1. {#1ಯೆಹೋವನಲ್ಲಿ ಭರವಸವಿಡು } [QS]ಕಂದಾ, ನನ್ನ ಉಪದೇಶವನ್ನು ಮರೆಯಬೇಡ, [QE][QS2]ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು. [QE]
2. [QS]ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ, [QE][QS2]ನಿನಗೆ ಸುಕ್ಷೇಮವನ್ನು ಉಂಟುಮಾಡುವವು. [QE]
3. [QS]ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, [QE][QS2]ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ. [QE]
4. [QS]ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, [QE][QS2]ಸಮ್ಮತಿಯನ್ನೂ ಪಡೆದುಕೊಳ್ಳುವಿ. [QE]
5. [QS]ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ [QE][QS2]ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು. [QE]
6. [QS]ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; [QE][QS2]ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು. [QE]
7. [QS]ನೀನೇ ಬುದ್ಧಿವಂತನು ಎಂದೆಣಿಸದೆ, [QE][QS2]ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು. [QE]
8. [QS]ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, [QE][QS2]ಎಲುಬುಗಳಿಗೆ ಸಾರವೂ ಉಂಟಾಗುವವು. [QE]
9. [QS]ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ [QE][QS2]ಯೆಹೋವನನ್ನು ಸನ್ಮಾನಿಸು. [QE]
10. [QS]ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, [QE][QS2]ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು. [QE]
11. [QS]ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. [QE][QS2]ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ. [QE]
12. [QS]ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ [QE][QS2]ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ. [QE]
13. [QS]ಜ್ಞಾನವನ್ನು ಪಡೆಯುವವನು ಧನ್ಯನು, [QE][QS2]ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು. [QE]
14. [QS]ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, [QE][QS2]ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ. [QE]
15. [QS]ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, [QE][QS2]ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ. [QE]
16. [QS]ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, [QE][QS2]ಎಡಗೈಯಲ್ಲಿ ಧನವೂ, ಘನತೆಯೂ ಉಂಟು. [QE]
17. [QS]ಆಕೆಯ ದಾರಿಗಳು ಸುಖಕರವಾಗಿವೆ, [QE][QS2]ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ. [QE]
18. [QS]ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. [QE][QS2]ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು. [QE]
19. [QS]ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸ್ಥಾಪಿಸಿ, [QE][QS2]ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು. [QE]
20. [QS]ಭೂಮಿಯ ಕೆಳಗಿನ ಸಾಗರವು ಒಡೆದದ್ದಕ್ಕೂ, [QE][QS2]ಆಕಾಶವು ಇಬ್ಬನಿಯನ್ನು ಸುರಿಸುವುದಕ್ಕೂ ಆತನ ತಿಳಿವಳಿಕೆಯೇ ಸಾಧನ. [QE]
21. [QS]ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ, [QE][QS2]ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ. [QE]
22. [QS]ಅವು ನಿನಗೆ ಜೀವವೂ, ನಿನ್ನ ಕೊರಳಿಗೆ ಭೂಷಣವೂ ಆಗಿರುವವು. [QE]
23. [QS]ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ. [QE]
24. [QS]ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, [QE][QS2]ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ. [QE]
25. [QS]ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ [QE][QS2]ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ. [QE]
26. [QS]ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು, [QE][QS2]ನಿನ್ನ ಕಾಲು ಮೋಸದ ಬಲೆಗೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು. [QE]
27. [QS]ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ [QE][QS2]ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ. [QE]
28. [QS]ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ, “ಹೋಗಿ ಬಾ, [QE][QS2]ನಾಳೆ ಕೊಡುತ್ತೇನೆ” ಎಂದು ಹೇಳಬೇಡ. [QE]
29. [QS]ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, [QE][QS2]ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ? [QE]
30. [QS]ನಿನಗೆ ಅಪಕಾರ ಮಾಡದವನ ಸಂಗಡ [QE][QS2]ಸುಮ್ಮನೆ ಜಗಳವಾಡಬೇಡ. [QE]
31. [QS]ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, [QE][QS2]ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ. [QE]
32. [QS]ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, [QE][QS2]ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು. [QE]
33. [QS]ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, [QE][QS2]ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು. [QE]
34. [QS]ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. [QE][QS2]ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು. [QE]
35. [QS]ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು, [QE][QS2]ಜ್ಞಾನಹೀನರಿಗಾಗುವ ಬಹುಮಾನವು ಅವಮಾನವೇ. [QE]