2. ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ;
ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ. |
3. ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ;
* ಅಥವಾ ದುಷ್ಟನು ಲಾಭಬಡುಕನನ್ನು ಹರಸುತ್ತಾನೆ. ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ. |
4. ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನನ್ನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು,
ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ. |
5. ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ;
ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ ಅದು ಅವನ ಗ್ರಹಿಕೆಗೆ ಬರುವುದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ. |
8. ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು,
ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ. |
9. ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು.
ಅವನು ಬಲೆಯೊಡ್ಡಿ ಕಾದಿದ್ದು, ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ. |
11. ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ;
ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ. |
14. ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ;
ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು. |
17. ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ;
ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ. |
18. ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ.
ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ. PE |