1. {#1ಜಾರಸ್ತ್ರೀಯ ವಿಷಯದಲ್ಲಿ ಎಚ್ಚರಿಕೆ } [QS]ಕಂದಾ, ನನ್ನ ಮಾತುಗಳನ್ನು ಮನಸ್ಸಿನಲ್ಲಿಟ್ಟುಕೋ, [QE][QS2]ನನ್ನ ಆಜ್ಞೆಗಳನ್ನು ನಿಧಿಯಂತೆ ಕಾಪಾಡಿಕೋ. [QE]
2. [QS]ನನ್ನ ಉಪದೇಶವನ್ನು ಕಣ್ಣುಗುಡ್ಡೆಯಂತೆ ಪಾಲಿಸು, [QE][QS2]ನನ್ನ ಆಜ್ಞೆಗಳನ್ನು ಕೈಕೊಂಡು ಬಾಳು. [QE]
3. [QS]ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಧರಿಸಿಕೋ, [QE][QS2]ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆದುಕೋ. [QE]
4. [QS]ಜ್ಞಾನವನ್ನು, “ನೀನು ನನ್ನ ಅಕ್ಕಾ” ಎಂದು ಹೇಳು, [QE][QS2]ವಿವೇಕವನ್ನು, “ಪ್ರಿಯೇ” ಎಂದು ಕರೆ. [QE]
5. [QS]ಅವು ಜಾರಳಿಂದ ಮತ್ತು ಸವಿಮಾತನಾಡುವ [QE][QS2]ಪರಸ್ತ್ರೀಯಿಂದ ನಿನ್ನನ್ನು ರಕ್ಷಿಸುವವು. [QE]
6. [QS]ನಾನು ನನ್ನ ಮನೆಯ ಕಿಟಕಿಯ [QE][QS2]ಜಾಲರಿಯಿಂದ ಇಣಿಕಿ ನೋಡಲು [QE]
7. [QS]ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು. [QE][QS2]ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಥನನ್ನು ಕಂಡೆನು. [QE]
8. [QS]ಅವನು ಸಂಜೆಯ ಮೊಬ್ಬಿನಲ್ಲಿ, ಮಧ್ಯರಾತ್ರಿಯ ಅಂಧಕಾರದಲ್ಲಿ, [QE]
9. [QS]ಅವಳ ಮನೆಯ ಹತ್ತಿರ ಬೀದಿಯಲ್ಲಿ ಹಾದುಹೋಗುತ್ತಾ, [QE][QS2]ಅವಳ ಮನೆಯ ಕಡೆಗೆ ತಿರುಗಿದ್ದನ್ನು ಕಂಡೆನು. [QE]
10. [QS]ಇಗೋ ವೇಶ್ಯಾರೂಪವನ್ನು ಧರಿಸಿಕೊಂಡಿದ್ದ [QE][QS2]ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಂಡಳು. [QE]
11. [QS]ಇವಳು ಕೂಗಾಟದವಳು, ಹಟಮಾರಿ, [QE][QS2]ಮನೆಯಲ್ಲಿ ನಿಲ್ಲತಕ್ಕವಳೇ ಅಲ್ಲ; [QE]
12. [QS]ಒಂದು ವೇಳೆ ಬೀದಿಗಳಲ್ಲಿರುವಳು, ಮತ್ತೊಂದು ವೇಳೆ ಚೌಕಗಳಲ್ಲಿರುವಳು, [QE][QS2]ಅಂತು ಪ್ರತಿಯೊಂದು ಮೂಲೆಯಲ್ಲಿಯೂ ಹೊಂಚು ಹಾಕುವಳು. [QE]
13. [QS]ಅವನನ್ನು ಹಿಡಿದು, ಮುದ್ದಾಡಿ ನಾಚಿಕೆಗೆಟ್ಟವಳಾಗಿ, [QE]
14. [QS]“ಎಲೈ, ಈ ದಿನ ನನ್ನ ಹರಕೆಗಳನ್ನು ಸಲ್ಲಿಸಿದ್ದೇನೆ, [QE][QS2]ಸಮಾಧಾನ ಯಜ್ಞಶೇಷವು ನನ್ನಲ್ಲಿದೆ, [QE]
