1. {ಯೆಹೋವನಲ್ಲಿ ಭರವಸವಿಡು} [PS] ಕಂದಾ, ನನ್ನ ಉಪದೇಶವನ್ನು ಮರೆಯಬೇಡ, [QBR2] ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು. [QBR]
2. ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ, [QBR2] ನಿನಗೆ ಸುಕ್ಷೇಮವನ್ನು ಉಂಟುಮಾಡುವವು. [QBR]
3. ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, [QBR2] ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ. [QBR]
4. ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, [QBR2] ಸಮ್ಮತಿಯನ್ನೂ ಪಡೆದುಕೊಳ್ಳುವಿ. [QBR]
5. ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ [QBR2] ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು. [QBR]
6. ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; [QBR2] ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು. [QBR]
7. ನೀನೇ ಬುದ್ಧಿವಂತನು ಎಂದೆಣಿಸದೆ, [QBR2] ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು. [QBR]
8. ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, [QBR2] ಎಲುಬುಗಳಿಗೆ ಸಾರವೂ ಉಂಟಾಗುವವು. [QBR]
9. ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ [QBR2] ಯೆಹೋವನನ್ನು ಸನ್ಮಾನಿಸು. [QBR]
10. ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, [QBR2] ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು. [QBR]
11. ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. [QBR2] ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ. [QBR]
12. ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ [QBR2] ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ. [QBR]
13. ಜ್ಞಾನವನ್ನು ಪಡೆಯುವವನು ಧನ್ಯನು, [QBR2] ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು. [QBR]
14. ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, [QBR2] ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ. [QBR]
15. ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, [QBR2] ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ. [QBR]
16. ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, [QBR2] ಎಡಗೈಯಲ್ಲಿ ಧನವೂ, ಘನತೆಯೂ ಉಂಟು. [QBR]
17. ಆಕೆಯ ದಾರಿಗಳು ಸುಖಕರವಾಗಿವೆ, [QBR2] ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ. [QBR]
18. ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. [QBR2] ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು. [QBR]
19. ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸ್ಥಾಪಿಸಿ, [QBR2] ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು. [QBR]
20. ಭೂಮಿಯ ಕೆಳಗಿನ ಸಾಗರವು ಒಡೆದದ್ದಕ್ಕೂ, [QBR2] ಆಕಾಶವು ಇಬ್ಬನಿಯನ್ನು ಸುರಿಸುವುದಕ್ಕೂ ಆತನ ತಿಳಿವಳಿಕೆಯೇ ಸಾಧನ. [QBR]
21. ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ, [QBR2] ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ. [QBR]
22. ಅವು ನಿನಗೆ ಜೀವವೂ, ನಿನ್ನ ಕೊರಳಿಗೆ ಭೂಷಣವೂ ಆಗಿರುವವು. [QBR]
23. ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ. [QBR]
24. ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, [QBR2] ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ. [QBR]
25. ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ [QBR2] ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ. [QBR]
26. ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು, [QBR2] ನಿನ್ನ ಕಾಲು ಮೋಸದ ಬಲೆಗೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು. [QBR]
27. ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ [QBR2] ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ. [QBR]
28. ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ, “ಹೋಗಿ ಬಾ, [QBR2] ನಾಳೆ ಕೊಡುತ್ತೇನೆ” ಎಂದು ಹೇಳಬೇಡ. [QBR]
29. ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, [QBR2] ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ? [QBR]
30. ನಿನಗೆ ಅಪಕಾರ ಮಾಡದವನ ಸಂಗಡ [QBR2] ಸುಮ್ಮನೆ ಜಗಳವಾಡಬೇಡ. [QBR]
31. ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, [QBR2] ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ. [QBR]
32. ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, [QBR2] ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು. [QBR]
33. ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, [QBR2] ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು. [QBR]
34. ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. [QBR2] ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು. [QBR]
35. ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು, [QBR2] ಜ್ಞಾನಹೀನರಿಗಾಗುವ ಬಹುಮಾನವು ಅವಮಾನವೇ. [PE]