1. [QS]ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, [QE][QS2]ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು. [QE]
2. [QS]ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, [QE][QS2]ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು. [QE]
3. [QS]ಬಡವರನ್ನು ಹಿಂಸಿಸುವ ದರಿದ್ರನು[* ದರಿದ್ರನು ಅಥವಾ ಅಧಿಕಾರಿ. ], [QE][QS2]ಒಂದು ಕಾಳೂ ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ. [QE]
4. [QS]ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, [QE][QS2]ಕೈಕೊಳ್ಳುವವರು ಅವರನ್ನು ಎದುರಿಸುವರು. [QE]
5. [QS]ಕೆಟ್ಟವರು ನ್ಯಾಯವನ್ನು ಗ್ರಹಿಸರು, [QE][QS2]ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು. [QE]
6. [QS]ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, [QE][QS2]ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು. [QE]
7. [QS]ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು, [QE][QS2]ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು. [QE]
8. [QS]ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು [QE][QS2]ಬಡವರಲ್ಲಿ ಕನಿಕರಪಡುವವನ ಪಾಲಾಗುವುದು. [QE]
9. [QS]ಧರ್ಮೋಪದೇಶಕ್ಕೆ ಕಿವಿಗೊಡದವನು [QE][QS2]ಮಾಡುವ ದೇವಪ್ರಾರ್ಥನೆಯೂ ಅಸಹ್ಯ. [QE]
10. [QS]ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, [QE][QS2]ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, [QE][QS2]ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು. [QE]
11. [QS]ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, [QE][QS2]ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು. [QE]
12. [QS]ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, [QE][QS2]ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು. [QE]
13. [QS]ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, [QE][QS2]ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು. [QE]
14. [QS]ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು[† ಯಾವಾಗಲೂ ಭಯಪಡುವವನು ಅಥವಾ ಯೆಹೋವನಿಗೆ ಭಯಪಡುವವನು. ] ಧನ್ಯನು, [QE][QS2]ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು. [QE]
15. [QS]ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, [QE][QS2]ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ. [QE]
16. [QS]ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, [QE][QS2]ದೋಚಿಕೊಳ್ಳದವನು ದೀರ್ಘಾಯುಷ್ಯನು. [QE]
17. [QS]ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, [QE][QS2]ಅವನನ್ನು ಯಾರೂ ತಡೆಯಬಾರದು. [QE]
18. [QS]ಸನ್ಮಾರ್ಗಿಗೆ ಉದ್ಧಾರ, [QE][QS2]ವಕ್ರಮಾರ್ಗಿಗೆ ತಟ್ಟನೆ ಸೋಲು. [QE]
19. [QS]ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ, [QE][QS2]ವ್ಯರ್ಥ ಕಾರ್ಯಾಸಕ್ತನಿಗೆ ಹೊಟ್ಟೆತುಂಬಾ ಬಡತನ. [QE]
20. [QS]ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, [QE][QS2]ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು. [QE]
21. [QS]ಪಕ್ಷಪಾತವು ಅಧರ್ಮ, [QE][QS2]ತುತ್ತು ಅನ್ನಕ್ಕಾಗಿಯೂ ಜನರು ದ್ರೋಹಮಾಡುವುದುಂಟು. [QE]
22. [QS]ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, [QE][QS2]ತನಗೆ ಕೊರತೆಯಾಗುವುದೆಂದು ಅರಿಯನು. [QE]
23. [QS]ಮುಖಸ್ತುತಿ ಮಾಡುವವನಿಗಿಂತಲೂ, [QE][QS2]ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು. [QE]
24. [QS]ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು, [QE][QS2]ಕೆಡುಕನಿಗೆ ಜೊತೆಗಾರನು. [QE]
25. [QS]ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು, [QE][QS2]ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು. [QE]
26. [QS]ತನ್ನಲ್ಲೇ ಭರವಸವಿಡುವವನು ಮೂಢನು, [QE][QS2]ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು. [QE]
27. [QS]ಬಡವರಿಗೆ ದಾನಮಾಡುವವನು ಕೊರತೆಪಡನು, [QE][QS2]ಅವರನ್ನು ಕಂಡು ಕಾಣದಂತೆ ಇರುವವನು[‡ ಅವರನ್ನು ಕಂಡು ಕಾಣದಂತೆ ಇರುವವನು ಮೂಲತಃ ಅವರಿಗೆ ಕಣ್ಣು ಮುಚ್ಚಿಕೊಳ್ಳುವವನು. ಅದರರ್ಥ ಅವರಿಗೆ ಸಹಾಯ ಮಾಡುವುದಕ್ಕೆ ನಿರಾಕರಿಸುವವನು. ] ಬಹುಶಾಪಕ್ಕೆ ಒಳಗಾಗುವನು. [QE]
28. [QS]ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು, [QE][QS2]ನಾಶನವಾದರೆ ಶಿಷ್ಟರು ವೃದ್ಧಿಯಾಗುವರು. [QE]