15. [QS]ಆದಕಾರಣ ನಿನ್ನನ್ನು ಎದುರುಗೊಳ್ಳಲು ಬಂದೆನು, [QE][QS2]ನಿನ್ನನ್ನು ಆತುರದಿಂದ ಹುಡುಕಿ ಕಂಡುಕೊಂಡೆನು. [QE]
16. [QS]ನನ್ನ ಮಂಚದಲ್ಲಿ ಸುಪ್ಪತ್ತಿಯನ್ನೂ, [QE][QS2]ಐಗುಪ್ತದೇಶದ ನೂಲಿನ ವಿಚಿತ್ರ ವಸ್ತ್ರಗಳನ್ನೂ ಹಾಸಿದ್ದೇನೆ. [QE]
17. [QS]ಹಾಸಿಗೆಯ ಮೇಲೆ ರಕ್ತಬೋಳ, ಅಗುರು, [QE][QS2]ಲವಂಗ, ಚಕ್ಕೆ ಇವುಗಳ ಚೂರ್ಣಗಳಿಂದ ಸುವಾಸನೆಗೊಳಿಸಿದ್ದೇನೆ. [QE]
18. [QS]ಬಾ, ಬೆಳಗಿನ ತನಕ ಬೇಕಾದಷ್ಟು ರಮಿಸುವ, [QE][QS2]ಕಾಮವಿಲಾಸಗಳಿಂದ ಸಂತೋಷಿಸುವ. [QE]
19. [QS]ಯಜಮಾನನು ಮನೆಯಲ್ಲಿಲ್ಲ, ದೂರ ಪ್ರಯಾಣದಲ್ಲಿದ್ದಾನೆ. [QE]
20. [QS]ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ, [QE][QS2]ಹುಣ್ಣಿಮೆಗೆ ಮನೆಗೆ ಬರುವನು” ಎಂದು ಹೇಳುವಳು. [QE]
21. [QS]ಅವಳು ಅವನನ್ನು ತನ್ನ ಸವಿಮಾತುಗಳಿಂದ ಮನವೊಲಿಸಿ, [QE][QS2]ಬಹಳವಾಗಿ ಪ್ರೇರೇಪಿಸಿ ಸಮ್ಮತಿಪಡಿಸುತ್ತಾಳೆ. [QE]
22. [QS]ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ, [QE][QS2]ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ, [QE]
23. [QS]ಪಕ್ಷಿಯು ಬಲೆಯ ಕಡೆಗೆ ಓಡುವಂತೆಯೂ, [QE][QS2]ಅವನು ತನ್ನ ಪ್ರಾಣಾಪಾಯವನ್ನು ತಿಳಿಯದೆ, [QE][QS2]ಬಾಣವು ತನ್ನ ಕಾಳಿಜವನ್ನು ತಿವಿಯುವ ಮೇರೆಗೂ, [QE][QS2]ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ. [QE]
24. [QS]ಈಗ, ಮಕ್ಕಳೇ, ನನ್ನ ಕಡೆಗೆ ಕಿವಿಗೊಡಿರಿ, [QE][QS2]ನನ್ನ ಮಾತುಗಳನ್ನು ಆಲಿಸಿರಿ. [QE]
25. [QS]ನಿನ್ನ ಹೃದಯವು ಅವಳ ನಡತೆಯ ಕಡೆಗೆ ತಿರುಗದಿರಲಿ, [QE][QS2]ತಪ್ಪಿಹೋಗಿಯೂ ಅವಳ ಮಾರ್ಗದಲ್ಲಿ ನಡೆಯಬೇಡ. [QE]
26. [QS]ಅವಳಿಂದ ಗಾಯಪಟ್ಟು ಬಿದ್ದವರು ಬಹು ಜನರು, [QE][QS2]ಹತರಾದವರೋ ಲೆಕ್ಕವೇ ಇಲ್ಲ. [QE]
27. [QS]ಅವಳ ಮನೆಯು ಪಾತಾಳದ ದಾರಿ, [QE][QS2]ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದುಹೋಗುತ್ತದೆ. [QE]