1. ಯೆಹೋವನೇ, ನೀನು ಏಕೆ ದೂರವಾಗಿ ನಿಂತಿದ್ದೀ? [QBR] ಕಷ್ಟಕಾಲದಲ್ಲಿ ಏಕೆ ಮರೆಯಾಗುತ್ತೀ? [QBR]
2. ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; [QBR] ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ. [QBR]
3. ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; [QBR] [* ಅಥವಾ ದುಷ್ಟನು ಲಾಭಬಡುಕನನ್ನು ಹರಸುತ್ತಾನೆ.] ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ. [QBR]
4. ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನನ್ನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, [QBR] ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ. [QBR]
5. ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; [QBR] ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ [QBR] ಅದು ಅವನ ಗ್ರಹಿಕೆಗೆ ಬರುವುದಿಲ್ಲ; [QBR] ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ. [QBR]
6. ಅವನು, “ನಾನು ಕದಲುವುದೇ ಇಲ್ಲ; [QBR] ನನಗೆ ವಿಪತ್ತು ಎಂದೆಂದಿಗೂ ಸಂಭವಿಸುವುದಿಲ್ಲ” ಅಂದುಕೊಂಡಿದ್ದಾನೆ. [QBR]
7. ಅವನ ಬಾಯಿಯು ಶಾಪ, ಬಲಾತ್ಕಾರ ಮತ್ತು ವಂಚನೆಗಳಿಂದ ತುಂಬಿದೆ; [QBR] ಅವನ ನಾಲಿಗೆಯ ಕೆಳಗೆ ಹಾನಿಯೂ, ನಾಶನವೂ ಇವೆ. [QBR]
8. ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು, [QBR] ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. [QBR] ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ. [QBR]
9. ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು. [QBR] ಅವನು ಬಲೆಯೊಡ್ಡಿ ಕಾದಿದ್ದು, ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ. [QBR]
10. ಕುಗ್ಗಿದವನು ಜಜ್ಜಲ್ಪಟ್ಟು ಉರುಳಿಕೊಳ್ಳುತ್ತಾನೆ, [QBR] ಗತಿಯಿಲ್ಲದವನು ಅವನ ಬಲಾತ್ಕಾರದಿಂದ ಬಿದ್ದು ಹೋಗುತ್ತಾನೆ. [QBR]
11. ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; [QBR] ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ. [QBR]
12. ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ; [QBR] ಅವನನ್ನು ರಕ್ಷಿಸುವುದಕ್ಕೆ ಕೈಚಾಚು. [QBR]
13. “ದೇವರು ವಿಚಾರಿಸುವುದೇ ಇಲ್ಲ” ಎಂದು ಹೇಳುತ್ತಾ, [QBR] ದುಷ್ಟನು ನಿನ್ನನ್ನು ಏಕೆ ಅಲಕ್ಷ್ಯಮಾಡಬೇಕು? [QBR]
14. ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; [QBR] ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; [QBR] ದಿಕ್ಕಿಲ್ಲದವನಿಗೆ ನೀನೇ ದಿಕ್ಕು. [QBR]
15. ದುಷ್ಟನ ಭುಜಬಲವನ್ನು ಮುರಿದುಹಾಕು, [QBR] ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲಮಾಡಿಬಿಡು. [QBR]
16. ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; [QBR] ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು. [QBR]
17. ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; [QBR] ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ. [QBR]
18. ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ. [QBR] ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ. [PE]