1. {ಜ್ಞಾನವೆಂಬಾಕೆ ನೀಡುವ ಕರೆ} [PS] ಜ್ಞಾನವೆಂಬಾಕೆಯು ಕರೆಯುತ್ತಾಳಲ್ಲವೇ? [QBR2] ವಿವೇಕವೆಂಬ ಆಕೆಯು ಧ್ವನಿಗೈಯುತ್ತಾಳಲ್ಲವೇ? [QBR]
2. ಆಕೆಯು ರಾಜಮಾರ್ಗಗಳ ಮುಖ್ಯಸ್ಥಾನದಲ್ಲಿ, [QBR2] ದಾರಿಯ ಪಕ್ಕದಲ್ಲಿ, ನಡುಬೀದಿಯಲ್ಲಿ ನಿಂತುಕೊಳ್ಳುತ್ತಾಳೆ. [QBR]
3. ಆಕೆ ಪಟ್ಟಣದ ಪ್ರವೇಶ ದ್ವಾರದಲ್ಲಿ, [QBR2] ಬಾಗಿಲುಗಳೊಳಗೆ ಜನಸೇರುವ ಸ್ಥಳದಲ್ಲಿ ಹೀಗೆ ಕೂಗುತ್ತಾಳೆ, [QBR]
4. “ಜನರೇ, ನಿಮ್ಮನ್ನೇ ಕರೆಯುತ್ತೇನೆ, [QBR2] ಮಾನವರಿಗಾಗಿಯೇ ಧ್ವನಿಗೈಯುತ್ತೇನೆ. [QBR]
5. ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, [QBR2] ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ. [QBR]
6. ಕೇಳಿರಿ, ನಾನು ಶ್ರೇಷ್ಠವಾದ ಸಂಗತಿಗಳನ್ನು ಹೇಳುವೆನು, [QBR2] ಯಥಾರ್ಥಕ್ಕಾಗಿಯೇ ತುಟಿಗಳನ್ನು ತೆರೆಯುವೆನು, [QBR]
7. ನನ್ನ ಬಾಯಿ ಸತ್ಯವನ್ನೇ ಆಡುವುದು, [QBR2] ದುಷ್ಟತನವು ನನ್ನ ತುಟಿಗಳಿಗೆ ಅಸಹ್ಯವಾಗಿದೆ. [QBR]
8. ನನ್ನ ಮಾತುಗಳೆಲ್ಲಾ ನೀತಿಭರಿತವಾಗಿವೆ, [QBR2] ಅವುಗಳಲ್ಲಿ ಕಪಟವೂ, ವಕ್ರತೆಯೂ ಇಲ್ಲ. [QBR]
9. ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ, [QBR2] ತಿಳಿವಳಿಕೆಯನ್ನು ಪಡೆದವರಿಗೆ ಯಥಾರ್ಥವಾಗಿಯೂ ತೋರುವವು. [QBR]
10. ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಮತ್ತು [QBR2] ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ. [QBR]
11. ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, [QBR2] ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ. [QBR]
12. ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, [QBR2] ಯುಕ್ತಿಗಳ ತಿಳಿವಳಿಕೆಯನ್ನು ಹೊಂದಿದ್ದೇನೆ. [QBR]
13. ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; [QBR2] ಗರ್ವ, ಅಹಂಭಾವ, ದುರ್ಮಾರ್ಗತನ, [QBR2] ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ. [QBR]
14. ಸದ್ಯೋಚನೆಯೂ, ಸುಜ್ಞಾನವೂ, ಸಾಮರ್ಥ್ಯವೂ ನನ್ನಲ್ಲಿವೆ, [QBR2] ವಿವೇಕವೂ ನಾನೇ. [QBR]
15. ನನ್ನ ಸಹಾಯದಿಂದ ರಾಜರು ಆಳುವರು, [QBR2] ಅಧಿಪತಿಗಳು ಸಹ ನ್ಯಾಯತೀರಿಸುವರು. [QBR]
16. ನನ್ನ ಮೂಲಕ ಪ್ರಭುಗಳು, ನಾಯಕರು [QBR2] ಅಂತು ಭೂಪತಿಗಳೆಲ್ಲರೂ ದೊರೆತನ ಮಾಡುವರು. [QBR]
17. ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, [QBR2] ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು. [QBR]
18. ನನ್ನಲ್ಲಿ ಧನ, ಘನತೆ, ಶ್ರೇಷ್ಠಸಂಪತ್ತೂ, [QBR2] ನೀತಿಯೂ ಇರುತ್ತವೆ. [QBR]
19. ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ [QBR2] ಹೌದು ಅಪರಂಜಿಗಿಂತಲೂ ಉತ್ತಮ. [QBR2] ನನ್ನ ಮೂಲಕವಾದ ಆದಾಯವು [QBR2] ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ. [QBR]
