1. {#1ಅರಸನಾದ ಲೆಮೂವೇಲನ ಮಾತುಗಳು } [QS]ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವೋಕ್ತಿಯು, [QE]
2. [QS]ಏನು, ಕಂದಾ? ನನ್ನ ಗರ್ಭಪುತ್ರನೇ, [QE][QS2]ಏನು, ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ? [QE]
3. [QS]ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸಬೇಡ, [QE][QS2]ರಾಜರಿಗೆ ವಿನಾಶಕರವಾದ ದಾರಿಗೆ ತಿರುಗಬೇಡ. [QE]
4. [QS]ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, [QE][QS2]ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, [QE][QS2]“ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ. [QE]
5. [QS]ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು, [QE][QS2]ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸಮಾಡುವರು. [QE]
6. [QS]ಮದ್ಯವನ್ನು ಗತಿಯಿಲ್ಲದವನಿಗೂ, [QE][QS2]ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು. [QE]
7. [QS]ಕುಡಿದು ಬಡತನವನ್ನು ಮರೆತುಬಿಡಲಿ, [QE][QS2]ಶ್ರಮೆಯನ್ನು ಇನ್ನೂ ಜ್ಞಾಪಕಕ್ಕೆ ತಾರದಿರಲಿ. [QE]
8. [QS]ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, [QE][QS2]ನ್ಯಾಯವಾಗುವಂತೆ ಬಾಯಿ ತೆರೆ. [QE]
9. [QS]ಬಾಯನ್ನು ತೆರೆದು ನ್ಯಾಯವನ್ನು ತೀರಿಸು, [QE][QS2]ದೀನದರಿದ್ರರ ವ್ಯಾಜ್ಯ ಮಾಡು. [QE]
10. {#1ಗುಣವತಿಯಾದ ಸತಿ } [QS]ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? [QE][QS2]ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು. [QE]
11. [QS]ಪತಿಯ ಹೃದಯವು ಆಕೆಯಲ್ಲಿ ಭರವಸವಿಡುವುದು, [QE][QS2]ಅವನು ಕೊಳ್ಳೆ ಕೊಳ್ಳೆಯಾಗಿ ಸಂಪಾದಿಸುವನು. [QE]
12. [QS]ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ, [QE][QS2]ಹಿತವನ್ನೇ ಮಾಡುತ್ತಿರುವಳು. [QE]
13. [QS]ಉಣ್ಣೆಯನ್ನೂ, ಸೆಣಬನ್ನೂ ಹುಡುಕಿ ತಂದು, [QE][QS2]ಕೈಕೆಲಸವನ್ನು ಆಸಕ್ತಿಯಿಂದ ಮಾಡುವಳು. [QE]
14. [QS]ವ್ಯಾಪಾರದ ಹಡಗುಗಳಂತೆ, [QE][QS2]ದೂರದಿಂದ ಬೇಕಾದ ಆಹಾರವನ್ನು ತರುವಳು. [QE]
15. [QS]ಇನ್ನೂ ಕತ್ತಲಿರುವಾಗಲೇ ಎದ್ದು, [QE][QS2]ಮನೆಯವರಿಗೆ ಆಹಾರವನ್ನು, ನೀಡುವಳು [QE][QS2]ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು. [QE]
16. [QS]ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು, [QE][QS2]ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು. [QE]
17. [QS]ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು, [QE][QS2]ತೋಳುಗಳನ್ನು ಶಕ್ತಿಗೊಳಿಸುವಳು. [QE]
18. [QS]ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು, [QE][QS2]ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು. [QE]
19. [QS]ರಾಟೆಯ ಮೇಲೆ ಕೈ ಹಾಕಿ, [QE][QS2]ಕದರನ್ನು ಹಿಡಿಯುವಳು. [QE]
20. [QS]ಬಡವರಿಗಾಗಿ ಕೈ ಬಿಚ್ಚಿ, [QE][QS2]ದಿಕ್ಕಿಲ್ಲದವರಿಗೆ ಕೈ ನೀಡುವಳು. [QE]
21. [QS]ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವುದರಿಂದ, [QE][QS2]ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ. [QE]
22. [QS]ತನಗಾಗಿ ರತ್ನಗಂಬಳಿಗಳನ್ನು ಮಾಡುವಳು, [QE][QS2]ಆಕೆಯ ಉಡುಪು ನಾರುಮಡಿ, ರಕ್ತಾಂಬರ. [QE]
23. [QS]ಆಕೆಯ ಪತಿಯು ನ್ಯಾಯಸ್ಥಾನದಲ್ಲಿ, [QE][QS2]ದೇಶದ ಹಿರಿಯರ ಮಧ್ಯದಲ್ಲಿ ಕುಳಿತಿರುವಾಗ ಪ್ರಸಿದ್ಧನಾಗಿ ಕಾಣುವನು. [QE]
24. [QS]ಹಚ್ಚಡಗಳನ್ನು ನೆಯ್ದು ಮಾರಾಟಮಾಡುವಳು, [QE][QS2]ನಡುಕಟ್ಟುಗಳನ್ನು ವರ್ತಕನಿಗೆ ಒದಗಿಸುವಳು. [QE]
25. [QS]ಬಲವನ್ನು, ತೇಜಸ್ಸನ್ನು ಹೊದ್ದುಕೊಂಡಿರುವಳು, [QE][QS2]ಭವಿಷ್ಯತ್ತಿನ ಭಯವಿಲ್ಲದೆ ನಗುತ್ತಿರುವಳು. [QE]
26. [QS]ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು. [QE][QS2]ಆಕೆಯ ನಾಲಿಗೆಯು ಬುದ್ಧಿಯನ್ನು ಪ್ರೀತಿಪೂರ್ವಕವಾಗಿ ಹೇಳುವುದು. [QE]
27. [QS]ಸೋಮಾರಿತನದ ಅನ್ನವನ್ನು ತಿನ್ನದೆ, [QE][QS2]ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು. [QE]
28. [QS]ಮಕ್ಕಳು ಎದ್ದುನಿಂತು ಆಕೆಯನ್ನು “ಧನ್ಯಳು” ಎಂದು ಹೇಳುವರು. [QE]
29. [QS]ಪತಿಯು ಸಹ, “ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, [QE][QS2]ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು” ಎಂದು ಆಕೆಯನ್ನು ಕೊಂಡಾಡುವನು. [QE]
30. [QS]ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, [QE][QS2]ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು. [QE]
31. [QS]ಆಕೆಯ ಕೈಕೆಲಸಕ್ಕೆ ಪ್ರತಿಫಲವನ್ನು ಸಲ್ಲಿಸಿರಿ, [QE][QS2]ಆಕೆಯ ಕಾರ್ಯಗಳೇ ಪುರದ್ವಾರಗಳಲ್ಲಿ ಆಕೆಯನ್ನು ಪ್ರಶಂಸಿಸಲಿ.[QE]