1. {#1ಜ್ಞಾನವೆಂಬಾಕೆ ನೀಡುವ ಕರೆ } [QS]ಜ್ಞಾನವೆಂಬಾಕೆಯು ಕರೆಯುತ್ತಾಳಲ್ಲವೇ? [QE][QS2]ವಿವೇಕವೆಂಬ ಆಕೆಯು ಧ್ವನಿಗೈಯುತ್ತಾಳಲ್ಲವೇ? [QE]
2. [QS]ಆಕೆಯು ರಾಜಮಾರ್ಗಗಳ ಮುಖ್ಯಸ್ಥಾನದಲ್ಲಿ, [QE][QS2]ದಾರಿಯ ಪಕ್ಕದಲ್ಲಿ, ನಡುಬೀದಿಯಲ್ಲಿ ನಿಂತುಕೊಳ್ಳುತ್ತಾಳೆ. [QE]
3. [QS]ಆಕೆ ಪಟ್ಟಣದ ಪ್ರವೇಶ ದ್ವಾರದಲ್ಲಿ, [QE][QS2]ಬಾಗಿಲುಗಳೊಳಗೆ ಜನಸೇರುವ ಸ್ಥಳದಲ್ಲಿ ಹೀಗೆ ಕೂಗುತ್ತಾಳೆ, [QE]
4. [QS]“ಜನರೇ, ನಿಮ್ಮನ್ನೇ ಕರೆಯುತ್ತೇನೆ, [QE][QS2]ಮಾನವರಿಗಾಗಿಯೇ ಧ್ವನಿಗೈಯುತ್ತೇನೆ. [QE]
5. [QS]ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, [QE][QS2]ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ. [QE]
6. [QS]ಕೇಳಿರಿ, ನಾನು ಶ್ರೇಷ್ಠವಾದ ಸಂಗತಿಗಳನ್ನು ಹೇಳುವೆನು, [QE][QS2]ಯಥಾರ್ಥಕ್ಕಾಗಿಯೇ ತುಟಿಗಳನ್ನು ತೆರೆಯುವೆನು, [QE]
7. [QS]ನನ್ನ ಬಾಯಿ ಸತ್ಯವನ್ನೇ ಆಡುವುದು, [QE][QS2]ದುಷ್ಟತನವು ನನ್ನ ತುಟಿಗಳಿಗೆ ಅಸಹ್ಯವಾಗಿದೆ. [QE]
8. [QS]ನನ್ನ ಮಾತುಗಳೆಲ್ಲಾ ನೀತಿಭರಿತವಾಗಿವೆ, [QE][QS2]ಅವುಗಳಲ್ಲಿ ಕಪಟವೂ, ವಕ್ರತೆಯೂ ಇಲ್ಲ. [QE]
9. [QS]ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ, [QE][QS2]ತಿಳಿವಳಿಕೆಯನ್ನು ಪಡೆದವರಿಗೆ ಯಥಾರ್ಥವಾಗಿಯೂ ತೋರುವವು. [QE]
10. [QS]ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಮತ್ತು [QE][QS2]ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ. [QE]
11. [QS]ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, [QE][QS2]ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ. [QE]
12. [QS]ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, [QE][QS2]ಯುಕ್ತಿಗಳ ತಿಳಿವಳಿಕೆಯನ್ನು ಹೊಂದಿದ್ದೇನೆ. [QE]
13. [QS]ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; [QE][QS2]ಗರ್ವ, ಅಹಂಭಾವ, ದುರ್ಮಾರ್ಗತನ, [QE][QS2]ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ. [QE]
14. [QS]ಸದ್ಯೋಚನೆಯೂ, ಸುಜ್ಞಾನವೂ, ಸಾಮರ್ಥ್ಯವೂ ನನ್ನಲ್ಲಿವೆ, [QE][QS2]ವಿವೇಕವೂ ನಾನೇ. [QE]
15. [QS]ನನ್ನ ಸಹಾಯದಿಂದ ರಾಜರು ಆಳುವರು, [QE][QS2]ಅಧಿಪತಿಗಳು ಸಹ ನ್ಯಾಯತೀರಿಸುವರು. [QE]
16. [QS]ನನ್ನ ಮೂಲಕ ಪ್ರಭುಗಳು, ನಾಯಕರು [QE][QS2]ಅಂತು ಭೂಪತಿಗಳೆಲ್ಲರೂ ದೊರೆತನ ಮಾಡುವರು. [QE]
17. [QS]ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, [QE][QS2]ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು. [QE]
18. [QS]ನನ್ನಲ್ಲಿ ಧನ, ಘನತೆ, ಶ್ರೇಷ್ಠಸಂಪತ್ತೂ, [QE][QS2]ನೀತಿಯೂ ಇರುತ್ತವೆ. [QE]
19. [QS]ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ [QE][QS2]ಹೌದು ಅಪರಂಜಿಗಿಂತಲೂ ಉತ್ತಮ. [QE][QS2]ನನ್ನ ಮೂಲಕವಾದ ಆದಾಯವು [QE][QS2]ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ. [QE]