20. [* ಅಥವಾ ನಾನು ಸತ್ಯವನ್ನು ನೀತಿ ಮತ್ತು ನ್ಯಾಯ ಮಾರ್ಗಗಳಲ್ಲಿ ನಡೆಯುವಂತೆ ಮಾಡುತ್ತೇನೆ.] ನಾನು ಹಿಡಿದಿರುವ ದಾರಿಯು ನೀತಿಯೇ, [QBR2] ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ. [QBR]
21. ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ಅನುಗ್ರಹಿಸಿ, [QBR2] ಅವರ ಬೊಕ್ಕಸಗಳನ್ನು ತುಂಬಿಸುವೆನು. [QBR]
22. ಯೆಹೋವನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು; [QBR2] ಆತನ ಪುರಾತನಕಾರ್ಯಗಳಲ್ಲಿ ನಾನೇ ಪ್ರಥಮ. [QBR]
23. ಪ್ರಾರಂಭದಲ್ಲಿ, ಭೂಮಿಯು ಹುಟ್ಟುವುದಕ್ಕಿಂತ ಮುಂಚೆ, [QBR2] ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು. [QBR]
24. ಜಲನಿಧಿಗಳಾಗಲಿ, ನೀರು ತುಂಬಿದ ಬುಗ್ಗೆಗಳಾಗಲಿ [QBR2] ಇಲ್ಲದಿರುವಾಗ ನಾನು ಹುಟ್ಟಿದೆನು. [QBR]
25. ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮುಂಚೆ [QBR2] ಆತನು ಭೂಲೋಕವನ್ನಾಗಲಿ, ಬಯಲನ್ನಾಗಲಿ, [QBR]
26. ಭೂಮಿಯ ಮೊದಲನೆಯ ಅಣುರೇಣನ್ನಾಗಲಿ [QBR2] ನಿರ್ಮಿಸದೆ ಇರುವಾಗ ನಾನು ಹುಟ್ಟಿದೆನು. [QBR]
27. ಆತನು ಸಾಗರದ ಮೇಲೆ ಚಕ್ರಾಕಾರವಾದ ಗೆರೆಯನ್ನು ಎಳೆದು, [QBR2] ಆಕಾಶಮಂಡಲವನ್ನು ಸ್ಥಾಪಿಸುವಾಗ ಅಲ್ಲಿದ್ದೆನು. [QBR]
28. ಆತನು ಗಗನವನ್ನು ಮೇಲೆ ಸ್ಥಿರಪಡಿಸಿ, [QBR2] ಸಾಗರದ ಬುಗ್ಗೆಗಳನ್ನು ನೆಲೆಗೊಳಿಸಿದನು. [QBR]
29. ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ [QBR2] ಆತನು ಸಮುದ್ರಕ್ಕೆ ಮೇರೆಯನ್ನು ನೇಮಿಸಿ, [QBR2] ಭೂಮಿಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ, [QBR]
30. ನಾನು ಆತನ ಹತ್ತಿರ [† ಅಥವಾ ಪ್ರಿಯ ಮಗನು.] ಶಿಲ್ಪಿಯಾಗಿದ್ದುಕೊಂಡು [QBR2] ಪ್ರತಿದಿನವೂ ಆನಂದಿಸುತ್ತಾ, [QBR2] ಯಾವಾಗಲೂ ಆತನ ಮುಂದೆ ವಿನೋದಿಸುತ್ತಾ, [QBR]
31. ಆತನ ಭೂಲೋಕದಲ್ಲಿ ಉಲ್ಲಾಸಿಸುತ್ತಾ, [QBR2] ಮಾನವಸಂತಾನದಲ್ಲಿ ಹರ್ಷಿಸುತ್ತಾ ಇದ್ದೆನು. [QBR]
32. ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ, [QBR2] ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ. [QBR]
33. ನನ್ನ ಉಪದೇಶವನ್ನು ಕೇಳಿರಿ, [QBR2] ಅದನ್ನು ಬಿಡದೆ ಜ್ಞಾನವಂತರಾಗಿರಿ. [QBR]
34. ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ [QBR2] ಬಾಗಿಲಿನ ನಿಲವುಗಳ ಹತ್ತಿರವಿದ್ದು, [QBR2] ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು. [QBR]
35. ಯಾವನು ನನ್ನನ್ನು ಹೊಂದುತ್ತಾನೋ [QBR2] ಅವನು ಜೀವವನ್ನು ಹೊಂದುತ್ತಾನೆ; [QBR2] ಅವನು ಯೆಹೋವನ ದಯೆಗೆ ಗುರಿಯಾಗುವನು. [QBR]
36. ಯಾವನು ನನಗೆ ತಪ್ಪುಮಾಡುತ್ತಾನೋ [QBR2] ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; [QBR2] ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.” [PE]