1. {#1ಜ್ಞಾನವು ಪರಮೋನ್ನತವಾದದ್ದು } [QS]ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ, [QE][QS2]ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ. [QE]
2. [QS]ನಾನು ನಿಮಗೆ ಸುಬೋಧೆಯನ್ನು ಮಾಡುವೆನು, [QE][QS2]ನನ್ನ ಉಪದೇಶವನ್ನು ಬಿಡಬೇಡಿರಿ. [QE]
3. [QS]ನಾನೂ ನನ್ನ ತಂದೆಗೆ ಅಧೀನನಾದ ಮಗನೂ, [QE][QS2]ತಾಯಿಯ ದೃಷ್ಟಿಗೆ ಕೋಮಲನಾದ ಏಕಪುತ್ರನೂ ಆಗಿದ್ದೆನು. [QE]
4. [QS]ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು, [QE][QS2]“ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, [QE][QS2]ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು. [QE]
5. [QS]ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ, [QE][QS2]ನನ್ನ ಮಾತುಗಳಿಗೆ ಅಸಡ್ಡೆ ತೋರಿಸಬೇಡ. [QE]
6. [QS]ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವುದು, [QE][QS2]ಪ್ರೀತಿಸಿದರೆ, ಅದು ನಿನ್ನನ್ನು ಕಾಯುವುದು. [QE]
7. [QS]ಜ್ಞಾನವನ್ನು ಪಡೆಯಬೇಕೆಂಬುದೇ ಜ್ಞಾನಬೋಧೆಯ ಪ್ರಥಮಪಾಠ, [QE][QS2]ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ. [QE]
8. [QS]ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು, [QE][QS2]ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು. [QE]
9. [QS]ಆಕೆಯು ನಿನ್ನ ತಲೆಗೆ ಅಂದದ ಪುಷ್ಪಮಾಲೆಯನ್ನು ಇಟ್ಟು, [QE][QS2]ಸುಂದರ ಕಿರೀಟವನ್ನು ನಿನಗೆ ಒಪ್ಪಿಸುವಳು.” [QE]
10. [QS]ಕಂದಾ, ಗಮನಿಸಿ ನನ್ನ ಮಾತುಗಳನ್ನು ಕೇಳು, [QE][QS2]ಕೇಳಿದರೆ, ನಿನ್ನ ಜೀವಮಾನದ ವರ್ಷಗಳು ಹೆಚ್ಚುವವು. [QE]
11. [QS]ನಾನು ಜ್ಞಾನಮಾರ್ಗವನ್ನು ಉಪದೇಶಿಸಿ, [QE][QS2]ಧರ್ಮಮಾರ್ಗದಲ್ಲಿ ನಿನ್ನನ್ನು ನಡೆಸುವೆನು. [QE]
12. [QS]ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಅಡ್ಡಿಯಾಗುವುದಿಲ್ಲ, [QE][QS2]ಓಡಿದರೆ ಮುಗ್ಗರಿಸುವುದಿಲ್ಲ. [QE]
13. [QS]ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ, [QE][QS2]ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು. [QE]
14. [QS]ದುಷ್ಟರ ಮಾರ್ಗದಲ್ಲಿ ಸೇರಬೇಡ, [QE][QS2]ಕೆಟ್ಟವರ ದಾರಿಯಲ್ಲಿ ನಡೆಯಬೇಡ. [QE]
15. [QS]ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯಬೇಡ, [QE][QS2]ಅದರಿಂದ ಹಿಂತಿರುಗಿ ಮುಂದೆ ನಡೆ. [QE]
16. [QS]ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು; [QE][QS2]ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವುದು. [QE]
17. [QS]ದುಷ್ಟತನವೇ ಅವರ ಆಹಾರ; ಬಲಾತ್ಕಾರವೇ ಅವರ ದ್ರಾಕ್ಷಾರಸ ಪಾನ. [QE]
18. [QS]ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ [QE][QS2]ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ. [QE]
19. [QS]ದುಷ್ಟರ ಮಾರ್ಗವೋ ಕತ್ತಲಿನಂತಿದೆ; [QE][QS2]ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು. [QE]
20. [QS]ಕಂದಾ, ನನ್ನ ಮಾತುಗಳನ್ನು ಆಲಿಸು, [QE][QS2]ನನ್ನ ನುಡಿಗಳಿಗೆ ಕಿವಿಗೊಡು. [QE]
21. [QS]ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ, [QE][QS2]ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ. [QE]
22. [QS]ಅವುಗಳನ್ನು ಹೊಂದುವವರಿಗೆ ಅವು ಜೀವವು, [QE][QS2]ದೇಹಕ್ಕೆಲ್ಲಾ ಅವೇ ಆರೋಗ್ಯವು. [QE]
23. [QS]ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, [QE][QS2]ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು. [QE]
24. [QS]ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, [QE][QS2]ಕೆಟ್ಟ ನುಡಿಗಳನ್ನು ಬಾಯಿಂದ ದೂರಮಾಡು. [QE]
25. [QS]ನೆಟ್ಟಗೆ ದೃಷ್ಟಿಸು, [QE][QS2]ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ. [QE]
26. [QS]ನೀನು ನಡೆಯುವ ದಾರಿಯನ್ನು ಸಮಮಾಡು, [QE][QS2]ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು. [QE]
27. [QS]ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗಬೇಡ, [QE][QS2]ನಿನ್ನ ಕಾಲನ್ನು ಕೇಡಿಗೆ ದೂರಮಾಡು. [QE]