ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#3ಪ್ರಥಮ ಭಾಗವು (1 - 41) }{#1ಸನ್ಮಾರ್ಗಸ್ಥರು ಮತ್ತು ದುರ್ಮಾರ್ಗಸ್ಥರು [BR]ಯೆರೆ 17:5-8; ಮತ್ತಾ 7:13,14 } [QS]ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, [QE][QS]ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, [QE][QS]ಧರ್ಮನಿಂದಕರೊಡನೆ ಕುಳಿತುಕೊಳ್ಳದೆ, [QE]
2. [QS]ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, [QE][QS]ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು. [QE]
3. [QS]ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. [QE][QS]ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. [QE][QS]ಅದರ ಎಲೆ ಬಾಡುವುದೇ ಇಲ್ಲ. [QE][QS]ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು. [QE]
4. [QS]ದುಷ್ಟರೋ ಹಾಗಲ್ಲ; [QE][QS]ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ. [QE]
5. [QS]ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ, [QE][QS]ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ. [QE]
6. [QS]ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; [QE][QS]ದುಷ್ಟರ ಮಾರ್ಗವೋ ನಾಶವಾಗುವುದು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 150
ಪ್ರಥಮ ಭಾಗವು (1 - 41) ಸನ್ಮಾರ್ಗಸ್ಥರು ಮತ್ತು ದುರ್ಮಾರ್ಗಸ್ಥರು
ಯೆರೆ 17:5-8; ಮತ್ತಾ 7:13,14

1 ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ, 2 ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು. 3 ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು. 4 ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ. 5 ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ, ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ. 6 ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 150
×

Alert

×

Kannada Letters Keypad References