1. {ಮಾತುಕೊಡುವುದರಲ್ಲಿ ಎಚ್ಚರಿಕೆ} [PS] ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ, [QBR2] ಪರನೊಂದಿಗೆ ಪ್ರಮಾಣ ಮಾಡಿಕೊಂಡಿದ್ದರೆ, [QBR]
2. ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿಕೊಂಡಿದ್ದೀ, [QBR2] ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ. [QBR]
3. ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದ್ದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು, [QBR2] ನಡೆ, ತ್ವರೆಪಡು, ಆ ನೆರೆಯವನನ್ನು ಅಂಗಲಾಚಿ ಬೇಡಿಕೋ, [QBR]
4. ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, [QBR] ನಿನ್ನ ರೆಪ್ಪೆಗಳನ್ನು ಮುಚ್ಚಬೇಡ; [QBR]
5. ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ, [QBR2] ಪಕ್ಷಿಯು ಹಾರಿ ಹೋಗುವ ಹಾಗೂ ತಪ್ಪಿಸಿಕೋ.
6. {ಸೋಮಾರಿಯಾಗಿರಬೇಡ} [PS] ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, [QBR2] ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ. [QBR]
7. ಅದಕ್ಕೆ ನಾಯಕ, ಅಧಿಕಾರಿ ಹಾಗೂ ಪ್ರಭುಗಳಿಲ್ಲದಿದ್ದರೂ, [QBR]
8. ಬೇಸಿಗೆಯಲ್ಲಿ ತನ್ನ ತೀನಿಯನ್ನು ಸಿದ್ಧಮಾಡುವುದು, [QBR2] ಸುಗ್ಗಿಯ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವುದು. [QBR]
9. ಸೋಮಾರಿಯೇ, ಎಷ್ಟು ಹೊತ್ತು ನಿದ್ರೆ? [QBR2] ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವಿ? [QBR]
10. “ಇನ್ನು ಸ್ವಲ್ಪ ನಿದ್ದೆ, ಇನ್ನು ಸ್ವಲ್ಪ ತೂಕಡಿಕೆ, [QBR2] ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ” ಅಂದುಕೊಳ್ಳುವಿಯಾ? [QBR]
11. ಬಡತನವು ದಾರಿಗಳ್ಳನ ಹಾಗೂ [QBR2] ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು. [QBR]
12. ನೀಚನೂ, ದುಷ್ಟನೂ ಆಗಿರುವ ಮನುಷ್ಯನ ನಡತೆಯನ್ನು ನೋಡು, [QBR2] ಅವನು ವಕ್ರ ಮಾತಿನವನಾಗಿದ್ದಾನೆ, [QBR]
13. ಕಣ್ಣನ್ನು ಮಿಟಕಿಸುತ್ತಾನೆ, ಕಾಲಿನಿಂದ ಕೆರೆಯುತ್ತಾನೆ, [QBR2] ಬೆರಳ ಸನ್ನೆಮಾಡುತ್ತಾನೆ. [QBR]
14. ಅವನ ಮನಸ್ಸಿನಲ್ಲಿರುವುದು ದ್ರೋಹವೇ; [QBR2] ಯಾವಾಗಲೂ ಕೇಡನ್ನು ಕಲ್ಪಿಸುತ್ತಾನೆ, [QBR2] ಜಗಳದ ಬೀಜವನ್ನು ಬಿತ್ತುತ್ತಾನೆ. [QBR]
15. ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವುದು, [QBR2] ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು. [QBR]
16. ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, [QBR2] ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ. [QBR]
17. ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, [QBR2] ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ, [QBR]
18. ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, [QBR2] ಕೇಡುಮಾಡಲು ತ್ವರೆಪಡುವ ಕಾಲು, [QBR]
19. ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು [QBR2] ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ.
20. {ಪರಸ್ತ್ರೀಯರ ಸಹವಾಸದ ಬಗ್ಗೆ ಎಚ್ಚರಿಕೆ} [PS] ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, [QBR2] ತಾಯಿಯ ಉಪದೇಶವನ್ನು ಬಿಡಬೇಡ. [QBR]
21. ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ, [QBR2] ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ. [QBR]
22. ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, [QBR2] ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, [QBR2] ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು. [QBR]
23. ಆಜ್ಞೆಯೇ ದೀಪ, ಉಪದೇಶವೇ ಬೆಳಕು, [QBR2] ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ. [QBR]
24. ಅದು ಕೆಟ್ಟ ಸ್ತ್ರೀಯಿಂದಲೂ, [QBR2] ವೇಶ್ಯೆಯ ಸಿಹಿನುಡಿಯಿಂದಲೂ ನಿನ್ನನ್ನು ರಕ್ಷಿಸತಕ್ಕದ್ದಾಗಿದೆ. [QBR]
25. ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ, [QBR2] ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ. [QBR]
26. ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವುದು, [QBR2] ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು. [QBR]
27. ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ [QBR2] ಬಟ್ಟೆ ಸುಡುವುದಿಲ್ಲವೋ? [QBR]
28. ಧಗಧಗಿಸುವ ಕೆಂಡದ ಮೇಲೆ ನಡೆದರೆ [QBR2] ಕಾಲು ಬೇಯುವುದಿಲ್ಲವೋ? [QBR]
29. ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು, [QBR2] ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು. [QBR]
30. ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ [QBR2] ಜನರು ಅಷ್ಟೇನೂ ಹೀಯಾಳಿಸರು. [QBR]
31. ಅವನ ತಪ್ಪು ಬಯಲಾದರೆ ಅವನು ಏಳರಷ್ಟು ಕೊಡಬೇಕಾಗುವುದು, [QBR2] ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ಕೊಟ್ಟು ತೀರಿಸಲೇಬೇಕು. [QBR]
32. ವ್ಯಭಿಚಾರಿಯೋ ಕೇವಲ ಬುದ್ಧಿಹೀನನು, [QBR2] ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು. [QBR]
33. ಅವನಿಗೆ ಗಾಯವೂ, ಅವಮಾನವೂ ಆಗುವವು, [QBR2] ಅವನ ಕೆಟ್ಟ ಹೆಸರು ಎಂದಿಗೂ ಅಳಿಸಲ್ಪಡದು. [QBR]
34. ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, [QBR2] ಅವನು ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು. [QBR]
35. ಅವನು ಯಾವ ಈಡನ್ನೂ ಮುಟ್ಟನು; ಎಷ್ಟು ಲಂಚಕೊಟ್ಟರೂ ಒಪ್ಪನು. [PE]