20. [QS] [* ಅಥವಾ ನಾನು ಸತ್ಯವನ್ನು ನೀತಿ ಮತ್ತು ನ್ಯಾಯ ಮಾರ್ಗಗಳಲ್ಲಿ ನಡೆಯುವಂತೆ ಮಾಡುತ್ತೇನೆ. ]ನಾನು ಹಿಡಿದಿರುವ ದಾರಿಯು ನೀತಿಯೇ, [QE][QS2]ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ. [QE]
21. [QS]ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ಅನುಗ್ರಹಿಸಿ, [QE][QS2]ಅವರ ಬೊಕ್ಕಸಗಳನ್ನು ತುಂಬಿಸುವೆನು. [QE]
22. [QS]ಯೆಹೋವನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು; [QE][QS2]ಆತನ ಪುರಾತನಕಾರ್ಯಗಳಲ್ಲಿ ನಾನೇ ಪ್ರಥಮ. [QE]
23. [QS]ಪ್ರಾರಂಭದಲ್ಲಿ, ಭೂಮಿಯು ಹುಟ್ಟುವುದಕ್ಕಿಂತ ಮುಂಚೆ, [QE][QS2]ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು. [QE]
24. [QS]ಜಲನಿಧಿಗಳಾಗಲಿ, ನೀರು ತುಂಬಿದ ಬುಗ್ಗೆಗಳಾಗಲಿ [QE][QS2]ಇಲ್ಲದಿರುವಾಗ ನಾನು ಹುಟ್ಟಿದೆನು. [QE]
25. [QS]ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮುಂಚೆ [QE][QS2]ಆತನು ಭೂಲೋಕವನ್ನಾಗಲಿ, ಬಯಲನ್ನಾಗಲಿ, [QE]
26. [QS]ಭೂಮಿಯ ಮೊದಲನೆಯ ಅಣುರೇಣನ್ನಾಗಲಿ [QE][QS2]ನಿರ್ಮಿಸದೆ ಇರುವಾಗ ನಾನು ಹುಟ್ಟಿದೆನು. [QE]
27. [QS]ಆತನು ಸಾಗರದ ಮೇಲೆ ಚಕ್ರಾಕಾರವಾದ ಗೆರೆಯನ್ನು ಎಳೆದು, [QE][QS2]ಆಕಾಶಮಂಡಲವನ್ನು ಸ್ಥಾಪಿಸುವಾಗ ಅಲ್ಲಿದ್ದೆನು. [QE]
28. [QS]ಆತನು ಗಗನವನ್ನು ಮೇಲೆ ಸ್ಥಿರಪಡಿಸಿ, [QE][QS2]ಸಾಗರದ ಬುಗ್ಗೆಗಳನ್ನು ನೆಲೆಗೊಳಿಸಿದನು. [QE]
29. [QS]ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ [QE][QS2]ಆತನು ಸಮುದ್ರಕ್ಕೆ ಮೇರೆಯನ್ನು ನೇಮಿಸಿ, [QE][QS2]ಭೂಮಿಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ, [QE]
30. [QS]ನಾನು ಆತನ ಹತ್ತಿರ [† ಅಥವಾ ಪ್ರಿಯ ಮಗನು. ]ಶಿಲ್ಪಿಯಾಗಿದ್ದುಕೊಂಡು [QE][QS2]ಪ್ರತಿದಿನವೂ ಆನಂದಿಸುತ್ತಾ, [QE][QS2]ಯಾವಾಗಲೂ ಆತನ ಮುಂದೆ ವಿನೋದಿಸುತ್ತಾ, [QE]
31. [QS]ಆತನ ಭೂಲೋಕದಲ್ಲಿ ಉಲ್ಲಾಸಿಸುತ್ತಾ, [QE][QS2]ಮಾನವಸಂತಾನದಲ್ಲಿ ಹರ್ಷಿಸುತ್ತಾ ಇದ್ದೆನು. [QE]
32. [QS]ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ, [QE][QS2]ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ. [QE]
33. [QS]ನನ್ನ ಉಪದೇಶವನ್ನು ಕೇಳಿರಿ, [QE][QS2]ಅದನ್ನು ಬಿಡದೆ ಜ್ಞಾನವಂತರಾಗಿರಿ. [QE]
34. [QS]ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ [QE][QS2]ಬಾಗಿಲಿನ ನಿಲವುಗಳ ಹತ್ತಿರವಿದ್ದು, [QE][QS2]ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು. [QE]
35. [QS]ಯಾವನು ನನ್ನನ್ನು ಹೊಂದುತ್ತಾನೋ [QE][QS2]ಅವನು ಜೀವವನ್ನು ಹೊಂದುತ್ತಾನೆ; [QE][QS2]ಅವನು ಯೆಹೋವನ ದಯೆಗೆ ಗುರಿಯಾಗುವನು. [QE]
36. [QS]ಯಾವನು ನನಗೆ ತಪ್ಪುಮಾಡುತ್ತಾನೋ [QE][QS2]ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; [QE][QS2]ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.” [QE]