ ಸ್ಥಿತಿಯನ್ನು ಚೆನ್ನಾಗಿ ತಿಳಿದುಕೊಂಡಿರು, [QBR2] ನಿನ್ನ ಮಂದೆಗಳ ಮೇಲೆ ಮನಸ್ಸಿಡು. [QBR]
24. ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ, [QBR2] ಕಿರೀಟವು ತಲತಲಾಂತರಗಳ ವರೆಗೆ ನಿಂತೀತೋ? [QBR]
25. ಹುಲ್ಲನ್ನು ಕೊಯ್ದು ಹೊತ್ತುಕೊಂಡು ಬಂದ ಮೇಲೆ [QBR2] ಹಸಿಹುಲ್ಲು ತಲೆದೋರುವುದು, [QBR2] ಬೆಟ್ಟಗಳ ಸೊಪ್ಪನ್ನೂ ಕೂಡಿಸಿಡುವರು. [QBR]
26. ಕುರಿಗಳಿಂದ ನಿನಗೆ ಉಡುಪಾಗುವುದು, [QBR2] ಆಡುಗಳಿಂದ ಹೊಲದ ಕ್ರಯ ಹೆಚ್ಚುವುದು. [QBR]
27. ನಿನ್ನ ಊಟಕ್ಕೂ, ಮನೆಯವರ ಆಹಾರಕ್ಕೂ ಮೇಕೆಯ ಹಾಲು ಬೇಕಾದಷ್ಟಾಗುವುದು, [QBR2] ಅದು ನಿನ್ನ ದಾಸಿಯರಿಗೆ ಜೀವನವಾಗುವುದು. [PE]