1. {#1ವ್ಯಭಿಚಾರದಿಂದ ದೂರವಿರಲು ಎಚ್ಚರಿಕೆ } [QS]ಕಂದಾ, ನನ್ನ ಜ್ಞಾನೋಪದೇಶವನ್ನು ಆಲಿಸು, [QE][QS2]ವಿವೇಕದಿಂದ ಕೂಡಿದ ನನ್ನ ಬೋಧನೆಗೆ ಕಿವಿಗೊಡು. [QE]
2. [QS]ಹೀಗಾದರೆ ನೀನು ವಿವೇಚನೆಯನ್ನು ಹೊಂದಿಕೊಳ್ಳುವಿ, [QE][QS2]ನಿನ್ನ ತುಟಿಗಳು ತಿಳಿವಳಿಕೆಯನ್ನು ಕಾಪಾಡುವವು. [QE]
3. [QS]ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು, [QE][QS2]ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ. [QE]
4. [QS]ಅವಳು ಕಡೆಯಲ್ಲಿ ವಿಷದಂತೆ ಕಹಿಯೂ, [QE][QS2]ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು. [QE]
5. [QS]ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು, [QE][QS2]ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು. [QE]
6. [QS]ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು, [QE][QS2]ಅದು ಅವಳಿಗೆ ತಿಳಿದೇ ಇಲ್ಲ. [QE]
7. [QS]ಹೀಗಿರಲು ಮಗನೇ, ನನ್ನ ಕಡೆಗೆ ಕಿವಿಗೊಡು, [QE][QS2]ನನ್ನ ಮಾತುಗಳಿಂದ ದೂರವಾಗಿರಬೇಡ. [QE]
8. [QS]ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ [QE][QS2]ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ! [QE]
9. [QS]ಎಚ್ಚರವಹಿಸಿಕೋ, ನಿನ್ನ ಪುರುಷತ್ವವು ಪರಾಧೀನವಾಗುವುದು, [QE][QS2]ನಿನ್ನ ಆಯುಷ್ಯವು ಕ್ರೂರರ ವಶವಾಗುವುದು. [QE]
10. [QS]ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು, [QE][QS2]ನೀನು ಅನ್ಯನ ಮನೆಯಲ್ಲಿ ದುಡಿಯುವಿ. [QE]
11. [QS]ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು, [QE]
12. [QS]“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, [QE][QS2]ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು, [QE]
13. [QS]ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ, [QE][QS2]ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ! [QE]
14. [QS]ನಾನು ದೇವಜನರ ಸಭೆಯ ನಡುವೆ [QE][QS2]ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು” ಎಂದು ಅಂದುಕೊಳ್ಳುವಿ. [QE]
15. [QS]ಸ್ವಂತ ಕೊಳದ ನೀರನ್ನು, [QE][QS2]ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ. [QE]
16. [QS]ನಿನ್ನ ಒರತೆಗಳು ಬಯಲಿನಲ್ಲಿಯೂ, [QE][QS2]ನಿನ್ನ ಕಾಲುವೆಗಳು ಬೀದಿಗಳಲ್ಲಿಯೂ ಹರಡಿ ಹರಿಯುವುದು ಹಿತವೇ? [QE]
17. [QS]ಅವು ನಿನಗೊಬ್ಬನಿಗೇ ಹರಿಯಲಿ, [QE][QS2]ಪರರು ನಿನ್ನೊಂದಿಗೆ ಸೇರಿ ಕುಡಿಯಬಾರದು. [QE]
18. [QS]ನಿನ್ನ ಬುಗ್ಗೆಯು ದೇವರ ಆಶೀರ್ವಾದವನ್ನು ಹೊಂದಲಿ, [QE][QS2][* ಅಥವಾ ನೀನು ಯೌವನಪ್ರಾಯದಲ್ಲಿ ಮದುವೆಯಾದ ಪತ್ನಿ. ]ನಿನ್ನ ಯೌವನಕಾಲದ ಪತ್ನಿಯಲ್ಲಿ ಆನಂದಿಸು. [QE]
19. [QS]ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ, [QE][QS2]ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು. [QE]
20. [QS]ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, [QE][QS2]ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ? [QE]
21. [QS]ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, [QE][QS2]ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ. [QE]
22. [QS]ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, [QE][QS2]ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು. [QE]
23. [QS]ಸದುಪದೇಶದ ಕೊರತೆಯಿಂದಲೇ ನಾಶವಾಗುವನು, [QE][QS2]ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು. [QE]